ಹಾಸನ l ಒಳಮೀಸಲಾತಿ ಜಾರಿಗೆ ಅಖಿಲ ಭಾರತ ಬಹುಜನ ಸಮಾಜ ಪಕ್ಷ ಆಗ್ರಹ

Date:

ರಾಜ್ಯ ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಅಖಿಲ ಭಾರತ ಬಹುಜನ ಸಮಾಜ ಪಕ್ಷ ರಾಜ್ಯ ಘಟಕದಿಂದ ಸರ್ಕಾರಕ್ಕೆ ಒತ್ತಾಯಿಸಿದರು.

- Advertisement -

ಹಾಸನ ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಬಹುಜನ ಸಮಾಜ ಪಕ್ಷ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಮಾತನಾಡಿ, “ಸುಪ್ರಿಂ ಕೋರ್ಟ್‌ ತೀರ್ಪಿನಂತೆ ಒಳಮೀಸಲಾತಿ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡ ನಿರ್ಣಯವನ್ನು ಅಖಿಲ ಭಾರತ ಬಹುಜನ ಸಮಾಜ ಪಕ್ಷ ಸ್ವಾಗತಿಸುತ್ತದೆ. ಆದರೆ ನಾನಾ ಕಾರಣಗಳನ್ನು ನೀಡುತ್ತ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಮತ್ತೊಂದು ಆಯೋಗ ರಚಿಸಿರುವುದು ಅನವಶ್ಯಕವಾಗಿದೆ. ಆದ್ದರಿಂದ ಒಳಮೀಸಲಾತಿ ಜಾರಿಯಲ್ಲಿ ವಿಳಂಬ ಮಾಡದೆ ಕೂಡಲೇ ಅನುಷ್ಠಾನಗೊಳಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಈ ಹಿಂದೆ ನ್ಯಾಯಮೂರ್ತಿ ಸದಾಶಿವ ಆಯೋಗ, ಕಾಂತರಾಜ ಆಯೋಗ, ಜೆ ಸಿ ಮಾಧುಸ್ವಾಮಿ ಸಮಿತಿಗಳು ನೀಡಿದ ವರದಿಗಳನ್ನು ಅನುಸರಿಸಿ ಮೀಸಲಾತಿ ಜಾರಿ ಸಂಬಂಧ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿತ್ತು. ಆದರೆ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. 30 ವರ್ಷಗಳ ಹಿಂದೆಯೇ ಒಳಮೀಸಲಾತಿಗೆ ಸಂಬಂಧಪಟ್ಟ ಸಮಸ್ಯೆ ಸರ್ಕಾರಗಳ ಗಮನಕ್ಕೆ ಬಂದ ಕೂಡಲೇ ಬಗೆಹರಿಸುವ ಸಾಧ್ಯತೆಗಳಿದ್ದವು” ಎಂದರು.

“ಒಳಮೀಸಲಾತಿ ಸಮಸ್ಯೆಯನ್ನು ಜೀವಂತವಾಗಿ ಇಟ್ಟುಕೊಂಡು ಜಾತಿಗಳ ಮಧ್ಯೆ ಅಪನಂಬಿಕೆ ಉಂಟುಮಾಡುವ ರಾಜಕೀಯ ಲಾಭ ಪಡೆಯುವ ಕೆಲಸವನ್ನು ಎಲ್ಲ ಪಕ್ಷಗಳು ಮಾಡುತ್ತಿವೆ” ಎಂದು ಅಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ l ಜ. 1ರಿಂದ ಮಾ. 31 ವರೆಗೆ ರಾಗಿ,ಭತ್ತ, ಬಿಳಿಜೋಳ ಖರೀದಿ: ಜಿಲ್ಲಾಧಿಕಾರಿ ಸತ್ಯಭಾಮ

ಪತ್ರಿಕಾ ಗೋಷ್ಠಿಯಲ್ಲಿ ಅಖಿಲ ಭಾರತ ಬಹುಜನ ಸಮಾಜ ಪಕ್ಷ ರಾಜ್ಯ ಘಟಕದ ಮುಖಂಡರು, ಕಾರ್ಯಕರ್ತರು, ಮಾದಿಗ ದಂಡೋರ ಸಮಿತಿ ವಿಜಯ ಕುಮಾರ್ ಹಾಗೂ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ರಸ್ತೆಯಲ್ಲಿ ಬರ್ತ್‌ಡೇ ಪಾರ್ಟಿ: ಮನೆಗೆ ಹೋಗಲು ದಾರಿ ಕೇಳಿದ ವ್ಯಕ್ತಿಯ ಮೇಲೆ ಹಲ್ಲೆ, ಮೂವರ ವಿರುದ್ಧ ದೂರು

ಮುಂಡಗೋಡ: ರಸ್ತೆಯಲ್ಲಿ ಹುಟ್ಟುಹಬ್ಬದ ಆಚರಣೆ ಮಾಡುತ್ತಿದ್ದಾಗ ಮನೆಗೆ ಹೋಗಲು ಜಾಗ ಕೇಳಿದ್ದಕ್ಕೆ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...