ಕೇಂದ್ರ, ರಾಜ್ಯ ಸರ್ಕಾರದ ಇಲಾಖೆಗಳಲ್ಲಿರುವ ಖಾಲಿ ಹುದ್ದೆ ಭರ್ತಿಗೆ ಎಐಡಿವೈಒ ಆಗ್ರಹ: ಸಹಿ ಅಭಿಯಾನ

Date:

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಎಐಡಿವೈಒ ಸಂಘಟನೆಯಿಂದ ವಿಜಯಪುರ ನಗರದಲ್ಲಿ ಸಹಿ ಅಭಿಯಾನ ಆರಂಭಿಸಲಾಯಿತು.

- Advertisement -

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸಿದ್ದರಾಮಯ್ಯ ಹಿರೇಮಠ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ್ದು, “ಯುವಜನರು ನಿರುದ್ಯೋಗದಿಂದ ಕಂಗಾಲಾಗಿದ್ದಾರೆ. ಆಳುವ ಸರ್ಕಾರಗಳು ಬಿಕ್ಕಟ್ಟನ್ನು ಪರಿಹರಿಸುವ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕಾರ್ಪೊರೇಟ್ ಪರ ನೀತಿಗಳನ್ನು ಜಾರಿಗೊಳಿಸುತ್ತ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತಿವೆ. ನಿರುದ್ಯೋಗ ಮತ್ತು ಭ್ರಷ್ಟಾಚಾರ ತೀವ್ರವಾಗಿ ಹೆಚ್ಚುತ್ತಿವೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಎಸ್ಎಸ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಉದ್ಯೋಗ ಆಕಾಂಕ್ಷಿಗಳು ಉತ್ತರಾಖಂಡದ ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿ ಯುವಜನರು ಬೀದಿಗಳಿದಿದ್ದಾರೆ. ಲಡಾಖ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಲ್ಲಿಯೂ ನಿರುದ್ಯೋಗ ಪ್ರಮುಖ ಸಮಸ್ಯೆಯಾಗಿದೆ” ಎಂದರು.

ಎಐಡಿವೈಒ ಜಿಲ್ಲಾಧ್ಯಕ್ಷ ಶ್ರೀಕಾಂತ್ ಕೊಂಡುಗುಳಿ ಮಾತನಾಡಿ, “ಕೇಂದ್ರ ಸರ್ಕಾರ 78 ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ 9.79 ಲಕ್ಷಕ್ಕೂ ಅಧಿಕ ಉದ್ಯೋಗಗಳು ಖಾಲಿ ಇರುವುದಾಗಿ ಹಣಕಾಸು ಸಚಿವಾಲಯದ ವರದಿ ಬಹಿರಂಗಪಡಿಸಿದೆ. ರೈಲ್ವೆ ಇಲಾಖೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಎಲ್ಲ ರಾಜ್ಯಗಳಲ್ಲಿಯೂ ಇದೇ ಪರಿಸ್ಥಿತಿ ಇದೆ. ಕರ್ನಾಟಕದಲ್ಲಿಯೂ ಹೀಗೆಯೇ ಇದೆ. ಆದರೂ ರಾಜ್ಯ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ” ಎಂದು ದೂರಿದರು.

“ರಾಜ್ಯದ 43 ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ ಬಿದ್ದಿವೆ. ಅವುಗಳ ನೇಮಕಕ್ಕೆ ಪ್ರಯತ್ನ ನಡೆದಿಲ್ಲ. ಒಂದಿಲ್ಲೊಂದು ನೆಪ ಹೇಳುತ್ತ ನೇಮಕಾತಿಗಳನ್ನು ಮುಂದೂಡಲಾಗುತ್ತಿದೆ. ಈ ಕೂಡಲೇ ಭರ್ತಿಗೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿದ್ದೀರಾ? ಐಕ್ಯತೆಗೆ ಸಾಕ್ಷಿಯಾದ ಗುರ್ಲಾಪೂರ: ಐತಿಹಾಸಿಕ ರೈತ ಹೋರಾಟಗಳ ಪಟ್ಟಿ ಸೇರಿದ ಕಬ್ಬು ಬೆಳೆಗಾರರ ಧರಣಿ

“ನಿರುದ್ಯೋಗಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಲೇ ಇವೆ. 2014ರಲ್ಲಿ ಎರಡು ಕೋಟಿ ಉದ್ಯೋಗಗಳ ಭರವಸೆ ನೀಡಿದ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ. ಅಸ್ತಿತ್ವದಲ್ಲಿರುವ ಉದ್ಯೋಗಗಳನ್ನು ವ್ಯವಸ್ಥಿತವಾಗಿ ತೆಗೆದು ಹಾಕಿದೆ. ಖಾಲಿ ಉದ್ಯೋಗಗಳನ್ನು ರದ್ದುಗೊಳಿಸಿದೆ” ಎಂದು ಕುಟುಕಿದರು.

ಈ ವೇಳೆ ಚೇತನ್ ರಾಠೋಡ, ಪ್ರದೀಪ ಕಂಠೀಕರ್, ಶಶಿಕುಮಾರ ತೋಟದ, ಅರವಿಂದ ರಾಠೋಡ್, ರವಿ ಹೊಸಮನಿ, ಶೋಭಾ ಬಿದರಿ, ಕಾವೇರಿ ಚೌಹಾಣ್, ಮಂಜುನಾಥ ಬಬಲೇಶ್ವರ, ರಿಯಾಜ್ ಹಿಪ್ಪರಗಿ, ದರ್ಶನ ಉಪ್ಪಾರ, ಸಚಿನ ದೊಡ್ಡಮನಿ ಸೇರಿದಂತೆ ನೂರಾರು ಯುವಜನರು ಸಹಿ ಮಾಡುವ ಮೂಲಕ ಅಭಿಯಾನದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...