ಸರ್ಕಾರದ ಹಣ ದುರ್ಬಳಕೆ ಆರೋಪದಡಿಯಲ್ಲಿ ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅಶ್ವಿನಿ ವಿರುದ್ಧ ಮಾನ್ನಾಏಖೆಳ್ಳಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.
ಪಿಡಿಒ ಅಶ್ವಿನಿ ಅವರು 2023-24ನೇ ಸಾಲಿನಲ್ಲಿ 15ನೇ ಹಣಕಾಸು ಯೋಜನೆಯಡಿ ಕ್ರಿಯಾ ಯೋಜನೆಯನ್ನು ತಯಾರಿಸದೇ ಹಾಗು ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆಯದೆ ಸರ್ಕಾರದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಹಣ ಖರ್ಚು ಮಾಡಿದ್ದ ಆರೋಪ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಸೂಲಿಯಾದ ತೆರಿಗೆ ಮೊತ್ತವನ್ನು ಗ್ರಾಮ ಪಂಚಾಯಿತಿನ ಸಿಬ್ಬಂದಿ ಹೆಸರಿನಲ್ಲಿ ಚೆಕ್ ನೀಡಿ ನಿಯಮ ಬಾಹಿರವಾಗಿ ಖರ್ಚು ಮಾಡಿ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಬಗ್ಗೆ ಜಂಟಿ ವರದಿಯಿಂದ ಗೊತ್ತಾಗಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಡಾ.ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ : ಜಿಲ್ಲಾದ್ಯಂತ ಭುಗಿಲೆದ್ದ ಆಕ್ರೋಶ
ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಚಿಟಗುಪ್ಪ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ ಮದರಗಾಂವ ಅವರು ಪಿಡಿಒ ಅಶ್ವಿನಿ ವಿರುದ್ಧ ಮನ್ನಾಎಖೇಳಿ ಠಾಣೆಗೆ ದೂರು ಕೊಟ್ಟಿದ್ದಾರೆ. ದೂರಿನ ಅನ್ವಯ ಪಿಡಿಒ ಅಶ್ವಿನಿ ವಿರುದ್ಧ ಪ್ರಕರಣ ದಾಖಲಾಗಿದೆ.