ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಆರೋಪ : ಸೋಷಿಯಲ್ ಮೀಡಿಯಾಗಳಲ್ಲಿ ಪತ್ರ ವೈರಲ್

Date:

  • ಬೈಂದೂರಿನ ಹೊಟೇಲ್ ಉದ್ಯಮಿ ಗೋವಿಂದ ಬಾಬು ಪೂಜಾರಿ ಹೆಸರಲ್ಲಿ ಪತ್ರ ವೈರಲ್
  • ‘ಇವೆಲ್ಲವೂ ಸುಳ್ಳು ಸುದ್ದಿ, ಸೈಬರ್ ಪೊಲೀಸರಿಗೆ ದೂರು ಕೊಡುತ್ತೇವೆ’ ಎಂದ ಚೈತ್ರಾ ಕುಂದಾಪುರ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಪಕ್ಷ ಮತ್ತು ಆರ್‌ಎಸ್‌ಎಸ್‌ ಹೆಸರಿನಲ್ಲಿ ಕೋಟ್ಯಂತರ ರೂ. ಪಡೆದು ಕೆಲವರು ವಂಚಿಸಿರುವುದಾಗಿ ಆರೋಪಿಸಿ, ಸೋಷಿಯಲ್ ಮೀಡಿಯಾಗಳಲ್ಲಿ ಪತ್ರವೊಂದು ವೈರಲ್ ಆಗಿದೆ.

ಕುಂದಾಪುರದ ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರ ಹೆಸರಿನಲ್ಲಿ ಈ ಪತ್ರ ಹರಿದಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

‘ನಾನು ಗೋವಿಂದ ಬಾಬು ಪೂಜಾರಿ’ ಎಂಬ ಹೆಸರಿನ ಒಕ್ಕಣೆಯಿಂದ ಪ್ರಾರಂಭವಾಗಿರುವ ಪತ್ರದಲ್ಲಿ, ‘ಬಿಜೆಪಿಯ ಕುಂದಾಪುರ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಟಿಕೆಟ್‌ಗಾಗಿ ಒಟ್ಟು ಮೂರೂವರೆ ಕೋಟಿ ನೀಡಿದ್ದೇನೆ. ಆದರೆ ನನಗೆ ಸಂಘದ ಹಾಗೂ ಪಕ್ಷದ ಹೆಸರಿನಲ್ಲಿ ಮೋಸ ಮಾಡಿರುವುದು ಗೊತ್ತಾಗಿದೆ. ಜವಾಬ್ದಾರಿ ಸ್ಥಾನದಲ್ಲಿ ಇರುವಂತಹ ನನ್ನ ಜೀವನದಲ್ಲಿ ಇದು ದೊಡ್ಡ ಮೋಸ. ಆದ್ದರಿಂದ ಹಿರಿಯವರಾದ ತಮ್ಮಲ್ಲಿ ವಿನಂತಿಸುವುದೇನೆಂದರೆ ನನಗೆ ನ್ಯಾಯ ಒದಗಿಸಿ ಕೊಡುತ್ತೀರಿ ಎಂದು ನಂಬಿರುತ್ತೇನೆ’ ಎಂದು ಕೊನೆಯಲ್ಲಿ ತಿಳಿಸಲಾಗಿದೆ. ಒಟ್ಟು ನಾಲ್ಕು ಪುಟದ ಪತ್ರದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪತ್ರದಲ್ಲಿ ಸಂಘಪರಿವಾರದಲ್ಲಿ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ ಹಾಗೂ ಅವರ ಮೂಲಕ ಪರಿಚಯವಾದ ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಗಗನ್ ಕಡೂರು, ಹೊಸಪೇಟೆಯ ಹಾಲಶ್ರೀ ಮಠದ ಹಾಲಶ್ರೀ ಸ್ವಾಮೀಜಿಯ ಹೆಸರು ಸೇರಿದಂತೆ ಮೊಬೈಲ್ ಸಂಖ್ಯೆಯನ್ನು ಕೊನೆಯಲ್ಲಿ ಉಲ್ಲೇಖಿಸಿರುವುದು ಕಂಡು ಬಂದಿದೆ. ಆದರೆ ಈ ಪತ್ರವನ್ನು ಯಾರಿಗೆ, ಯಾವಾಗ ಬರೆಯಲಾಗಿದೆ ಎಂಬ ಉಲ್ಲೇಖವಿಲ್ಲ.

ಗೋವಿಂದ ಬಾಬು ಪೂಜಾರಿ ಮತ್ತು ಚೈತ್ರಾ ಕುಂದಾಪುರ ಫೋಟೋ ಬಳಸಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿರುವ ಪೋಸ್ಟರ್

ಈ ಹಿನ್ನೆಲೆಯಲ್ಲಿ ಈ ದಿನ.ಕಾಮ್ ಗೋವಿಂದ ಬಾಬು ಪೂಜಾರಿಯವರನ್ನು ಸಂಪರ್ಕಿಸಲಾಯಿತು.

‘ನಿಮ್ಮ ಹೆಸರಿನಲ್ಲಿ ಸೋಷಿಯಲ್ ಮೀಡಿಯಾಗಳಲ್ಲಿ ಪತ್ರ ವೈರಲ್ ಆಗಿರುವ ಬಗ್ಗೆ ಮಾಹಿತಿ ಇದೆಯೇ? ಇದು ನಿಜವೇ? ಸುಳ್ಳಾ? ನೀವೇ ಬರೆದಿರೋದಾ? ಎಂದು ಕೇಳಿದಾಗ, ‘ನಾನು ಕಾರ್ಯಕ್ರಮವೊಂದರಲ್ಲಿದ್ದೇನೆ. 15 ನಿಮಿಷ ಬಿಟ್ಟು ಕರೆ ಮಾಡಿ’ ಎಂದರು.

ಕೆಲ ಸಮಯದ ಬಳಿಕ ಅವರನ್ನು ಈ ದಿನ.ಕಾಮ್ ಸಂಪರ್ಕಕ್ಕೆ ಪ್ರಯತ್ನಿಸಲಾಯಿತಾದರೂ, ಕರೆ ಸ್ವೀಕರಿಸಿಲ್ಲ.

ಚೈತ್ರಾ ಕುಂದಾಪುರ

ಅಲ್ಲದೇ, ಪತ್ರದಲ್ಲಿ ಹೆಸರು ಉಲ್ಲೇಖಗೊಂಡಿದ್ದ ಹಿನ್ನೆಲೆಯಲ್ಲಿ ಈ ದಿನ.ಕಾಮ್ ಚೈತ್ರಾ ಕುಂದಾಪುರ ಅವರನ್ನು ಸಂಪರ್ಕಿಸಿದಾಗ ಕರೆ ಸ್ವೀಕರಿಸಿದರು. ಪತ್ರದ ಬಗ್ಗೆ ಕೇಳಿದಾಗ, ‘ಆ ಪತ್ರ ಗೋವಿಂದ ಬಾಬು ಪೂಜಾರಿ ಬರೆದಿದ್ದಾರೆ ಅನ್ನೋದಕ್ಕೆ ಏನಾದರೂ ಸಾಕ್ಷಿ ಇದೆಯಾ? ಅಥವಾ ಅವರ ಸಹಿ ಇದೆಯಾ? ಅಥವಾ ಅವರೇನಾದರೂ ವಂಚನೆ ಆಗಿರುವ ಬಗ್ಗೆ ಪೊಲೀಸರಿಗೆ ದೂರು ಕೊಟ್ಟಿದ್ದಾರಾ? ಎಫ್ಐಆರ್ ಏನಾದರೂ ಆಗಿದೆಯಾ?’ ಎಂದು ಕೇಳಿದರು.

‘ಇವೆಲ್ಲವೂ ಸುಳ್ಳು ಸುದ್ದಿ. ಸೋಷಿಯಲ್ ಮೀಡಿಯಾಗಳಲ್ಲಿ ಫೇಕ್ ಲೆಟರ್‌ಗಳನ್ನು ಹಾಕಿ, ನಮ್ಮ ತೇಜೋವಧೆ ಮಾಡುತ್ತಿರುವ ಬಗ್ಗೆ ಎಲ್ಲರ ವಿರುದ್ಧ ಸೈಬರ್ ಪೊಲೀಸರಿಗೆ ದೂರು ಕೊಡುತ್ತೇವೆ. ಇಂತಹ ಪತ್ರವೆಲ್ಲವೂ ಕಾಂಗ್ರೆಸ್ ಬೆಂಬಲಿತ ಕಾರ್ಯಕರ್ತರ ಸೃಷ್ಟಿ ಆಗಿರಬಹುದು. ಪೊಲೀಸರಿಗೆ ದೂರು ಕೊಟ್ಟ ಬಳಿಕ ತಿಳಿಸುತ್ತೇನೆ’ ಎಂದು ಚೈತ್ರಾ ಕುಂದಾಪುರ ಈ ದಿನ.ಕಾಮ್ಗೆ ತಿಳಿಸಿದ್ದಾರೆ.

ಉಳಿದಂತೆ ಪತ್ರದಲ್ಲಿರುವ ಗಗನ್ ಕಡೂರು ಹಾಗೂ ಹಾಲಶ್ರೀ ಸ್ವಾಮೀಜಿಯ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲಾಯಿತಾದರೂ ‘ಸ್ವಿಚ್ಧ್ ಆಫ್’ ಆಗಿದೆ.

ಹರಿದಾಡಿದ ಪತ್ರದ ನಾಲ್ಕು ಪುಟದ ಪ್ರತಿಗಳು

ಪುಟ 1
ಪುಟ 2
ಪುಟ 3
ಪುಟ 4

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,...

ಬೆಂಗಳೂರು | 2 ವರ್ಷಗಳ ಬಳಿಕ ಪೀಣ್ಯ ಫ್ಲೈಓವರ್‌ನಲ್ಲಿ ಭಾರೀ ವಾಹನ ಸಂಚಾರ ಅವಕಾಶ; ಷರತ್ತೂ ಅನ್ವಯ

ಬೆಂಗಳೂರಿನಿಂದ ಕರ್ನಾಟಕದ ಉತ್ತರ ಭಾಗಕ್ಕೆ ಸಂಪರ್ಕ ಒದಗಿರುವ ತುಮಕೂರು ರಸ್ತೆಯಲ್ಲಿರುವ ಪೀಣ್ಯ...