ರಾಯಚೂರು | ಕುಸ್ತಿಪಟುಗಳ ಹೋರಾಟಕ್ಕೆ ಎಐಡಿವೈಒ ಬೆಂಬಲ

Date:

  • ದೆಹಲಿಯಲ್ಲಿ ಲೈಂಗಿಕ ದೌರ್ಜನ್ಯ ವಿರುದ್ಧ ಐದು ದಿನಗಳಿಂದ ಧರಣಿ
  • ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿಲ್ಲ, ಆರೋಪಿಗಳ ಬಂಧಿಸಿಲ್ಲ

ಕ್ರೀಡಾಕ್ಷೇತ್ರದಲ್ಲಿನ ಲೈಂಗಿಕ ದೌರ್ಜನ್ಯ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಕ್ರೀಡಾಪಟುಗಳು ಕಳೆದ ಐದು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಹೋರಾಟಕ್ಕೆ ಯುವ ಸಂಘಟನೆಯಾದ ಎಐಡಿವೈಒ ಬೆಂಬಲಿಸಿದ್ದು, ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದೆ.

“ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಕೆಲವು ತರಬೇತುದಾರರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ದೆಹಲಿಯಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ದೆಹಲಿ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಅಲ್ಲದೇ, ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಿಸಿಲ್ಲ” ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ರಾಯಚೂರು ಜಿಲ್ಲಾ ಸಮಿತಿ ಸದಸ್ಯ ವಿನೋದ್‌ ಕುಮಾರ್‌ ಮಾತನಾಡಿ, “ಕೇಂದ್ರದ ಆಡಳಿತರೂಢ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್‌ ಪ್ರಭಾವಕ್ಕೆ ಪೊಲೀಸರು ಮಣಿದಿದ್ದಾರೆ ಎನ್ನುವ ಅನುಮಾನ ಮೂಡುತ್ತಿದೆ. ವಿಶ್ವ ಚಾಂಪಿಯನ್‌ಶಿಪ್‌, ಒಲಂಪಿಕ್ಸ್ ಹಾಗೂ ಏಷ್ಯನ್ ಕ್ರೀಡಾಕೂಟಗಳಲ್ಲಿ ಪದಕ ಗಳಿಸಿರುವ ಈ ಕುಸ್ತಿಪಟುಗಳು ನೀಡಿರುವ ದೂರು ಮತ್ತು ಹೋರಾಟಕ್ಕೆ ಬೆಲೆ ಇಲ್ಲದಂತಾಗಿದೆ” ಎಂದು ಅಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ದೂರು ನೀಡಿರುವ ಏಳು ಸಂತ್ರಸ್ತೆಯರಲ್ಲಿ ಒಬ್ಬ ಬಾಲಕಿಯು ಇದ್ದಾಳೆ. ಅಲ್ಲದೆ, ಈ ಪ್ರಕರಣ ಪೋಕ್ಸೋ ಕಾಯ್ದೆ ಅಡಿಯಲ್ಲಿ ಬರುತ್ತದೆ. ಇಷ್ಟಾದರೂ ಪೊಲೀಸರು ಕ್ರಮ ಕೈಗೊಳ್ಳದಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಹಿಂದೆ ಈ ಪ್ರಕರಣದ ತನಿಖೆ ನಡೆಸಿದ ಮೇರಿಕೋಂ ಸಮಿತಿಯ ವರದಿಯನ್ನು ಕ್ರೀಡಾ ಇಲಾಖೆ ಬಹಿರಂಗಪಡಿಸಿಲ್ಲ. ಇದು ಮತ್ತಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ” ಎಂದು ಆರೋಪಿಸಿದರು.

ಚನ್ನಬಸವ ಜಾನೇಕಲ್‌ ಮಾತಾನಾಡಿ, “ಬೇಟಿ ಬಚಾವೋ ಬೇಟಿ ಪಡಾವೋ ಎಂದು ಘೋಷಣೆ ನೀಡಿರುವ ಸರ್ಕಾರವು ಕ್ರೀಡೆಯಲ್ಲಿ ಹೆಣ್ಣು ಮಕ್ಕಳ ಸಾಧನೆಗೆ ಪೂರಕವಾಗಿ ಸುರಕ್ಷಿತ ವಾತಾವರಣ ಸೃಷ್ಟಿಸಿ ಕೊಡುವುದು ತನ್ನ ಆದ್ಯ ಕರ್ತವ್ಯ, ಆದರೆ ಕುಸ್ತಿಪಟುಗಳು ಎರಡು ಬಾರಿ ರಸ್ತೆಗಳಿದು ಧರಣಿ ನಡೆಸಿದರೂ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಆಳುವವರ ಈ ಧೊರಣೆಯು ಮಹಿಳೆಯರ ಬಗ್ಗೆ ತಮಗಿರುವ ತಾತ್ಸಾರದ ಭಾವನೆಯನ್ನು ತೋರುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಲೈಂಗಿಕ ದೌರ್ಜನ್ಯದ ವಿರುದ್ದ ಪ್ರತಿಭಟಿಸಿದರೆ ದೇಶದ ವರ್ಚಸ್ಸು ಹಾಳಾಗುತ್ತದೆಯೇ!

“ಇಂಥ ಘಟನೆಗಳಿಂದ ಕ್ರೀಡಾಂಗದಲ್ಲಿ ಹೆಣ್ಣು ಮಕ್ಕಳ ಸಾಧನೆ ಹಿಂದೆ ಬೀಳುತ್ತದೆ. ಇಂತಹ ಅನ್ಯಾಯದ ವಿರುದ್ಧ ಧರಣಿ ನಡೆಸುತ್ತಿರುವ ಕುಸ್ತಿಪಟುಗಳ ಜೊತೆಯಲ್ಲಿ ನಮ್ಮ ಸಂಘಟನೆ ಆಲ್ ಇಂಡಿಯಾ ಡೆಮಕ್ರೆಟಿಕ್ ಯೂಥ್ ಆರ್ಗನೈಸೇಷನ್ (ಎಐಡಿವೈಒ) ಇದನ್ನು ಖಂಡಿಸುತ್ತದೆ” ಎಂದು ಕಿಡಿಕಾರಿದ್ದಾರೆ.

“ದೇಶದಾದ್ಯಂತ ಕುಸ್ತಿಪಟುಗಳ ಹೋರಾಟವನ್ನು ಬೆಂಬಲಿಸಲು ಪ್ರತಿಭಟನಾ ದಿನವನ್ನು ನಡೆಸಲಾಗುತ್ತಿದೆ. ಸರ್ಕಾರವು ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಪರಾಧಿಗಳಿಗೆ ಶಿಕ್ಷೆ ನೀಡಿ ಹೆಣ್ಣು ಮಕ್ಕಳು ಧೈರ್ಯದಿಂದ ಕ್ರೀಡಾ ಸಾಧನೆಯನ್ನು ನಿರ್ಮಿಸುವಂತೆ ಮಾಡಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಐಡಿವೈಓ ರಾಜ್ಯ ಅಧ್ಯಕ್ಷ ಶರಣಪ್ಪ, ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್, ಜಿಲ್ಲಾ ಕಾರ್ಯದರ್ಶಿ ಯಲ್ಲಪ್ಪ ಹಾಗೂ ಇತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ‘ಸೊಳ್ಳೆ ಉತ್ಪಾದನಾ ಕೇಂದ್ರ’ವಾದ ವೈದ್ಯಕೀಯ ಕಾಲೇಜು; ಕಣ್ಮುಚ್ಚಿ ಕುಳಿತ ಅಧಿಕಾರಿಗಳು!

ಇಡೀ ರಾಜ್ಯದಲ್ಲಿ ಡೆಂಘೀ ಜ್ವರ ಹರಡುತ್ತಾ ಇರುವಾಗ ನೈರ್ಮಲ್ಯ ಕಾಪಾಡಿ, ನೀರು...

ವಿಜಯಪುರ | ಎನ್‌ಎಸ್‌ಎಸ್ ಸ್ವಯಂ ಸೇವಕರಲ್ಲಿ ತಾಳ್ಮೆ, ಶಿಸ್ತಿನ ಜೊತೆಗೆ ಧೈರ್ಯ ತುಂಬುತ್ತದೆ: ಡಾ.ಪ್ರತಾಪ್ ಲಿಂಗಯ್ಯ

"ಎನ್‌ಎಸ್‌ಎಸ್ ಎಂಬುದು ಮನುಷ್ಯನಲ್ಲಿ ಸಹನೆ, ತಾಳ್ಮೆ ಹಾಗೂ ಶಿಸ್ತಿನ ಜೊತೆಗೆ ಧೈರ್ಯವನ್ನು...

ವಿಜಯಪುರ | ನೂತನ ವಸತಿ ನಿಲಯ ಮಂಜೂರು ಮಾಡುವಂತೆ ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ವಿಜಯಪುರ ನಗರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಹಿಂದುಳಿದ ವರ್ಗಗಳ ಮತ್ತು...

ಚಿಕ್ಕಬಳ್ಳಾಪುರ | ಶಾಶ್ವತ ನೀರಾವರಿ ಯೋಜನೆಗಾಗಿ ಪ್ರಧಾನಿ ಭೇಟಿ : ಶಾಸಕ ಸಮೃದ್ಧಿ ಮಂಜುನಾಥ್‌ ವಾಗ್ದಾನ

"ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ತರುವ ಕುರಿತು ಪ್ರಧಾನಿ ಮೋದಿ ಭೇಟಿಗೆ...