ಗುಬ್ಬಿ ಪಪಂ ಅಧ್ಯಕ್ಷರಾಗಿ ಆಯಿಷಾ ತಾಸೀನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧ ಆಯ್ಕೆ

Date:

Advertisements

ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಗಾದಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಆಯಿಷಾ ತಾಸೀನ್ ಅಧ್ಯಕ್ಷರಾಗಿ ಮತ್ತು ಶ್ವೇತಾ ಜಗದೀಶ್ ಅವಿರೋಧ ಆಯ್ಕೆಯಾದರು.

ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ತಹಶೀಲ್ದಾರ್ ಆರತಿ.ಬಿ ನಡೆಸಿಕೊಟ್ಟರು. ಮಹಿಳಾ ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ಮಂಗಳಮ್ಮ ರಾಜಣ್ಣ ಹಾಗೂ ಎಸ್ಸಿ ಮಹಿಳಾ ಮೀಸಲಿನ ಉಪಾಧ್ಯಕ್ಷ ಸ್ಥಾನಕ್ಕೆ ಮಮತಾ ಶಿವಪ್ಪ ರಾಜೀನಾಮೆ ಸಲ್ಲಿಸಿದ್ದ ಹಿನ್ನಲೆ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು.

ಪಟ್ಟಣದ 7 ನೇ ವಾರ್ಡ್ ಸದಸ್ಯೆ ಆಯಿಷಾ ತಾಸೀನ್ ಮಹಮ್ಮದ್ ಸಾದಿಕ್ ಅಧ್ಯಕ್ಷ ಸ್ಥಾನಕ್ಕೆ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. 18 ನೇ ವಾರ್ಡ್ ಸದಸ್ಯೆ ಶ್ವೇತಾ ಜಗದೀಶ್ ಕೂಡಾ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಹಿನ್ನಲೆ ಇಬ್ಬರನ್ನೂ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

Advertisements

ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಶಾಸಕ ಎಸ್.ಆರ್.ಶ್ರೀನಿವಾಸ್ ಸುದ್ದಿಗಾರರ ಜೊತೆ ಮಾತನಾಡಿ ಸ್ಥಳೀಯ ಪಟ್ಟಣ ಪಂಚಾಯಿತಿ ಅಧಿಕಾರದ ಕೊನೆಯ ಅವಧಿಯಲ್ಲಿ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಸಾಮಾನ್ಯ ಮಹಿಳಾ ಮೀಸಲು ಸ್ಥಾನವನ್ನು ಅವಕಾಶ ವಂಚಿತರಿಗೆ ಮಾನ್ಯತೆ ನೀಡಿ ಅಧಿಕಾರ ಹಂಚಲಾಗಿದೆ. ಪಟ್ಟಣದ ಬಹುತೇಕ ಶೇಕಡಾ 95 ರಷ್ಟು ಅಭಿವೃದ್ದಿ ಕೆಲಸ ನಡೆದಿದೆ. ಉಳಿದ ಕೆಲಸವನ್ನು ಅಧಿಕಾರ ಅವಧಿ ಪೂರ್ಣಗೊಳ್ಳುವ ಮುನ್ನ ಮಾಡುವ ಭರವಸೆ ವ್ಯಕ್ತ ಪಡಿಸಿದರು.

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ ಮುಗಿದ ಹಿನ್ನಲೆ ಪಟ್ಟಣದ ಹಾದು ಹೋಗುವ ಡಾಂಬರು ರಸ್ತೆಯನ್ನು ಸಿಸಿ ರಸ್ತೆಯಾಗಿ ಅಭಿವೃದ್ದಿ ಪಡಿಸಲಾಗುವುದು. ಈ ಕಾಮಗಾರಿಗೆ 27 ಕೋಟಿ ರೂಗಳು ಮಂಜೂರು ಆಗಲಿದೆ. ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾರ್ಯ ಮುಗಿದ ತಕ್ಷಣ ಎಂಜಿ ರಸ್ತೆ ಅಗಲೀಕರಣ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.

ನೂತನ ಪಪಂ ಅಧ್ಯಕ್ಷೆ ಆಯಿಷಾ ತಾಸೀನ್ ಮಾತನಾಡಿ ಅಭಿವೃದ್ಧಿ ಕೆಲಸಗಳನ್ನು ಶಾಸಕರ ಮಾರ್ಗದರ್ಶನದಲ್ಲಿ ನಡೆಸುತ್ತೇವೆ. ಈ ಜೊತೆಗೆ ಆರು ಬಾರಿ ಸದಸ್ಯರಾಗಿ, ಒಮ್ಮೆ ಅಧ್ಯಕ್ಷರಾದ ನನ್ನ ಪತಿ ಮಹಮದ್ ಸಾದಿಕ್ ಅವರು ಸಹ ಪಟ್ಟಣದ ಅಭಿವೃದ್ಧಿಗೆ ಸಾಥ್ ನೀಡಲಿದ್ದಾರೆ. ಸ್ವಚ್ಛತೆ, ಕುಡಿಯುವ ನೀರು ಪೂರೈಕೆ ಮಾಡಲು ಬದ್ದರಾಗಿರುತ್ತೇವೆ ಎಂದರು.

ನೂತನ ಉಪಾಧ್ಯಕ್ಷೆ ಶ್ವೇತಾ ಜಗದೀಶ್ ಮಾತನಾಡಿ ಶಾಸಕರ ಸಲಹೆಯಂತೆ ಎಲ್ಲಾ ಸದಸ್ಯರ ವಿಶ್ವಾಸದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇವೆ. ಉಳಿದ ಅಲ್ಪ ಅವಧಿಯಲ್ಲಿ ನಿರಂತರ ಕೆಲಸಗಳು ನಡೆಸುತ್ತೇವೆ ಎಂದರು.

ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಜಗನ್ನಾಥ್, ತಾಪಂ ಮಾಜಿ ಸದಸ್ಯ ರೆಹಮತ್ ಉಲ್ಲಾ, ಪಪಂ ಸದಸ್ಯರಾದ ಮಹಮ್ಮದ್ ಸಾದಿಕ್, ಶೌಕತ್ ಆಲಿ, ರೇಣುಕಾಸ್ವಾಮಿ, ಸಿ.ಮೋಹನ್, ಕುಮಾರ್, ಅಣ್ಣಪ್ಪಸ್ವಾಮಿ, ಶಶಿಕುಮಾರ್, ಶಿವಕುಮಾರ್, ಮಂಗಳಮ್ಮ, ಮಮತಾ, ಮುಖಂಡರಾದ ಅಬ್ದುಲ್ ಅಜೀಜ್, ಬಾಬು, ಸೈಯದ್ ಇಲಿಯಾಜ್, ಲತೀಫ್ ಖಾನ್, ಮೆಹಬೂಬ್ ಪಾಷಾ, ಶ್ರೀನಿವಾಸ್ ಸೇರಿದಂತೆ ಹಲವು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X