ಶಿವಮೊಗ್ಗ | ನೀಟ್ ಪರೀಕ್ಷೆಯಲ್ಲಿ ಅಕ್ರಮ ಆರೋಪ; ತನಿಖೆಗೆ ಎನ್‌ಎಸ್‌ಯುಐ ಆಗ್ರಹ

Date:

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪಗಳಿದ್ದು, ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಈಗ ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಎನ್‌ಎಸ್‌ಯುಐ ಆಗ್ರಹಿಸಿದೆ.

- Advertisement -

ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪಕ್ಷ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, “ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದರು.

“ನೀಟ್ ಫಲಿತಾಂಶ ವಿವಾದವಾಗಲು ಅನೇಕ ಅಂಶಗಳು ಕಾರಣವಾಗಿವೆ. ಒಟ್ಟು 67 ವಿದ್ಯಾರ್ಥಿಗಳು, ಮೊದಲ ಯಾಂಕ್ ಬಂದಿರುವುದು ಹಾಗೂ ಒಂದೇ ಪರೀಕ್ಷಾ ಕೇಂದ್ರದ 8 ವಿದ್ಯಾರ್ಥಿಗಳು ಪ್ರಥಮ ರ್ಯಾಂಕ್‌ ಪಡೆದಿರುವುದು ಅಕ್ರಮವನ್ನು ಸೂಚಿಸುತ್ತದೆ. ಪ್ರಶ್ನೆ ಪತ್ರಿಕೆ ಸೋರಿಕೆ. ಒಂದೇ ತರಬೇತಿ ಕೇಂದ್ರ ಇವೆಲ್ಲವೂ ನೀಟ್ ಪರೀಕ್ಷೆಯಲ್ಲಿ ಅಕ್ರಮಕ್ಕೆ ಕಾರಣವಾಗಿವೆ” ಎಂದು ಆರೋಪಿಸಿದ್ದಾರೆ.

“ತರಾತುರಿಯಲ್ಲಿ ಕೃಪಾಂಕ ನೀಡಿರುವುದು, ಲೋಕಸಭೆ ಚುನಾವಣಾ ಫಲಿತಾಂಶ ದಿನದಂದು ನೀಟ್ ಫಲಿತಾಂಶ ಪ್ರಕಟಿಸಿರುವುದು ಅನುಮಾನಗಳನ್ನು ಹೆಚ್ಚಿಸಿದೆ. ನೀಟ್ ಪರೀಕ್ಷೆ ಫಲಿತಾಂಶ ನಂತರ ದೇಶದ ಕೆಲವೆಡೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕಿದೆ” ಎಂದಿದ್ದಾರೆ.

“ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು. ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ ಕೂಡಲೇ ಮರು ಪರೀಕ್ಷೆ ನಡೆಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...