ವಿಜಯಪುರ | ಗ್ರಾ.ಪಂನಲ್ಲಿ ಅವ್ಯವಹಾರ ಆರೋಪ; ತನಿಖೆಗೆ ಆಗ್ರಹ

Date:

Advertisements
  • ಎರಡು ವರ್ಷಗಳಲ್ಲಿ ₹40 ರಿಂದ ₹50 ಲಕ್ಷ ನಕಲಿ ಬಿಲ್‌ ಮಾಡಿರುವ ಆರೋಪ
  • 2022ರ ನ. 14ರಂದು ಜಿಲ್ಲಾ ಪಂಚಾಯಿತಿ ಸಿಇಒಗೆ ದೂರು ನೀಡಲಾಗಿತ್ತು

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿ.ಬಿ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಅವ್ಯವಹಾರ ನಡೆದಿದ್ದು, ಈ ಸಂಬಂಧ ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅಪ್ಪು ನಾಯಕ್ ಆಗ್ರಹಿಸಿದರು.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಬಸವನಬಾಗೇವಾಡಿ ತಾಲೂಕಿನ ಹುಣಿಶ್ಯಾಳ ಪಿ ಬಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ಪಿಡಿಒ ಮತ್ತು ಅಧ್ಯಕ್ಷರು ಆರು ತಿಂಗಳ ಒಳಗೆ ₹8 ಲಕ್ಷ ದಾಖಲೆ ಇಲ್ಲದ ಬಿಲ್ಲನ್ನು ತೆಗೆದುಕೊಂಡಿದ್ದಾರೆ. ಈ ಸಂಬಂಧ ಅಗತ್ಯ ದಾಖಲೆಗಳು ನನ್ನ ಬಳಿ ಇವೆ. ಎರಡು ವರ್ಷಗಳಲ್ಲಿ ₹40 ರಿಂದ ₹50 ಲಕ್ಷ ನಕಲಿ ಬಿಲ್‌ ಮಾಡಿದ್ದಾರೆ” ಎಂದು ಆರೋಪಿಸಿದರು.

“ಗ್ರಾಮಗಳಲ್ಲಿ ಹಲವಾರು ಸಮಸ್ಯೆಗಳಿದ್ದು, ಬೀದಿ ದೀಪವಾಗಲಿ ಕುಡಿಯುವ ನೀರಾಗಲಿ ಯಾವುದೇ ಕೆಲಸ ಮಾಡದೆ. ತಮ್ಮ ಮನಸ್ಸಿಗೆ ಬಂದಂತೆ ಬೆಲ್‌ ನೀಡಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಪ್ರಶ್ನೆ ಮಾಡಿದರೆ ಉಡಾಫೆ ಉತ್ತರ ನೀಡುತ್ತಾರೆ. ಇಲ್ಲಿಯವರೆಗೆ ಯಾವುದೇ ಮಾಹಿತಿ ಕೊಡದೆ ಸತಾಯಿಸಿದ್ದಾರೆ” ಎಂದು ದೂರಿದರು.

Advertisements

ಈ ಸುದ್ದಿ ಓದಿದ್ದೀರಾ? ಕೇಂದ್ರ ಸರ್ಕಾರ ಅಕ್ಕಿ ನೀಡದಿದ್ದರೆ ನಾವೇ ಖರೀದಿಸುತ್ತೇವೆ: ಸಚಿವ ಮುನಿಯಪ್ಪ

“ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಸೂಕ್ತ ತನಿಖೆ ಆಗಬೇಕು. 2022ರ ನವೆಂಬರ್‌ 14ರಂದು ವಿಜಯನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ತಿಳಿಸಿದರೂ ಈವರೆಗೂ ಯಾವುದೇ ತನಿಖೆಯಾಗಿಲ್ಲ. ತಾಲೂಕು ಪಂಚಾಯಿತಿ ಅಧಿಕಾರಿಗಳೂ ಕ್ರಮ ತೆಗೆದುಕೊಂಡಿಲ್ಲ” ಎಂದು ಅಸಮಧಾನ ವ್ಯಕ್ತಪಡಿಸಿದರು.

“ಮುಂದಿನ ಎರಡು ಮೂರು ದಿನಗಳಲ್ಲಿ ಮೇಲಾಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಂಡು ತನಿಖೆ ಮಾಡಿ ನ್ಯಾಯ ಕೊಡಿಸಬೇಕು. ಇಲ್ಲದಿದ್ದರೆ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲಣ್ಣ ಕೊಂಡಗುಳಿ, ದೇವರೆಡ್ಡಿ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X