ಆಳಂದ ಮತಗಳವು | ಮತದಾರರ ಹೆಸರು ಅಳಿಸುವ ಪ್ರತಿ ಅರ್ಜಿಗೆ 80 ರೂ. ಪಾವತಿ: ವರದಿ

Date:

2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಹೆಸರು ಅಳಿಸಲು ಅರ್ಜಿ ಸಲ್ಲಿಸಿದ್ದ ಅರ್ಜಿದಾರರಿಗೆ ಪ್ರತಿ ಅರ್ಜಿಗೂ 80 ರೂ. ನೀಡಲಾಗಿದೆ ಎಂಬ ಸಂಗತಿಯನ್ನು ಎಸ್‌ಐಟಿ ಕಂಡುಹಿಡಿದೆ. ಒಟ್ಟು 6,018 ಮತದಾರರ ಹೆಸರನ್ನು ಅಳಿಸಲು ಅರ್ಜಿ ಸಲ್ಲಿಸಲಾಗಿದ್ದು, ಈ ಅರ್ಜಿ ಹಾಕಿದ್ದಕ್ಕಾಗಿ ಸುಮಾರು 4.8 ರೂ. ಪಾವತಿಸಲಾಗಿದೆ ಎಂದು ತನಿಖೆಯಿಂದ ಬಹಿರಂಗವಾಗಿದೆ.

- Advertisement -

2022ರ ಡಿಸೆಂಬರ್ ಮತ್ತು 2023ರ ಫೆಬ್ರವರಿ ನಡುವೆ ಆಳಂದ ಕ್ಷೇತ್ರದಲ್ಲಿ ಮತದಾರರ ಹೆಸರು ಅಳಿಸಲು ಕೋರಿ 6,018 ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಅರ್ಜಿಗಳನ್ನು ಕಲಬುರಗಿ ಜಿಲ್ಲಾ ಕೇಂದ್ರದಲ್ಲಿರುವ ಡೇಟಾ ಸೆಂಟರ್‌ನಿಂದ ಸಲ್ಲಿಸಲಾಗಿದೆ. ಇದರ ಹಿಂದೆ ಡೇಟಾ ಸೆಂಟರ್ ಮತ್ತು ಬಿಜೆಪಿ ನಾಯಕರೊಬ್ಬರ ಸಹಾಯಕರ ಕೈವಾಡವಿದೆ ಎಂದು ಎಸ್‌ಐಟಿ ಕಂಡುಕೊಂಡಿರುವುದಾಗಿ ‘ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಆಳಂದ ಮತಗಳವು ಪ್ರಕರಣವು 2023ರಲ್ಲಿಯೇ ಬೆಳಕಿಗೆ ಬಂದಿತ್ತು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಕರಣದ ತನಿಖೆಯನ್ನು ‘ಸಿಐಡಿ’ಗೆ ವಹಿಸಲಾಗಿತ್ತು. ಅಂದಿನಿಂದ, ಸಿಐಡಿ ತನಿಖೆ ನಡೆಸುತ್ತಿತ್ತು. ಆದರೆ, ತನಿಖೆಗೆ ಚುನಾವಣಾ ಆಯೋಗ ಅಗತ್ಯ ಮಾಹಿತಿಗಳನ್ನು ಒದಗಿಸುತ್ತಿಲ್ಲ ಎಂದು ಆರೋಪಿಸಲಾಗಿತ್ತು. ಈ ನಡುವೆ, ಇತ್ತೀಚೆಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಆಳಂದದಲ್ಲಿ ನಡೆದಿರುವ ಮತಗಳವು ಕುರಿತು ಗಮನ ಸೆಳೆದಿದ್ದರು. ಚುನಾವಣಾ ಆಯೋಗದ ವಿರುದ್ಧವೂ ಗಂಭೀರ ಆರೋಪಗಳನ್ನು ಮಾಡಿದ್ದರು. ಈ ಬೆನ್ನಲ್ಲೇ, ಮತಗಳವು ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ಎಸ್‌ಟಿಐ ರಚಿಸಿತು.

ಸೆಪ್ಟೆಂಬರ್ 26ರಂದು ಪ್ರಕರಣದ ತನಿಖೆಯನ್ನು ಸಿಐಡಿಯಿಂದ ವಹಿಸಿಕೊಂಡ ಎಸ್‌ಐಟಿ, ತನಿಖೆಯನ್ನು ಚುರುಕುಗೊಳಿಸಿತ್ತು. ಅಕ್ಟೋಬರ್ 17ರಂದು ಬಿಜೆಪಿ ನಾಯಕ ಸುಭಾಷ್ ಗುತ್ತೇದಾರ್, ಅವರ ಪುತ್ರರಾದ ಹರ್ಷಾನಂದ ಮತ್ತು ಸಂತೋಷ್ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಮಲ್ಲಿಕಾರ್ಜುನ್ ಮಹಾಂತಗೋಲ್ ಅವರ ಮನೆ ಮೇಲೆ ದಾಳಿ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದರು. 7 ಲ್ಯಾಪ್‌ಟಾಪ್‌ಗಳು ಮತ್ತು ಹಲವು ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡಿದ್ದರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...