ಗುಜರಾತ್‌ನ ಅಹಮದಾಬಾದ್‌ನಲ್ಲಿ ಗುರುವಾರ ನಡೆದ ಏರ್ ಇಂಡಿಯಾ ವಿಮಾನ ದುರಂತದ ನೈತಿಕ ಹೊಣೆ ಹೊತ್ತು ಕೇಂದ್ರ ವಿಮಾನಯಾನ ಖಾತೆ ಸಚಿವ ರಾಮ ಮೋಹನ್ ನಾಯ್ಡು ಕೂಡಲೇ ರಾಜೀನಾಮೆ ನೀಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ಚರ ಖಂಡ್ರೆ ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿ ಅವರು, ʼಈ ವಿಮಾನ ದುರಂತ ಘಟನೆಗೆ ಕೇಂದ್ರ ಸರ್ಕಾರ ನೈತಿಕ ಹೊಣೆ ಹೊರಬೇಕು ಹಾಗೂ ವಿಮಾನಯಾನ ಸಚಿವರು ರಾಜೀನಾಮೆ ನೀಡಬೇಕು. ಇದು ಒಂದು ಅತಿದೊಡ್ಡ ದುರಂತವಾಗಿದೆ. ಅತ್ಯಂತ ನೋವಿನ ಸಂಗತಿಯಾಗಿದೆ. ಇಂತಹ ದುರಂತ ನಡೆಯದಂತೆ ಸರ್ಕಾರ ಕ್ರಮ ಜರುಗಿಸಬೇಕುʼ ಎಂದು ಆಗ್ರಹಿಸಿದರು.
ಆರ್‌ಸಿಬಿ ಗೆಲುವಿನ ಸಂಭ್ರಮದ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೇಳುವವರು ಕುಂಭಮೇಳದ ಕಾಲ್ತುಳಿತಕ್ಕೂ ರಾಜೀನಾಮೆ ಕೇಳಬೇಕು. ಸಾವಿನಲ್ಲಿ ರಾಜಕೀಯ ಮಾಡಬಾರದು ಬಿಜೆಪಿಗೆ ತಿರುಗೇಟು ನೀಡಿದರು.
ಇದನ್ನೂ ಓದಿ : ಯಾದಗಿರಿ | ₹440 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಯೋಜನೆಗೆ ನಾಳೆ ಸಿಎಂ ಸಿದ್ದರಾಮಯ್ಯ ಚಾಲನೆ
ʼದುರಂತದ ಬೆನ್ನಲ್ಲೇ ಟಾಟಾ ಸಮೂಹ ಪ್ರತಿ ಮೃತ ವ್ಯಕ್ತಿಯ ಸಂತ್ರಸ್ತ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದೆ. ಹಾಗಂತ ಸಂತ್ರಸ್ತ ಕುಟುಂಬಗಳಿಗೆ ಇಂತಹ ದುರಂತದ ಬಳಿಕ ಎಷ್ಟೇ ಕೋಟಿ ಕೊಟ್ಟರೂ ಕಡಿಮೆʼ ಎಂದರು