ಆಸ್ತಿಗಾಗಿ ಕಿರುಕುಳ ನೀಡಿದ್ದರಿಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆರಬೊಮ್ಮನಹಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬಸವಣ್ಣಪ್ಪ ಬಿರಾದಾರ್ ಮೃತ ಯುವಕ ಎಂದು ಗುರುತಿಸಲಾಗಿದೆ. ಅಕ್ಟೋಬರ್ 19ರಂದು ಕ್ರಿಮಿನಾಶಕ ಕುಡಿದು ತೀವ್ರ ಅಸ್ವಸ್ಥಗೊಂಡ ಯುವಕನನ್ನು ಸೇಡಂ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪತ್ನಿ ಹಾಗೂ ಆಕೆಯ ಅಣ್ಣನ ಆಸ್ತಿಗಾಗಿ ಕಿರುಕುಳ ನೀಡಿದ ಕಾರಣಕ್ಕೆ ಬೇಸತ್ತು ತನ್ನ ಪುತ್ರ ಕ್ರಿಮಿನಾಶಕ ಔಷಧಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಸಾವಿಗೆ ಸೊಸೆ ಗೌರಮ್ಮ ಹಾಗೂ ಸೊಸೆಯ ಅಣ್ಣನೇ ಕಾರಣ ಎಂದು ಮೃತ ಯುವಕನ ತಂದೆ ಆರೋಪಿಸಿದ್ದಾರೆ.