ಧಾರವಾಡ | ವಿದ್ಯಾರ್ಥಿ ವೇತನ ಒದಗಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

Date:

Advertisements

ಎಲ್ಲ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನವನ್ನು ಖಾತ್ರಿಪಡಿಸಲು ಆಗ್ರಹಿಸಿ ಧಾರವಾಡ ಜಿಲ್ಲಾಡಧಿಕಾರಿ ಕಚೇರಿ ಎದರು ಎಐಡಿಎಸ್ಓ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಶಶಿಕಲಾ ಮೇಟಿ, “ಸರಿಯಾಗಿ ಮಳೆ ಬಾರದೆ, ಕೂಲಿ ಕೆಲಸವೂ ದೊರೆಯದೆ ಜಿಲ್ಲೆಯ ರೈತ ಕಾರ್ಮಿಕರು ತತ್ತರಿಸಿ ಹೋಗಿದ್ದಾರೆ. ದಿನೇ ದಿನೇ ಹೆಚ್ಚುತ್ತಿರುವ ಬೆಲೆ ಏರಿಕೆ ಜನರ ಜೀವನವನ್ನು ಇನ್ನಷ್ಟು ದುಸ್ತರಗೊಳಿಸಿದೆ. ಶಿಕ್ಷಣದ ಶುಲ್ಕಗಳು ಗಗನಕ್ಕೇರಿದೆ. ವೆಚ್ಚಗಳನ್ನು ಬರಿಸಲಾಗದೆ ಶಾಲಾ ಕಾಲೇಜುಗಳನ್ನು ದೊರೆಯುತ್ತಿರುವ ಎಷ್ಟೋ ಬಡ ಮಕ್ಕಳು, ಕುಟುಂಬಕ್ಕೆ ನೆರವಾಗಲು ದಿನಗೂಲಿ ಕೆಲಸಗಳಿಗೆ ಹೋಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜನಗಳ ಕೈಹಿಡಿಯುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವಾಗಲು ಸೌಲಭ್ಯಗಳನ್ನು ಹೆಚ್ಚಿಸಬೇಕಿದ್ದ ರಾಜ್ಯ ಸರ್ಕಾರವು ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸುತ್ತಿದೆ! ಪಿಯು, ಡಿಗ್ರಿ, ಡಿಪ್ಲೋಮ ಸೇರಿದಂತೆ ಹಲವಾರು ಕೋರ್ಸ್ ಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಮತ್ತು ಇತರೆ ಹಿಂದುಳಿದ ವರ್ಗ ಸೇರಿದಂತೆ ವಿವಿಧ ಸಮುದಾಯಗಳ ವಿದ್ಯಾರ್ಥಿಗಳಿಗೆ ದೊರೆಯಬೇಕಿದ್ದ ಕಳೆದ ವರ್ಷದ ವಿದ್ಯಾರ್ಥಿ ವೇತನ ಇನ್ನೂ ದೊರೆತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ಈ ವರ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಸಾಕಷ್ಟು ತಾಂತ್ರಿಕ ದೋಷಗಳಿಂದ ಕೂಡಿದ್ದು ಎಷ್ಟೋ ವಿದ್ಯಾರ್ಥಿಗಳ ಅರ್ಜಿಯು ಸ್ವಿಕೃತವಾಗದೆ ದಿಕ್ಕು ತೋಚದ ಪರಿಸ್ಥಿತಿಗೆ ವಿದ್ಯಾರ್ಥಿಗಳು ತಳಲ್ಪಟ್ಟಿದ್ದಾರೆ. ಇದಷ್ಟೇ ಅಲ್ಲದೆ, ಗಾಯದ ಮೇಲೆ ಬರೆ ಎಳೆದಂತೆ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಲ್ಲಬೇಕೆಂದ ಶಿಷ್ಯವೇತನದ ಮೊತ್ತವನ್ನು ರಾಜ್ಯ ಸರ್ಕಾರವು ಕಡಿತಗೊಳಿಸಿದೆ. ಪ್ರತಿ ವಿದ್ಯಾರ್ಥಿಗೆ ವಾರ್ಷಿಕ 5,000ದಿಂದ 60,000ದವರೆಗೆ ವಿತರಿಸಲ್ಪಡುತ್ತಿದ್ದ ವಿದ್ಯಾರ್ಥಿ ವೇತನದ ಮೊತ್ತವನ್ನು 1100 ರಿಂದ 11,000ಕ್ಕೆ ಇಳಿಸಲಾಗಿದೆ” ಎಂದು ಕಿಡಿಕಾರಿದರು.

“ಜನಸಾಮಾನ್ಯರಿಂದ ಸಂಗ್ರಹವಾಗಿರುವ ತೆರಿಗೆ ದುಡ್ಡನ್ನು ಶಿಕ್ಷಣಕ್ಕೆ ಆದ್ಯತೆ ನೀಡಿ ಸರ್ಕಾರವು ವಿನಿಯೋಗಿಸಬೇಕು. ಸೆಸ್ ಹೆಸರಲ್ಲಿ ಸಂಗ್ರಹವಾಗುತ್ತಿರುವ ಹಣವು ಕಾರ್ಮಿಕ ನಿಧಿಯಲ್ಲಿ ಹೇರಳವಾಗಿ ಶೇಖರಣೆಯಾಗುತ್ತಿದೆ. ಇದು ಕಾರ್ಮಿಕರ ಬೆವರಿನ ಫಲ. ಮತ್ತು ಇದನ್ನು ಸಂಪೂರ್ಣವಾಗಿ ಅವರ ಏಳಿಗೆಗೆ ಬಳಸಬೇಕು. ಘನ ಸರ್ಕಾರವು ಈ ಕುರಿತು ಗಮನ ಹರಿಸಿ ಕೂಡಲೇ ವಿದ್ಯಾರ್ಥಿ ವೇತನಗಳನ್ನು ಮಂಜೂರು ಮಾಡಬೇಕು ಮತ್ತು ಕಡಿತಗೊಳಿಸಿರುವ ಕಾರ್ಮಿಕರ ಮಕ್ಕಳ ಶಿಷ್ಯವೇತನದ ಮೊತ್ತವನ್ನು ಹೆಚ್ಚಿಸಬೇಕು” ಎಂದು ಆಗ್ರಹಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X