ಕಲ್ಯಾಣ ಕರ್ನಾಟಕ ಸರ್ವಾಂಗೀಣ ಅಭಿವೃದ್ಧಿ ನಮ್ಮ ಸರ್ಕಾರದ ಗುರಿ : ಸಿಎಂ ಸಿದ್ದರಾಮಯ್ಯ

Date:

ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ದೊರೆತರೂ ಇದುವರೆಗೆ ಇಲ್ಲಿ ಸಚಿವಾಲಯ ಸ್ಥಾಪನೆಯಾಗಿರಲಿಲ್ಲ. ಇದನ್ನು ಮನಗಂಡ ನಮ್ಮ ಸರ್ಕಾರವು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಸಚಿವಾಲಯವನ್ನು ಸ್ಥಾಪಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಮುಂದಿನ ವಾರದೊಳಗೆ ಹುದ್ದೆಗಳ ಸಮೇತ ಅಧಿಸೂಚನೆ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಡಿ ಕಲಬುರಗಿಯ ಡಿ.ಎ.ಆರ್. ಮೈದಾನದಲ್ಲಿ ಬುಧವಾರ ಬೆಳಗ್ಗೆ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ʼಡಾ.ನಂಜುಂಡಪ್ಪ ಸಮಿತಿಯ ವರದಿಯ ಅನುಷ್ಠಾನದಿಂದಾಗಿ ಹಿಂದುಳಿದ ತಾಲ್ಲೂಕುಗಳಲ್ಲಿ ಆಗಿರುವ ಸುಧಾರಣೆಗಳು ಹಾಗೂ ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರೊ.ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಸದರಿ ಸಮಿತಿಯು ವರದಿ ಸಲ್ಲಿಸಿದ ಕೂಡಲೇ ಸಾಧಕ ಬಾಧಕಗಳನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದುʼ ಎಂದರು.

ʼಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಾಗದ ಹೊರತು ಸಂಪೂರ್ಣ ರಾಜ್ಯದ ಅಭಿವೃದ್ಧಿ ಅಸಾಧ್ಯ. ಇಲ್ಲಿನ ಜನರ ತಲಾದಾಯವನ್ನು ಹೆಚ್ಚಿಸುವುದರ ಜೊತೆಗೆ ಶಿಕ್ಷಣ, ಆರೋಗ್ಯ, ಉದ್ಯೋಗ, ಮೂಲಸೌಕರ್ಯ ಸುಧಾರಣೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿ ನಮ್ಮ ಸರ್ಕಾರದ ಗುರಿಯಾಗಿದೆ. ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡಲು ಬದ್ಧರಾಗಿ ದೃಢ ಸಂಕಲ್ಪ ಮಾಡುವುದರ ಮೂಲಕ ನವ ಭಾರತ ಮತ್ತು ನವ ಕರ್ನಾಟಕ ನಿರ್ಮಿಸೋಣʼ ಎಂದು ಕರೆ ನೀಡಿದರು.

ʼಕಲಬುರಗಿಯಲ್ಲಿ ಬಸವಣ್ಣ ಹಾಗೂ ಇತರ ಶರಣರ ವಚನಗಳನ್ನು ವಿಶ್ವಕ್ಕೆ ಪರಿಚಯಿಸುವ ಉದ್ದೇಶದಿಂದ ʼವಚನ ಮಂಟಪʼವನ್ನು ಸ್ಥಾಪಿಸಲಾಗುತ್ತಿದೆ. ಈಗಾಗಲೇ ಜಮೀನು ಗುರುತಿಸಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಿಸಲಾಗುವುದು. ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಬಸವಕಲ್ಯಾಣದಲ್ಲಿ ‘ಅನುಭವ ಮಂಟಪ’ವನ್ನು ವಿನ್ಯಾಸಗೊಳಿಸಿ ಶಂಕುಸ್ಥಾಪನೆ ಮಾಡಿದ್ದೆವು. ಈಗ ಅದಕ್ಕೆ ಅಗತ್ಯವಿರುವ ಅನುದಾನ ಒದಗಿಸುತ್ತಿದ್ದೇವೆ. ವರ್ಷಾಂತ್ಯದಲ್ಲಿ ಅದನ್ನು ಲೋಕಾರ್ಪಣೆ ಮಾಡುತ್ತೇವೆʼ ಎಂದು ತಿಳಿಸಿದರು.

WhatsApp Image 2025 09 17 at 6.52.45 PM

ʼಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು ₹100 ಕೋಟಿ ಒದಗಿಸಲು ಬದ್ಧವಾಗಿದ್ದೇವೆ. ಈಗಾಗಲೇ ₹10 ಕೋಟಿ ನೀಡಿದ್ದೇವೆ. ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ 2025-26ನೇ ಸಾಲಿನಲ್ಲಿ ಒಟ್ಟು ₹25 ಕೋಟಿ ಅನುದಾನ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ 16 ಹೊಸ ತಾಲೂಕುಗಳಲ್ಲಿ ಆಡಳಿತಾತ್ಮಕವಾಗಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ₹138 ಕೋಟಿ ಅನುದಾನದಲ್ಲಿ ʼಪ್ರಜಾ ಸೌಧʼ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆʼ ಎಂದು ಹೇಳಿದರು.

ʼವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ಬೆಳವಣಿಗೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ, ತಾರಾಲಯಗಳನ್ನು ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ. ಕಲಬುರಗಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಲಾಗುತ್ತಿದ್ದು, ಒಟ್ಟಾರೆ ₹390 ಕೋಟಿ ವೆಚ್ಚದಲ್ಲಿ ಕಲಬುರಗಿ ಜವಳಿ ಪಾರ್ಕಿಗೆ ವಿವಿಧ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ. ಇದರಿಂದ 1 ಲಕ್ಷ ಜನರಿಗೆ ನೇರ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗುವ ನಿರೀಕ್ಷೆಯಿದೆʼ ಎಂದು ಮಾಹಿತಿ ನೀಡಿದರು.

ಖಾಲಿ ಇರುವ 5,267 ಶಿಕ್ಷಕರ ಹುದ್ದೆ ಭರ್ತಿಗೆ ಸೂಚನೆ :

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಟ್ಟು 350 ಕೆಪಿಎಸ್ ಶಾಲೆಗಳನ್ನು ಮುಂದಿನ ಎರಡು ವರ್ಷಗಳಲ್ಲಿ ನಿರ್ಮಿಸುವ ಗುರಿ ಹೊಂದಿದ್ದೇವೆ. ಇದಲ್ಲದೆ ಉನ್ನತ ಶಿಕ್ಷಣಕ್ಕೂ ಕಳೆದ ಎರಡು ವರ್ಷಗಳಲ್ಲಿ ₹250 ಕೋಟಿ ಒದಗಿಸಿದ್ದೇವೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಒಟ್ಟು 5,267 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಭರ್ತಿ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಈ ವರ್ಷದಿಂದ 10ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿಗಳನ್ನು ಪ್ರಾರಂಭಿಸುತ್ತಿದ್ದೇವೆʼ ಎಂದು ತಿಳಿಸಿದರು.

ʼಈ ಭಾಗದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಗಳಲ್ಲಿ ಉತ್ತೀರ್ಣರಾಗುವವರ ಪ್ರಮಾಣ ತೀರಾ ಕಡಿಮೆ ಇದೆ. ಶಿಕ್ಷಣದ ಗುಣಮಟ್ಟ ಕಾಪಾಡಲು, ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಹೆಚ್ಚಳ ಹಾಗೂ ವಸತಿ ನಿಲಯ ಕಟ್ಟಡ ನಿರ್ಮಾಣ ಹೀಗೆ ಅನೇಕ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕಳೆದ ಎರಡು ವರ್ಷದಿಂದ ‘ಅಕ್ಷರ ಆವಿಷ್ಕಾರ’ ಕಾರ್ಯಕ್ರಮ ರೂಪಿಸಿ ಇದೂವರೆಗೆ ₹6 ಸಾವಿರ ಕೋಟಿಗಳಿಗಿಂತ ಹೆಚ್ಚಿನ ಅನುದಾನಗಳನ್ನು ಖರ್ಚು ಮಾಡಲಾಗಿದೆʼ ಎಂದರು.

ʼಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರಸಕ್ತ 2025-26ನೇ ಸಾಲಿಗೆ ₹5 ಸಾವಿರ ಕೋಟಿ ಒದಗಿಸಿ, ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತುಪಡಿಸಿದೆ. ಡಾ.ಅಜಯ್ ಧರ್ಮಸಿಂಗ್ ಅವರ ಅಧ್ಯಕ್ಷತೆಯ ಮಂಡಳಿಯು ಸಿದ್ಧಪಡಿಸಿದ್ದ ಕ್ರಿಯಾಯೋಜನೆಗೆ ಅನುಮೋದನೆ ದೊರೆತಿದ್ದು, ಕಾಮಾಗಾರಿಗಳು ಆರಂಭವಾಗುತ್ತಿವೆ. ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗಾಗಿ ಕೆಕೆಆರ್‌ಡಿಬಿ ವತಿಯಿಂದ ಒಟ್ಟು ₹200 ಕೋಟಿ ಅನುದಾನವನ್ನು ಒದಗಿಸಿದ್ದೇವೆʼ ಎಂದರು.

ಇದನ್ನೂ ಓದಿ : ದಲಿತ ಮಹಿಳೆಯರ ಬಗ್ಗೆ ಯತ್ನಾಳ ಹೇಳಿಕೆ | ಬಿಜೆಪಿ ನಾಯಕರು ಮೌನವಾಗಿರುವುದೇಕೆ? : ಪ್ರಿಯಾಂಕ್‌ ಖರ್ಗೆ

ʼಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ 2025-26ನೇ ಸಾಲಿನಲ್ಲಿ ಒಟ್ಟು ₹25 ಕೋಟಿ ಅನುದಾನ ನೀಡಲಾಗಿದೆ. ಕಳೆದ ವರ್ಷ ಕಲಬುರಗಿಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ₹11,770 ಕೋಟಿಗಳಷ್ಟು ಬೃಹತ್ ಮೊತ್ತದ ಯೋಜನೆಗಳು ಹಾಗೂ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ತೀರ್ಮಾನ ಮಾಡಲಾಗಿತ್ತು. ಅದರಂತೆ ಅದರಲ್ಲಿ ಬಹುತೇಕ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆʼ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...