ಚಿಕ್ಕನಾಯಕನಹಳ್ಳಿ | ಮೂಲಭೂತ ಸೌಕರ್ಯ ನೀಡಿ; ತಾಲೂಕು ಕಚೇರಿ ಮೆಟ್ಟಿಲೇರಿದ ಬಿಡಾರದ ಅಲೆಮಾರಿಗಳು

Date:

ಅಲೆಮಾರಿ‌ ಸಮುದಾಯದ ಸಮಸ್ಯೆಗಳ ಕುರಿತು ಚಿಕ್ಕನಾಯಕನಹಳ್ಳಿ ತಾಲೂಕಿನ ಅಲೆಮಾರಿಗಳು ತಾಲೂಕು ಕಚೇರಿಗೆ ಆಗಮಿಸಿ, ತಹಶೀಲ್ದಾರ್ ಕೆ.ಪುರಂದರ್ ಅರವರಿಗೆ ಮನವಿಪತ್ರ ನೀಡಿದರು.

- Advertisement -

ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗೌಡಗೆರೆ ಸರ್ವೆ ನಂಬರ್ 20P-1’ನಲ್ಲಿ ಹೋಬಳಿಯ ಅಲೆಮಾರಿ ಜನಾಂಗದವರಿಗೆ 34 ನಿವೇಶನಗಳನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ಆದರೆ, ಮನೆ ನಿರ್ಮಿಸಿಕೊಳ್ಳಲು ಅಲ್ಲಿ ಕೈಗೊಳ್ಳಬೇಕಾದ ಮೂಲಭೂತ ಸೌಕರ್ಯಗಳು ಮಾತ್ರ ನಾಪತ್ತೆಯಾಗಿವೆ. ಅದೇ ಗೌಡಗೆರೆ ಸರ್ವೆ ನಂಬರ್ 20P-1’ನಲ್ಲೇ ಬರುವ 30’ಗುಂಟೆ ಜಮೀನಿನಲ್ಲಿ ಇನ್ನೂ 27 ಅಲೆಮಾರಿ ಕುಟುಂಬಗಳಿಗಾಗಿ ನಿವೇಶನ ಮಾಡಿಕೊಡಲು ಅದರ ಫಾರ್ಮೇಶನ್ ಕೆಲಸಕಾರ್ಯಗಳು ಆಗಬೇಕಿತ್ತು. ಆದರೆ ಇನ್ನೂ ಆ ಕೆಲಸಗಳು ಪ್ರಾರಂಭವೇ ಆಗುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಂದಿಜೋಗಿ ರಾಜಣ್ಣ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
ಚಿಕ್ಕನಾಯಕನಹಳ್ಳಿ1 2

ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಅಲೆಮಾರಿ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಸ್ಥಗಿತಗೊಂಡಿವೆ. ತಾಲೂಕು ಆಡಳಿತ, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್’ಗಳು ಶೀಘ್ರವೇ ಈ ಕೆಲಸಗಳನ್ನು ಕೈಗೆತ್ತಿಕೊಂಡು ವಸತಿ ವಂಚಿತ ಅಲೆಮಾರಿ ಸಮುದಾಯದ ಕುಟುಂಬಗಳು ಮನೆ ಕಟ್ಟಿಕೊಳ್ಳಲು ತ್ವರಿತವಾಗಿ ಅನುವು ಮಾಡಿಕೊಡಬೇಕು ಎಂದು ರಾಜಣ್ಣ ಆಗ್ರಹಿಸಿದರು.

ಕಳೆದ ಜುಲೈ ತಿಂಗಳಲ್ಲಿ ಹುಳಿಯಾರಿನಲ್ಲಿ ನಡೆದ ಜಿಲ್ಲಾಧಿಕಾರಿಗಳ ಜನಸ್ಪಂದನ ಕಾರ್ಯಕ್ರಮದ ಸಂದರ್ಭದಲ್ಲಿ, ತುಮಕೂರು ಜಿಲ್ಲೆಯ ಎಡಿಸಿ ಶಿವಾನಂದ ಕರಾಳೆ’ಯವರು ಗೌಡಗೆರೆ ಸರ್ವೆ ನಂಬರ್ 20P-1’ನಲ್ಲಿರುವ ಈ ಅಲೆಮಾರಿ ಬಿಡಾರಕ್ಕೆ ಭೇಟಿಕೊಟ್ಟು ವಾಸ್ತವಸ್ಥಿತಿ ಮನಗಂಡಿದ್ದರು. ಸ್ಥಳದಲ್ಲೇ ತಾಲ್ಲೂಕು ಮಟ್ಟದ ಹಿರಿಕಿರಿಯ ಅಧಿಕಾರಿಗಳಿಗೆ ಶೀಘ್ರವಾಗಿ ಇದರ ಕೆಲಸಕಾರ್ಯಗಳನ್ನು ಪ್ರಾರಂಭಿಸಬೇಕು ಎಂದು ಸೂಚನೆಗಳನ್ನು ನೀಡಿದ್ದರು. ಇದಾಗಿ ಎಡಿಸಿಯವರು ಅಂದು ಅಲೆಮಾರಿ ಬಿಡಾರ’ದ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಕ್ಕೆ ಸಂಬಂಧಪಟ್ಟಂತೆ ಖುದ್ದು ಸ್ಥಳ ಪರಿಶೀಲನೆ ನಡೆಸಿದ ನಂತರ ನೀಡಿದ ಸೂಚನೆಗಳ ಅನುಪಾಲನೆ ಏನಾಯಿತು. ಅವು ಎಲ್ಲಿ ಅನುಷ್ಠಾನಗೊಳ್ಳುತ್ತಿವೆಯೇ ಇಲ್ಲವೇ ಎಂಬ ಸ್ಪಷ್ಟ ಮಾಹಿತಿಯೂ ತಿಳಿಯುತ್ತಿಲ್ಲ. ಆ ಅಲೆಮಾರಿ ಬಿಡಾರ ಮಾತ್ರ ಇಂದಿಗೂ ಯಥಾಸ್ಥಿತಿಯಲ್ಲೇ ಇದೆ. ಅದರ ಪ್ರಗತಿ ಯಾವಾಗ, ಹೇಗೆ, ಎಲ್ಲಿಯವರೆಗೆ ಎಂಬುದನ್ನು ನಾವು ಯಾರನ್ನು ಕೇಳಿ ತಿಳಿಯಬೇಕು ಎಂದು ಹಂದಿಜೋಗಿ ರಾಜಣ್ಣ ಪ್ರಶ್ನಿಸಿದರು.

ಅಲೆಮಾರಿ ನಗರದಲ್ಲಿ ಈಗಾಗಲೇ ಹಂಚಿಕೆ ಮಾಡಿರುವ ನಿವೇಶನಗಳ ಅಭಿವೃದ್ಧಿ ಎಲ್ಲಿಗೆ ಬಂತು, ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಮಾಡುವ ಬದಲು ಸಮಾಜ ಕಲ್ಯಾಣ ಇಲಾಖೆಯ ಅಲೆಮಾರಿ ಅಭಿವೃದ್ಧಿ ಕೋಶದಿಂದ ಈ ಮನೆಗಳ ನಿರ್ಮಾಣ ಆಗಬೇಕಿತ್ತು. ಆದರೆ, ಆ ಅನುಕೂಲವೂ ಈಗ ತಪ್ಪಿಹೋಗಿದೆ. ಅಲೆಮಾರಿ ಅಭಿವೃದ್ಧಿ ಕೋಶದಲ್ಲಿ ಈ ಹಿಂದೆ ಅಲೆಮಾರಿಗಳ ಮನೆ ನಿರ್ಮಾಣಕ್ಕೆಂದೇ 4 ಲಕ್ಷಗಳವರೆಗೆ ಅನುದಾನವಿತ್ತು. ಆದರೀಗ ಆಶ್ರಯ ಯೋಜನೆ ಅಡಿಯಲ್ಲಿ ಅಲೆಮಾರಿಗಳಿಗೆ ಸಿಗುವುದು 2′ ಲಕ್ಷ ರೂಪಾಯಿ ಮಾತ್ರ. ಈ ಎರಡು ಲಕ್ಷ ರೂಪಾಯಿ’ಯಲ್ಲಿ ಅಲೆಮಾರಿಗಳು ಹೇಗೆ ಮನೆ ಕಟ್ಟಿಕೊಳ್ಳಲು ಸಾಧ್ಯ ಎಂದು ಅವರು ತಮ್ಮ ಸಂಕಟ ತೋಡಿಕೊಂಡರು.

ಚಿಕ್ಕನಾಯಕನಹಳ್ಳಿ2
ತುಮಕೂರು ಜಿಲ್ಲೆಯ ಎಡಿಸಿ ಶಿವಾನಂದ ಕರಾಳೆ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಅಲೆಮಾರಿಗಳ ಬಿಡಾರದ ಜಾಗಕ್ಕೆ ಭೇಟಿ ಕೊಟ್ಟ ಸಂದರ್ಭ

ಅದೇ ರೀತಿ ಅಲೆಮಾರಿ ಮಕ್ಕಳ ಹಕ್ಕುಗಳ ರಕ್ಷಣೆ, ಶೈಕ್ಷಣಿಕ ಅಭಿವೃದ್ಧಿ, ವ್ಯಸನಮುಕ್ತ ಹಾಗೂ ಸದೃಢವಾದ ಬೆಳವಣಿಗೆಗೆ ಸಂಬಂಧಿಸಿದಂತೆ ಇರುವ ಕಾರ್ಯಸೂಚಿಗಳು ಅಲೆಮಾರಿ ಬಿಡಾರಗಳಲ್ಲಿ ಅನುಷ್ಠಾನಗೊಳ್ಳಬೇಕು. ಆದರೆ ಇವ್ಯಾವು ನಿಯಮಿತವಾಗಿ ಅಲೆಮಾರಿಗಳಿಗೆ ಲಭಿಸುತ್ತಿಲ್ಲ ಎಂದು ಅಲೆಮಾರಿ ರೇಣುಕಮ್ಮ ತಮ್ಮ ಅಳಲು ತೋಡಿಕೊಂಡರು.

ತಾಲೂಕಿನ ಇನ್ನಿತರೆ ಅಲೆಮಾರಿ ಜನಾಂಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತದ ಕಾರ್ಯಕ್ರಮಗಳ ಅನುಷ್ಠಾನ ಹೇಗಾಗುತ್ತಿದೆ ಎಂಬುದನ್ನು ತಾಲೂಕು ದಂಡಾಧಿಕಾರಿಗಳಿಂದ ಮಾಹಿತಿ ಪಡೆಯುವ ಹಾಗೂ ತಮ್ಮ ಸಂಕಷ್ಟಗಳನ್ನು ಅವರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ತಾಲೂಕಿನ ಅಲೆಮಾರಿಗಳು ತಹಶೀಲ್ದಾರ್ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿದ್ದೇವೆ ಎಂದು ಅವರು ತಿಳಿಸಿದರು.

ಈಗಾಗಲೇ 77-78’ನೇ ಸ್ವಾತಂತ್ರ್ಯ ದಿನಾಚರಣೆಯ ಹೊಸ್ತಿಲಿಗೆ ಬಂದಿರುವ ವಂಚಿತ ಸಮುದಾಯಗಳಾದ ನಮಗೆ, ಕನಿಷ್ಠ ಹಕ್ಕು ಮತ್ತು ಮೂಲಭೂತ ಸೌಕರ್ಯಗಳನ್ನು ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಒದಗಿಸಿಕೊಡಬೇಕು. ಬದುಕನ್ನೇ ನಿತ್ಯದ ಸಂಘರ್ಷದಂತೆ ಬಾಳುತ್ತಿರುವ ನಾವುಗಳು, ಅನಿವಾರ್ಯವಾಗಿ ಹೋರಾಟದ ದಾರಿಗಳನ್ನೇ ಆಯ್ದುಕೊಳ್ಳಬೇಕಾಗುತ್ತದೆ ಎಂದು ಹಂದಿಜೋಗಿ ರಾಜಣ್ಣ ಹೇಳಿದರು.

bidara

ಈಗಾಗಲೇ ತಾಲೂಕು ಪಂಚಾಯತ್ ಇಲಾಖೆ, ಅಲೆಮಾರಿ ನಿವೇಶನ ಮತ್ತು ಮನೆ ನಿರ್ಮಾಣ ಕೆಲಸಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ತ್ವರಿತ ಕಾಮಗಾರಿಗಳನ್ನು ಪ್ರಾರಂಭಿಸಲಿದೆ. ಅಲೆಮಾರಿಗಳ ಕಷ್ಟಗಳ ಬಗ್ಗೆ ಬಹಳಷ್ಟು ತಿಳಿದಿರುವ ನನಗೆ ಅವರ ಅಭಿವೃದ್ಧಿ ಕೆಲಸಗಳು ಬೇಗನೆ ಅನುಷ್ಠಾನಗೊಳ್ಳುವ ಭರವಸೆಯಿದೆ ಎಂದು ತಹಶೀಲ್ದಾರ್ ಕೆ ಪುರಂದರ್ ತಿಳಿಸಿದರು.

“ನಾವು ಈಗಾಗಲೇ ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮ ಪಂಚಾಯತಿಯ ಗೌಡಗೆರೆ ಸರ್ವೆ ನಂಬರ್ 20P-1’ರ ಅಲೆಮಾರಿ ನಿವೇಶನಗಳಿರುವ ಪ್ರದೇಶಕ್ಕೆ ಭೇಟಿ ಕೊಟ್ಟು ಸ್ಥಳ ಪರಿಶೀಲನೆ ನಡೆಸಿದ್ದೇವೆ. ಈಗಾಗಲೇ ಅಲ್ಲಿ ಮಂಜೂರಾಗಿರುವ ಜಾಗದ ಫಾರ್ಮೇಶನ್, ನಿವೇಶನ ಅಭಿವೃದ್ಧಿ ಮತ್ತು ಮನೆ ನಿರ್ಮಾಣಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಪ್ರಾರಂಭಿಸುವ ಎಲ್ಲ ಪೂರ್ವ ತಯಾರಿಗಳನ್ನೂ ಮಾಡಿಕೊಳ್ಳಲಾಗುತ್ತಿದೆ” ಎಂದು ತಾ.ಪಂ.ಇಒ ದೊಡ್ಡಸಿದ್ಧಯ್ಯ ತಿಳಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಹೊನ್ನಲಕ್ಷಮ್ಮ, ಕಮಲಮ್ಮ, ರೇಖಾ, ಜ್ಯೋತಿ, ದುರ್ಗಪ್ಪ, ವೆಂಕಟೇಶ್, ಪರಮೇಶ್, ಶಾಂತರಾಜ್, ಜಗದೀಶ ಸೇರಿದಂತೆ ಹಲವಾರು ಮಂದಿ ಅಲೆಮಾರಿಗಳು ಹಾಜರಿದ್ದರು.

ವರದಿ, ಸಂಚಲನ, ಚಿಕ್ಕನಾಯಕನ ಸೀಮೆಯಿಂದ

bidara3
bidara2
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...