ಕರ್ತವ್ಯಲೋಪ ಆರೋಪದ ಮೇರೆಗೆ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರೊಬ್ಬರನ್ನು ಶಿಕ್ಷಣ ಇಲಾಖೆ ಉಪ ನಿರ್ದೇಶಕ(ಆಡಳಿತ) ಸಕ್ರೆಪ್ಪಗೌಡ ಬಿರಾದರ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪೂರ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಸಾಯಬಣ್ಣ ಅವರನ್ನು ಅಮಾನತು ಮಾಡಲಾಗಿದೆ.
ಮುಖ್ಯ ಶಿಕ್ಷಕ ಮೇಲಾಧಿಕಾರಿಗಳ ಅನುಮತಿ ಪಡೆಯದೇ ರಜೆಯ ಮೇಲೆ ಹೋಗಿರುವುದು ಹಾಗೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಮರ್ಪಕವಾಗಿ ವಿತರಿಸದಿರುವುದು, ಆಹಾರ ಸಾಮಗ್ರಿಗಳ ಖರ್ಚು ಮತ್ತು ಹಣಕಾಸಿನ ಖರ್ಚು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದೆ ಕರ್ತವ್ಯ ಲೋಪವೆಂದು ಪರಿಗಣಿಸಿ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಕ್ರೆಪ್ಪಗೌಡ ಜಿ ಬಿರಾದಾರ ಆದೇಶದಲ್ಲಿ ತಿಳಿಸಿದ್ದಾರೆ.