ಜಾತಿ ವ್ಯವಸ್ಥೆ ಪ್ರತಿಪಾದಿಸುವಂತೆ ಹೇಳಿಕೆ: ಸಂಸದ ಗೋವಿಂದ ಕಾರಜೋಳ ವಿರುದ್ಧ ಕ್ರಮಕ್ಕೆ ಎಐಎಸ್‌ಎ ಆಗ್ರಹ

Date:

Advertisements

ಇತ್ತೀಚೆಗೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಬಿಜೆಪಿ ಸಂಸದರಾದ ಗೋವಿಂದ ಕಾರಜೋಳ ಮಾತನಾಡುತ್ತಾ, “ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವೀಡಿಯೋಗಳನ್ನು ನಾನು ನೋಡಿದ್ದೇನೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಪೊರಕೆ ನೀಡುವುದು ಅಪರಾಧ ಎಂಬಂತೆ ಕಾಣಲಾಗುತ್ತಿದೆ. ಇದರಿಂದ ಸ್ವಚ್ಛತೆಯ ಕೆಲಸ ಕೀಳು ಎಂಬ ಭಾವನೆ ಮೂಡಿದೆ. ಜಪಾನ್ ನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಶೌಚಾಲಯ ‌ಸ್ವಚ್ಚಗೊಳಿಸುತ್ತಾರೆ” ಎಂಬುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ಓರ್ವ ಜನಪ್ರತಿನಿಧಿಯಾಗಿರುವ ಗೋವಿಂದ ಕಾರಜೋಳರ‌ ಈ ಕೀಳುಮಟ್ಟದ ಹೇಳಿಕೆಯನ್ನು ಖಂಡಿಸುವುದಾಗಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ(AISA) ತಿಳಿಸಿದೆ.

ಗುಣಮಟ್ಟದ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಹಕ್ಕಾಗಿದ್ದು, ಇತ್ತೀಚಿನ ದಿನಗಳಲ್ಲಿ ಶಾಲೆಯಿಂದ ಹೊರಗುಳಿಯುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಸರಕಾರಿ ಶಾಲೆಗಳು ಮುಚ್ಚಲ್ಪಡುತ್ತಿದೆ. ಇದರಿಂದಾಗ ದಲಿತ, ಬಡ ವರ್ಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಂತಹ ಸಂಧರ್ಭದಲ್ಲಿ ಜವಾಬ್ದಾರಿಯುತ ಜನಪ್ರತಿನಿಧಿಗಳು ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಬೇಕಾಗುವ ಕ್ರಮಗಳ ಬಗ್ಗೆ ಮಾತನಾಡುವ ಬದಲು ಶೌಚಾಲಯ ಸ್ವಚ್ಚಮಾಡಲು ವಿದ್ಯಾರ್ಥಿಗಳನ್ನು ತೊಡಗಿಸುವಂತೆ ಹೇಳಿಕೆ ನೀಡುವುದರಿಂದ ದಲಿತ ಬಡ ವಿದ್ಯಾರ್ಥಿಗಳೇ ಇದರಿಂದ ತೊಂದರೆಗೆ ಒಳಗಾಗಿ ಶಿಕ್ಷಣದಿಂದ ವಂಚಿತರಾಗಬೇಕಾಗುತ್ತದೆ ಎಂದು ತಿಳಿಸಿದೆ.

Advertisements

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವುದನ್ನು ಈಗಾಗಲೇ ನಿಷೇಧಿಸಿ ಆದೇಶ ಮಾಡಲಾಗಿದೆ ಹಾಗೂ ಮಕ್ಕಳನ್ನು ಇಂತಹ ಕೆಲಸಗಳಲ್ಲಿ ತೊಡಗಿಸುವುದು ಮಕ್ಕಳ ಹಕ್ಕುಗಳ ಉಲ್ಲಂಘನೆ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009ರ ಸೆಕ್ಷನ್ 17ರ ಉಲ್ಲಂಘನೆಯಾಗುತ್ತದೆ. ಗೋವಿಂದ ಕಾರಜೋಳರ ಈ ಹೇಳಿಕೆ ಅವರು ‌ಮತ್ತು ಅವರ ಪಕ್ಷ ಯಾವ ಸಿದ್ದಾಂತವನ್ನು ಪ್ರತಿಪಾದಿಸುತ್ತದೆ‌ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದು ಐಸಾ ತಿಳಿಸಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಹನಿಟ್ರ್ಯಾಪ್ ಪ್ರಕರಣ: ದಲಿತ ಸೇನೆಯ ರಾಜ್ಯಾಧ್ಯಕ್ಷ ಯಳಸಂಗಿ ಸೇರಿ 6 ಮಂದಿ ಪೊಲೀಸರಿಗೆ ಶರಣು

ಕಳೆದ ಬಿ.ಜೆ.ಪಿ‌ ಸರಕಾರದ ಅವಧಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(NEP) ಜಾರಿಗೆ ತಂದಿದ್ದು, ಇದರಲ್ಲಿ ಜಾತಿ ಮತ್ತು ವೃತ್ತಿ ಆಧಾರಿತ ಕುಲ ಕಸುಬನ್ನು ಸಮರ್ಥಿಸಲಾಗಿದೆ. ಪೋಷಕರು ಒಂದು ವೃತ್ತಿಯನ್ನು‌ ಮಾಡುತ್ತಿದ್ದರೆ ಅವರ‌ ಮಕ್ಕಳು ಕೂಡಾ ಅದೇ ವೃತ್ತಿಯನ್ನು ಮಾಡಬೇಕು ಎನ್ನುವ ನೀತಿ ಇದಾಗಿದೆ. ಈ ರೀತಿಯಲ್ಲಿ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಮೂಲಕ ಮನುವಾದಿ ಆಳ್ವಿಕೆಗೆ ಪೂರಕವಾಗುವ ಹೇಳಿಕೆ ಇದಾಗಿದ್ದು, ಸಾಂವಿಧಾನಿಕ ವ್ಯವಸ್ಥೆಯ ಅಡಿಯಲ್ಲಿ ಜನಪ್ರತಿನಿಧಿಯಾಗಿ ಆಯ್ಕೆಯಾಗಿರುವ ವ್ಯಕ್ತಿಯು ಇಂತಹ ಹೇಳಿಕೆ ನೀಡಿರುವುದು ಖಂಡನೀಯ. ಕೂಡಲೇ ಸಂಸದ ಗೋವಿಂದ ಕಾರಜೋಳ ರವರ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (AISA) ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕೊಡಲಿ ಕಾವು ಕುಲಕ್ಕೆ ಮೃತ್ಯು,,,ಗಾದೆ ಮಾತಿದೆ, ಇವರೆಲ್ಲ ಮನುವಾದ ಮೈಮೇಲೆ ಎಳಕೊಂಡು ಸ್ವಾಭಿಮಾನ ಬಿಟ್ಟವರು,,ಇದೇ ಹೇಳಿಕೆಯನ್ನು ತಮ್ಮ ಪಕ್ಷದ ವೈದಿಕರ ಬಗ್ಗೆ ಹೇಳಲಿ,,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X