ಕಾವೇರಿ ನೀರು ವಿಚಾರವಾಗಿ ಬುಧವಾರ ಸರ್ವ ಪಕ್ಷ ಸಭೆ: ಡಿಕೆ ಶಿವಕುಮಾರ್

Date:

  • ‘ತಮಿಳುನಾಡು ನೀರು ಬಳಕೆ ವಿಚಾರದಲ್ಲಿ ನಾವು ಏನನ್ನೂ ಮಾಡಿಲ್ಲ’
  • ‘ತಮಿಳುನಾಡಿಗೆ ನೀರು ಬಿಟ್ಟಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡುವೆ’

ಕಾವೇರಿ ನೀರು ವಿಚಾರವಾಗಿ ಆಗಸ್ಟ್ 23 ರಂದು ಸರ್ವ ಪಕ್ಷ ಸಭೆ ಕರೆಯಲಾಗಿದೆ. ಕರ್ನಾಟಕ ಮತ್ತು ತಮಿಳುನಾಡಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಲಹೆ ನೀಡಲು ಕೆಲ ಹಿರಿಯ ಸಂಸದ ಸದಸ್ಯರನ್ನು ಕೂಡಾ ಆಹ್ವಾನಿಸಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ತಮಿಳುನಾಡು ನೀರು ಬಳಕೆ ವಿಚಾರದಲ್ಲಿ ನಾವು ಏನನ್ನೂ ಮಾಡಿಲ್ಲ, ಜೆಡಿಎಸ್, ಬಿಜೆಪಿ ಅಧಿಕಾರದಲ್ಲಿದ್ದಾಗ ಕಾವೇರಿ ವಿಚಾರದಲ್ಲಿ ಏನು ಮಾಡಿದರು ಎಂಬುದು ಗೊತ್ತಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಬೇಕು ಆದರೆ, ಅವರು ಮಾಡಿಲ್ಲ. ನಾವು ತಮಿಳುನಾಡಿಗೆ ಎಷ್ಟು ಪ್ರಮಾಣದ ನೀರು ಬಿಟ್ಟಿದ್ದೇವೆ ಎಂಬುದರ ಬಗ್ಗೆ ದಾಖಲೆಗಳಿವೆ. ಎಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು” ಎಂದರು.

“ಕರ್ನಾಟಕ ಮತ್ತು ತಮಿಳುನಾಡು ನೆರೆಹೊರೆಯ ರಾಜ್ಯಗಳಾಗಿದ್ದು, ಕಾವೇರಿ ವಿವಾದದಲ್ಲಿ ಉಭಯ ರಾಜ್ಯಗಳು ಪರಸ್ಪರ ಹೋರಾಡಲು ಬಯಸುವುದಿಲ್ಲ. ಪರಸ್ಪರ ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಅದನ್ನು ವಿಪಕ್ಷಗಳ ನಾಯಕರು ಅರ್ಥ ಮಾಡಿಕೊಳ್ಳಬೇಕಾಗಿದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

“ತಮಿಳುನಾಡಿಗೆ ಪ್ರತಿದಿನ 24,000 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಉನ್ನತ ನ್ಯಾಯಾಲಯ ಆದೇಶಿಸಿದೆ. ಆದರೆ, ಕರ್ನಾಟಕ ರಾಜ್ಯ ನೀರಿನ ಕೊರತೆ ಎದುರಿಸುತ್ತಿದೆ. ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಆಗಸ್ಟ್ ವರೆಗೂ 10,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲು ನಮಗೆ ಸೂಚಿಸಲಾಗಿತ್ತು. ನಮ್ಮ ಅಣೆಕಟ್ಟುಗಳಲ್ಲಿ ನೀರಿನ ಕೊರತೆಯಿದ್ದು, ಕನಿಷ್ಠ ಪಕ್ಷ ಸಮಯಾವಕಾಶದ ಅಗತ್ಯವಿದೆ” ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತ ಯುವಕರ ದಾರಿ ತಪ್ಪಿಸುತ್ತಿದೆ ಕೋಮುವಾದಿ ಸಂಘಟನೆ; ಮುತ್ತು ಬಿಳಿಯಲಿ ಆರೋಪ

ಗದಗ ಜಿಲ್ಲಾಧಿಕಾರಿ ಕಚೇರಿ ಮುಂದೆ 'ದಲಿತ ಮಿತ್ರ ಮೇಳ ಗದಗ' ಎಂಬ...

ಕಲಬುರಗಿ | ಭಿಕ್ಷೆ ಬೇಡಿ ಬದುಕುತ್ತಿರುವ ಅಲೆಮಾರಿ ಸಮುದಾಯಕ್ಕಿಲ್ಲ ನೆಲೆ

ಅಲೆಮಾರಿ ಸಮುದಾಯದ 40 ಕುಟುಂಬಗಳ ಜನರು ಜೇವರ್ಗಿ ಪಟ್ಟಣದ ಕೊಳ್ಳಕೂರು ಕ್ರಾಸ್...

ಮಂಗಳೂರು | ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಉಮರ್ ಯು ಹೆಚ್ ಅಧಿಕಾರ ಸ್ವೀಕಾರ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಇತ್ತೀಚೆಗಷ್ಟೇ ನೇಮಕಗೊಂಡಿದ್ದ ಉಮರ್...

ರೇಣುಕಸ್ವಾಮಿ ಕೊಲೆ | ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಬೇಕು: ಬಸವರಾಜ ಬೊಮ್ಮಾಯಿ

ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ...