ಉಡುಪಿ | ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳಿಗೆ ನೆರವಾಗಲು ಅಕ್ಕ ಪಡೆ ಸನ್ನದ್ಧ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Date:

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅಕ್ಕಪಡೆ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಇದು ಸಂಕಷ್ಟದಲ್ಲಿರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗುವುದರೊಂದಿಗೆ ರಕ್ಷಣೆ ನೀಡಿ, ಭಯಮುಕ್ತ
ವಾತಾವರಣ ಕಲ್ಪಿಸಲಿದೆ ಎಂದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಕ್ಕ ಪಡೆ ಯೋಜನೆಯ ವಾಹನಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸಲಿದ್ದು, ಹೆಣ್ಣು ಮಕ್ಕಳನ್ನು ದೌರ್ಜನ್ಯಕ್ಕೊಳಗಾಗದಂತೆ ಅವರುಗಳಿಗೆ ಸುರಕ್ಷತಾ ಭಾವನೆ ಮೂಡಿಸಿ, ಸ್ವತಂತ್ರö್ಯವಾಗಿ ಬದುಕಲು ಧೈರ್ಯ ತುಂಬಿಸುವ ಕೆಲಸ ಅಕ್ಕಪಡೆ ಮಾಡಲಿದೆ. ಮಹಿಳೆಯರ ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ವಾಹನದಲ್ಲಿ 4 ಜನ ಗೃಹ ರಕ್ಷಕಿಯರು ಮತ್ತು ಪೊಲೀಸ್ ಇಲಾಖೆಯ ಒಬ್ಬರು ಡ್ರೈವರ್ ಅನ್ನು ನಿಯೋಜಿಸಲಾಗಿದ್ದು, ಎರಡು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದ ಅವರು, ತರಬೇತಿ ಹೊಂದಿದ ಅಕ್ಕಪಡೆಯ ಸದಸ್ಯರುಗಳು ಶಾಲಾ-ಕಾಲೇಜು, ಬಸ್ ನಿಲ್ದಾಣ, ದೇವಸ್ಥಾನ, ಹಾಸ್ಟಲ್‌ಗಳು, ಜನದಟ್ಟಣೆ ಪ್ರದೇಶ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಗಸ್ತು ತಿರುಗುವುದರೊಂದಿಗೆ ಯುವತಿಯರು ಹಾಗೂ ವಿದ್ಯಾರ್ಥಿಗಳನ್ನು ಚುಡಾಯಿಸುವ, ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

WhatsApp Image 2026 01 03 at 7.04.23 PM 1

ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, ಜಿಲ್ಲೆಯಲ್ಲಿ ಅಕ್ಕಪಡೆಗೆ ಚಾಲನೆ ನೀಡಲಾಗಿದ್ದು, ದೌರ್ಜನ್ಯ, ಹಿಂಸೆ, ನಿರ್ಲಕ್ಷಯ ಹಾಗೂ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಹಾಗೂ ಮಕ್ಕಳಿಗೆ ಸಹಾಯಹಸ್ತ ಒದಗಿಸುವುದರೊಂದಿಗೆ ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗೆ ಒತ್ತು ನೀಡಲಿದ್ದಾರೆ ಎಂದರು.

ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತುರ್ತು ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸುವ, ಸ್ವರಕ್ಷಣೆ ಕಾರ್ಯವಿಧಾನ, ಸಂಚಾರ ನಿಯಮ ಕುರಿತು ಜಾಗೃತಿ ಮೂಡಿಸುವ ಬಗ್ಗೆ, ಫೋಕ್ಸೋ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಸೇರಿದಂತೆ ಮತ್ತಿತರ ಕುರಿತಾಗಿ ತರಬೇತಿ ನೀಡಲಾಗಿರುತ್ತದೆ ಎಂದ ಅವರು, ಪೊಲೀಸ್ ವಾಹನಗಳಲ್ಲಿರುವಂತೆ ಅಕ್ಕಪಡೆ ವಾಹನದಲ್ಲಿಯೂ ಸಹ ವೈರ್‌ಲೆಸ್ ಸೆಟ್‌ಗಳನ್ನು ಅಳವಡಿಸಲಾಗಿದ್ದು, ತುರ್ತು ಕರೆಗಳಿಗೆ ಆದ್ಯತೆಯ ಮೇಲೆ ಸ್ಪಂದಿಸಲಿದ್ದಾರೆ ಎಂದರು.

ಹೊಸ ವರ್ಷದ ಅವಧಿಯಲ್ಲಿ ಪ್ರಾಯೋಗಿಕವಾಗಿ ಅಕ್ಕಪಡೆಯನ್ನು ಮಲ್ಪೆ ಮತ್ತು ಮಣಿಪಾಲದಲ್ಲಿ ನಿಯೋಜಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಅಪರಾಧಗಳ ಪ್ರಮಾಣ ಕಡಿಮೆ ಮಾಡಲು ಇದೊಂದು ಉತ್ತಮ ಯೋಜನೆಯಾಗಿದೆ ಎಂದ ಅವರು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆ ಹಾಗೂ ಮಧ್ಯಾಹ್ನ 2 ರಿಂದ ರಾತ್ರಿ 8 ಗಂಟೆಯ ವರೆಗೆ ಎರಡು ಪಾಳಿಗಳಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸಲಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098, ಮಹಿಳಾ ಸಹಾಯವಾಣಿ 181 ಹಾಗೂ ಪೊಲೀಸ್ ಸಹಾಯವಾಣಿ 112 ಸಂಖ್ಯೆಗೆ ಕರೆ ಮಾಡುವುದರ ಮೂಲಕ ಸಂಕಷ್ಟದಲ್ಲಿರುವ ಮಹಿಳೆಯರು ಹಾಗೂ ಮಕ್ಕಳು ಅಕ್ಕಪಡೆ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದರು.

WhatsApp Image 2026 01 03 at 7.04.22 PM 1

ಅಕ್ಕ ಪಡೆಯ ಬಗ್ಗೆ:
ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು ಅಕ್ಕ ಪಡೆ ಪ್ರಾಥಮಿಕ ಉದ್ದೇಶವಾಗಿದೆ. ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಚಾಲಿತವಾಗಿರುವ ಅಕ್ಕ ಪಡೆ ಸಮಾಜದಲ್ಲಿ ಸ್ಪಂದಿಸುವ ಸುರಕ್ಷತಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ.

ಉದ್ದೇಶ:
• ದೌರ್ಜನ್ಯ, ಹಿಂಸೆ, ನಿರ್ಲಕ್ಷ್ಯ ಅಥವಾ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಮತ್ತು ರಕ್ಷಣೆ ಒದಗಿಸುವುದು.
• ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಘನತೆ ಮತ್ತು ಸಬಲೀಕರಣವನ್ನು ಉತ್ತೇಜಿಸುವುದು.
• ಶಿಕ್ಷಣದ ಮೂಲಕ ಹಕ್ಕುಗಳು, ಕಾನೂನುಗಳು, ಸುರಕ್ಷತಾ ಕ್ರಮಗಳು ಮತ್ತು ಲಭ್ಯವಿರುವ ಬೆಂಬಲ ವ್ಯವಸ್ಯೆಗಳ ಬಗ್ಗೆ, ಜಾಗೃತಿ ಮೂಡಿಸುವುದು.
• ಸಮಾಜದಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆದು ಕಾನೂನಿನ ರಕ್ಷಣೆಯೊಂದಿಗೆ ಭಯಮುಕ್ತ ವಾತಾವರಣ ಸೃಷ್ಟಿಸುವುದು.

ಪ್ರಮುಖ ಚಟುವಟಿಕೆಗಳು:
• ತ್ವರಿತ ಪ್ರತಿಕ್ರಿಯೆ: ತರಬೇತಿ ಪಡೆದ ಅಕ್ಕ ಪಡೆ ತಂಡಗಳು ಸೂಕ್ಷ್ಮ ಪ್ರದೇಶಗಳಲ್ಲಿ patrolling ಮತ್ತು ಮಹಿಳೆಯರು ಮತ್ತು ಮಕ್ಕಳನ್ನು ಒಳಗೊಂಡ ಸಂಕಷ್ಟದ ಕರೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತವೆ.
• ಸಮುದಾಯದ ತೊಡಗಿಸಿಕೊಳ್ಳುವಿಕೆ: ಲಿಂಗ ಸಮಾನತೆ, ಮಕ್ಕಳ ರಕ್ಷಣೆ, ಕಾನೂನು ಹಕ್ಕುಗಳು, ಸಹಾಯವಾಣಿಗಳು ಮತ್ತು ವರದಿ ಮಾಡುವ ಕಾರ್ಯವಿಧಾನಗಳಂತಹ ವಿಷಯಗಳ ಕುರಿತು ಶಾಲೆ, ಕಾಲೇಜು, ಮಾರುಕಟ್ಟೆ ಮತ್ತು ನೆರೆಹೊರೆಗಳಲ್ಲಿ ಜಾಗೃತಿ ಅಭಿಯಾನಗಳನ್ನು ನಡೆಸುವುದು.
• ಸಮಾಲೋಚನೆ: ಮಕ್ಕಳ ಕಲ್ಯಾಣ ಸಮಿತಿಗಳು(CWCs), ಮಹಿಳಾ ಸಹಾಯವಾಣಿಗಳು ಸರ್ಕಾರೇತರ ಸಂಸ್ಥೆಗಳು(NGOS), ಕಾನೂನು ನೆರವು ಮತ್ತು ಆಶ್ರಯ ತಾಣ Shelter homes) ಗಳೊಂದಿಗೆ ಸುಗಮ ಸಂಪರ್ಕ ಕಲ್ಪಿಸಿ ಸಮಾಲೋಚನೆ ಬೆಂಬಲವನ್ನು ನೀಡುವುದು.
• ವಿಶ್ವಾಸ ವರ್ಧನೆ: ಸಮುದಾಯದಲ್ಲಿ ಸ್ನೇಹಪರ ಮತ್ತು ವಿಶ್ವಾಸಾರ್ಹ ಸ್ಥಿತಿಯನ್ನು ಸ್ಥಾಪಿಸುವುದು, ಸಂತ್ರಸ್ತೆಯರು ಮತ್ತು ಕುಟುಂಬಗಳು ಭಯವಿಲ್ಲದ ಸಹಾಯ ಪಡೆಯಲು ಪ್ರೋತ್ಸಾಹಿಸುವುದು.

WhatsApp Image 2026 01 03 at 7.04.25 PM

ಉದ್ದೇಶಿತ ಫಲಾನುಭವಿಗಳು:
• ಕಿರುಕುಳ, ಕೌಟುಂಬಿಕ ಹಿಂಸೆ, ಈವ್‌ ಟಿಸಿಂಗ್‌ ಅಥವಾ ಯಾವುದೇ ರೀತಿಯ ದೌರ್ಜನ್ಯವನ್ನು ಎದುರಿಸುತ್ತಿರುವ ಮಹಿಳೆಯರು ಮತ್ತು ಹದಿ ಹರೆಯದ ಹೆಣ್ಣು ಮಕ್ಕಳು.
• ನಿರ್ಲಕ್ಷ್ಯ ಕಳ್ಳಸಾಗಣೆ, ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿ, ಬಾಲಭಿಕ್ಷಾಟನೆ ಮಾದಕ ದ್ರವ್ಯ ಅಥವಾ ನಿಂದನೆಗೆ ಒಳಗಾದ ಮಕ್ಕಳು.
• ಜಾಗೃತಿ ಮತ್ತು ಶಿಕ್ಷಣದ ಮೂಲಕ ಇಡೀ ಸಮಾಜವು ಈ ಯೋಜನೆಯ ಫಲಾನುಭವಿಯಾಗಿದೆ.

ಅಕ್ಕ ಪಡೆ ವ್ಯಾಪ್ತಿ:
• ಜಿಲ್ಲಾ ಮಟ್ಟದಲ್ಲಿ ಮಹಿಳಾ ಗೃಹ ರಕ್ಷಕರನ್ನೊಳಗೊಂಡ ‘ಅಕ್ಕ ಪಡೆ’ ತಂಡವು ಸ್ಥಳೀಯ ಪೊಲೀಸರ ನಿಕಟ ಸಹಯೋಗದೊಂದಿಗೆ ಕಾರ್ಯನಿರ್ವಹಿಸಲಿದೆ.
• ತಂಡದ ಸದಸ್ಯರನ್ನು ಶಾಲೆ, ಕಾಲೇಜು, ಬಾಲಕಿಯರ/ಮಹಿಳಾ ಹಾಸ್ಟೆಲ್, ಬಸ್/ರೈಲ್ವೆ ನಿಲ್ದಾಣಗಳು, ಸ್ಥಳೀಯ ಮಾರುಕಟ್ಟೆ ಪ್ರೇಕ್ಷಣಿಯ ಸ್ಥಳಗಳು, ಪವಿತ್ರ ಸ್ಥಳಗಳು ಮತ್ತು ಇತರ ಸೂಕ್ಷ್ಮ ಸ್ಥಳಗಳಲ್ಲಿ ನಿಯೋಜಿಸಲಾಗುವುದು.

ಅಕ್ಕ ಪಡೆಯ ಪಾತ್ರ ಮತ್ತು ಜವಾಬ್ದಾರಿಗಳು:
• ಮಹಿಳಾ ಕಿರುಕುಳ ಪ್ರಕರಣಗಳ ಬಗ್ಗೆ, ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣೆಗೆ ವರದಿ ಮಾಡುವುದು.
• ಮಹಿಳೆ ಮತ್ತು ಮಕ್ಕಳಿಗೆ ಸಂರಕ್ಷಣೆ ಕಾರ್ಯ ವಿಧಾನದ ತರಬೇತಿ ನೀಡುವುದು.
• ಮಹಿಳೆಯರ ಕಿರುಕುಳ ಮತ್ತು ಈವ್ ಟೀಸಿಂಗ್ ತಡೆಗಟ್ಟಲು ಶಾಲೆ, ಕಾಲೇಜು, ಉದ್ಯಾನವನ, ಸಿನಿಮಾ ಮಂದಿರ, ಸ್ಥಳೀಯ ಮಾರುಕಟ್ಟೆಗಳಿಗೆ ನಿಯಮಿತವಾಗಿ ಭೇಟಿ ನೀಡುವುದು.
• ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಹಾಗೂ ಅಪರಿಚಿತರ ಬಗ್ಗೆ ಎಚ್ಚರದಿಂದಿರುವುದರ ಬಗ್ಗೆ ಜಾಗೃತಿ ಮೂಡಿಸುವುದು.
• POCSO, ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿ, ಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಮ, ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಣೆ, ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು.
• ಮಾದಕ ದ್ರವ್ಯಗಳು ಮತ್ತು ಮಾದಕ ದ್ರವ್ಯಗಳ ದುರುಪಯೋಗ ಮತ್ತು ಆರೋಗ್ಯದ ಮೇಲೆ ಅದರ ಪರಿಣಾಮದ ಬಗ್ಗೆ, ಜಾಗೃತಿ ಮೂಡಿಸುವುದು.
• ಸಂಚಾರ ನಿಯಮಗಳು ಮತ್ತು ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವುದು.
• ಸಹಾಯವಾಣಿಗಳು 1098, 181, 112 ಇತ್ಯಾದಿ ಬಗ್ಗೆ ಜಾಗೃತಿ ಮೂಡಿಸುವುದು.
• ಸೈಬರ್ ಅಪರಾಧಗಳು ಮತ್ತು ತೆಗೆದುಕೊಳ್ಳಬೇಕಾದ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು.
• ಶಾಲೆ, ಕಾಲೇಜು, ಹುಡುಗಿಯರು ಮತ್ತು ಉದ್ಯೋಗಸ್ತ ಮಹಿಳೆಯರ ವಸತಿ ನಿಲಯಗಳ ಅವರಣದಲ್ಲಿ ದುಷ್ಕರ್ಮಿಗಳ ಮೇಲೆ ನಿಗಾ ಇರಿಸುವುದು.
• ಸಿಗ್ನಲ್‌ನ ಬಳಿ ಮಕ್ಕಳ ಭಿಕ್ಷಾಟನೆಯನ್ನು ತಡೆಗಟ್ಟುವುದು.
• ಕಳ್ಳಸಾಗಣೆಯಿಂದ ರಕ್ಷಿಸಲ್ಪಟ್ಟ ಮಹಿಳೆಯರು ಮತ್ತು ಮಕ್ಕಳಿಗೆ ಪುನರ್ವಸತಿ ಕಲ್ಪಿಸುವುದು.
• ಸಹಾಯವಾಣಿಗಳಿಂದ ಬರುವ ಎಲ್ಲಾ ತುರ್ತು ಕರೆಗಳಿಗೆ ಸ್ಪಂದಿಸುವುದು ಮತ್ತು ಸೂಕ್ತ ಶಿಷ್ಟಾಚಾರದೊಂದಿಗೆ ಸಂತ್ರಸ್ತೆಯರನ್ನು ರಕ್ಷಿಸುವುದು.

WhatsApp Image 2026 01 03 at 7.04.22 PM 2

ನಿರೀಕ್ಷಿತ ಫಲಿತಾಂಶಗಳು:
• ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆ ಮತ್ತು ಮಕ್ಕಳ ಸುರಕ್ಷತೆಯಲ್ಲಿ ಸುಧಾರಣೆ.
• ಕಾನೂನು ಹಕ್ಕುಗಳು ಮತ್ತು ಬೆಂಬಲ ಸೇವೆಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಜಾಗೃತ ಸಮಾಜ ನಿರ್ಮಾಣ.
• ಕಾನೂನು ಜಾರಿ ಸಂಸ್ಥೆಗಳಲ್ಲಿ ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳಲ್ಲಿ ಸಮುದಾಯದಲ್ಲಿ ನಂಬಿಕೆ ಉಳ್ಳ ಸಮಾಜ ರೂಪಣೆ.
• ಪೂರ್ವಭಾವಿ ತಡೆಗಟ್ಟುವಿಕೆ ಮತ್ತು ಮಧ್ಯಸ್ತಿಕೆಯ ಮೂಲಕ ಲಿಂಗ ಆಧಾರಿತ ಹಿಂಸಾಚಾರದಲ್ಲಿ ಕಡಿತ.

ಅಕ್ಕ ಪಡೆಯು ಸಹೋದರತೆ ಮತ್ತು ರಕ್ಷಣೆಯ ಮನೋಭಾವವನ್ನು ಸಾಕಾರಗೊಳಿಸುತ್ತದೆ, ಆರೈಕೆ ಮತ್ತು ರಕ್ಷಣೆಯ ಅಗತ್ಯವಿರುವವರಿಗೆ ಮೊದಲ ಪ್ರತಿಕ್ರಿಯೆ ನೀಡುವವರು, ಶಿಕ್ಷಕರು ಮತ್ತು ರಕ್ಷಕರಾಗಿ ಕಾರ್ಯನಿರ್ವಹಿಸಲು ಮಹಿಳಾ ಕೆಡೆಟ್‌ಗಳಿಗೆ ಅಧಿಕಾರ ನೀಡುತ್ತದೆ. ಪೊಲೀಸರು ಮತ್ತು ಸಾರ್ವಜನಿಕರ ವಿಶೇಷವಾಗಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ನಡುವಿನ ಅಂತರವನ್ನು ಕಡಿಮೆ ಮಾಡುವ ಮೂಲಕ, ಅಕ್ಕ ಪಡೆ ಸುರಕ್ಷಿತ ಸಮುದಾಯಗಳನ್ನು ಸೃಷ್ಟಿಸುತ್ತದೆ ಮತ್ತು ಗೌರವ, ಬೆಂಬಲ ಮತ್ತು ಜಾಗೃತಿಯ ಸಂಸ್ಕೃತಿಯನ್ನು ಪೋಷಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...