ಕಲಬುರಗಿ | ಆಳಂದದ ಸರ್ಕಾರಿ ಶಾಲೆಗಳ ಕಟ್ಟಡಗಳು ಶಿಥಿಲ

Date:

Advertisements

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗಳು ಒಂದೇ ಆರವಣದಲ್ಲಿವೆ. ಎರಡೂ ಶಾಲೆಗಳಿಗೆ ಒಂದೇ ಅಡುಗೆ ಕೋಣೆಯಿದ್ದು, ಅದೂ ಕೂಡ ಶಿಥಿಲಗೊಂಡಿದೆ. ಅಡುಗೆ ಕೋಣೆಯ ಬಾಗಿಲುಗಳು ಮುರಿದಿವೆ. ಪರಿಣಾಮ, ತರಗತಿ ನಡೆಯುವ ಕೊಠಡಿಯಲ್ಲಿಯೇ ಅಡುಗೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೊಸ ಅಡುಗೆ ಕೋಣೆ ನಿರ್ಮಿಸಿಕೊಡಬೇಕೆಂದು ಶಾಲೆಯ ಅಡುಗೆ ಸಿಬ್ಬಂದಿಗಳು ಬೇಡಿಕೆ ಇಟ್ಟಿದ್ದಾರೆ.

ಶಾಲೆಯಲ್ಲಿ ಮೊದಲೇ ತರಗತಿಗಳಿಗೆ ಅಗತ್ಯವಿರುವಷ್ಟು ಕೊಠಡಿಗಳು ಇಲ್ಲ. ಅಡುಗೆ ಕೋಣೆ ಶಿಥಿಲಗೊಂಡಿದೆ. ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿದ್ದು, ಯಾವಾಗ ಬೇಕಿದ್ದರೂ ಬೀಳುವ ಆತಂಕವಿದೆ. ಅದನ್ನು ಕೆಡವಿ, ಹೊಸ ಕಟ್ಟಡ ನಿರ್ಮಾಣ ಮಾಡಬೇಕು. ಆದರೆ, ಹಳೆಯ ಕಟ್ಟಡದಲ್ಲಿಯೇ ಮಕ್ಕಳಿಗೆ ಬಿಸಿಯೂಟ ನೀಡಲಾಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಶಾಲೆಯ ಕೆಲವು ಕೊಠಡಿಗಳು ಕೂಡ ತರಗತಿ ನಡೆಸಲು ಯೋಗ್ಯವಾಗಿಲ್ಲ. ಸರ್ಕಾರ ಕಟ್ಟಡಗಳ ದುರಸ್ತಿ, ನವೀಕರಣ ಹಾಗೂ ಪ್ರಗತಿಗೆ ಅಗತ್ಯವಾಗಿ ಹೆಚ್ಚಿನ ಒತ್ತು ನೀಡಬೇಕು ಎಂದು ಆಗ್ರಹಿಸಿದ್ದಾರೆ.

Advertisements

WhatsApp Image 2023 12 24 at 8.29.44 PM

ಶಾಲಾ ಪ್ರಗತಿ, ನಿರ್ವಹಣೆಗೆ ಗ್ರಾಮ ಪಂಚಾಯತಿ ಆಡಳಿತದ ಹೊಂದಾಣಿಕೆಯೊಂದಿಗೆ ಮಕ್ಕಳ ಪೋಷಕರ ಎಸ್‌ಡಿಎಂಸಿ ಸಮಿತಿ ರಚಿಸಿದ್ದರೂ ಶಾಲೆಗಳು ಸಮಸ್ಯೆಯಿಂದ ಬಿಡುಗಡೆಗೊಂಡಿಲ್ಲ. ಅನೇಕ ಶಾಲಾ ಕಟ್ಟಡಗಳು ಸೋರುತ್ತಿವೆ. ಗೋಡೆ ಮೇಲೆ ಮಳೆ ನೀರು ಇಳಿದು ಅಪಾಯದ ಸ್ಥಿತಿಗೆ ತಲುಪಿವೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಸಮಸ್ಯೆ ಬಗ್ಗೆ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೂ, ಯಾವುದೇ ಪ್ರಯೋಜನ ಆಗಿಲ್ಲ. ಮಾಧ್ಯಮಗಳು ಶಾಲೆ ಸಮಸ್ಯೆ ಬಗ್ಗೆ ವರದಿ ಮಾಡಿ, ಸರ್ಕಾರದ ಗಮನಕ್ಕೆ ತರಬೇಕು” ಎಂದು ಶಾಲೆಯ ಅಡುಗೆ ಸಿಬ್ಬಂದಿಗೆ ಈದಿನ.ಕಾಮ್‌ಗೆ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X