ಉಡುಪಿ | ಜಿಎಸ್ಟಿ ಏರಿಕೆಯಿಂದ ಮುದ್ರಣ ಕ್ಷೇತ್ರ ಸಂಕಷ್ಟ : ಸಿ.ಆರ್.ಜನಾರ್ದನ್

Date:

ಮುದ್ರಣ ಕ್ಷೇತ್ರಕ್ಕೆ ಶೇ.5ರಷ್ಟಿದ್ದ ಜಿಎಸ್ಟಿಯನ್ನು ಶೇ.18ಕ್ಕೆ ಏರಿಕೆ ಮಾಡಲಾಗಿದೆ. ಇದರಿಂದ ಪೇಪರ್ ಬೆಲೆ ಕೂಡ ಹೆಚ್ಚಳ ಆಗಿದ್ದು, ಮುದ್ರಣ ಕ್ಷೇತ್ರ ಸಾಕಷ್ಟು ನಷ್ಟ ಅನುಭವಿಸುತ್ತಿದೆ. ಈ ಸಂಬಂಧ ಮುದ್ರಣ ಮಾಲಕರ ಸಂಘದಿಂದ ಸಚಿವೆ ನಿರ್ಮಲ ಸೀತಾರಾಮನ್ ಅವರನ್ನು ಭೇಟಿ ಮಾಡಿ ಜಿಎಸ್ಟಿ ನೂನ್ಯತೆಗಳನ್ನು ಮನವರಿಕೆ ಮಾಡಲಾಗಿದೆ ಎಂದು ಅಖಿಲ ಭಾರತ ಮುದ್ರಣ ಮಾಲಕರ ಸಂಘದ ಮಾಜಿ ಅಧ್ಯಕ್ಷ, ಬೆಂಗಳೂರು ಪ್ರಿಂಟೆಕ್ ಪಾರ್ಕ್ ಕ್ಲಸ್ಟರ್ ಅಧ್ಯಕ್ಷ ಸಿ.ಆರ್.ಜನಾರ್ದನ್ ಹೇಳಿದ್ದಾರೆ.

- Advertisement -

ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮುದ್ರಣ ಮಾಲಕರ ಸಂಘ, ಡಾ.ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ಮತ್ತು ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಇವುಗಳ ಸಹಯೋಗದಲ್ಲಿ ಮಣಿಪಾಲ ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್ ನಲ್ಲಿ ಎರಡು ದಿನಗಳ ಹಮ್ಮಿಕೊಳ್ಳಲಾದ ಆಲ್ ಇಂಡಿಯಾ ಪ್ರಿಂಟ್ ಸಮ್ಮಿಟ್-2025ನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...
WhatsApp Image 2025 12 12 at 9.15.55 PM 3

ದೇಶದಲ್ಲಿರುವ ಮುದ್ರಣ ಸೇರಿದಂತೆ ಲಕ್ಷಾಂತರ ಸಣ್ಣ ಕೈಗಾರಿಕೆಗಳು ಸಾಕಷ್ಟು ಉದ್ಯೋಗಗಳನ್ನು ಸೃಷ್ಟಿ ಮಾಡಿದೆ. ಸರಕಾರ ನೀಡುವ ಉದ್ಯೋಗಗಳಿಗಿಂತ ಹೆಚ್ಚಿನ ಉದ್ಯೋಗವನ್ನು ಈ ಕೈಗಾರಿಕೆಗಳು ನೀಡುತ್ತಿದೆ. ಆದರೆ ಇದೀಗ ಜಿಎಸ್ಟಿ ಹೆಸರಿನಲ್ಲಿ ಸಣ್ಣ ಕೈಗಾರಿಕೆಗಳಿಗೆ ತೊಂದರೆ ಕೊಡುವ ಕಾರ್ಯ ಮಾಡಲಾಗುತ್ತಿದೆ. ಸರಕಾರ ಜಿಎಸ್ಟಿ ಸಂಬಂಧಿಸಿದ ನೂನ್ಯತೆ ಗಳನ್ನು ಸರಿಪಡಸಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮವನ್ನು ಮಣಿಪಾಲ ಮೀಡಿಯಾ ನೆಟ್ವರ್ಕ್ ನ ಎಕ್ಸುಕಿಟಿವ್ ಚೇಯರ್ಮೆನ್ ಟಿ.ಸತೀಶ್ ಯು.ಪೈ ದೀಪ ಬೆಳಗಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮುದ್ರಣ ಮಾಲಕರ ಸಂಘದ ಅಧ್ಯಕ್ಷ ಬಿ.ಆರ್.ಅಶೋಕ್ ಕುಮಾರ್ ವಹಿಸಿದ್ದರು.

WhatsApp Image 2025 12 12 at 9.15.55 PM 2 1

ಮಣಿಪಾಲ ಎಂಎಸ್ಡಿಸಿಯ ಚೇಯರ್ಮೆನ್ ಬ್ರೀ.ಡಾ.ಸುರ್ಜಿತ್ ಸಿಂಗ್ ಪಾಬ್ಲಾ, ದಕ್ಷಿಣ ಎಐಎಫ್ಎಂಪಿ ಉಪಾಧ್ಯಕ್ಷ ಮುಜೀಬ್ ಕೆ.ಎ., ಜತೆ ಕಾರ್ಯದರ್ಶಿ ಪಿ.ವಿ.ಸತೀಶ್ ಕುಮಾರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಪಾಲಿಟೆಕ್ನಿಕ್ನ ಪ್ರಿಂಟಿಂಗ್ ಟೆಕ್ನಾಲಜಿ ವಿಭಾಗದ ಮುಖ್ಯಸ್ಥೆ ರಜನಿ, ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದ ಅಧ್ಯಕ್ಷ ಸತೀಶ್ ನಾಯಕ್, ಮಾಜಿ ಅಧ್ಯಕ್ಷ ಯು.ಮೋಹನ ಉಪಾಧ್ಯ, ಪ್ರಮುಖರಾದ ಪ್ರಕಾಶ್ ಬಾಬು, ಮಹೇಶ್ ಕುಮಾರ್, ಎ.ಎಂ.ಪ್ರಕಾಶ್ ಉಪಸ್ಥಿತರಿದ್ದರು.

WhatsApp Image 2025 12 12 at 9.15.55 PM 1

ರಾಜ್ಯ ಮುದ್ರಣಕಾರರ ಸಮನ್ವಯ ಸಮಿತಿಯ ಸಂಚಾಲಕ ಎಂ.ಮಹೇಶ್ ಕುಮಾರ್ ಸ್ವಾಗತಿಸಿದರು. ಸಹಸಂಚಾಲಕ ಅಶೋಕ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಕಾರ್ಯದರ್ಶಿ ಅಂಶಮನ್ ಜೋಷಿ ವಂದಿಸಿದರು. ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...