ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಅಕ್ರಮ ಆರೋಪ : ತನಿಖೆಗೆ ಆದೇಶಿಸಿದ ಆರೋಗ್ಯ ಸಚಿವ ಗುಂಡೂರಾವ್

Date:

Advertisements

ವೆನ್ಲಾಕ್ ಆಸ್ಪತ್ರೆಯಲ್ಲಿನ 50 ಬೆಡ್ ಆಯುಷ್ ಆಸ್ಪತ್ರೆಯ ಉಪಕರಣ ಖರೀದಿಗೆ 28 ಲಕ್ಷ ವೆಚ್ಚದ ಸಿಎಸ್.ಆರ್ ಯೋಜನೆಯ ಪ್ರಕರಣ ಇದೀಗ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಅಂಗಳದಲ್ಲಿದೆ. ಈ ಪ್ರಕರಣದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ, ಕೂಲಂಕುಷವಾದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಆದೇಶಿಸಿದ್ದಾರೆ.

ಪ್ರಕರಣ ಕುರಿತಂತೆ ಮಂಗಳೂರು ಜಿಲ್ಲಾ ಆಯುಷ್ ಅಧಿಕಾರಿ ಖುದ್ದು ಸಚಿವರನ್ನು ಭೇಟಿ ಮಾಡಿ ಉದ್ದೇಶಪೂರ್ವಕವಾಗಿ ಆರೋಪಗಳನ್ನ ಹೊರಿಸಲಾಗುತ್ತಿದ್ದು, ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದರು.‌ ಸಾಮಾಜಿಕ ಕಾರ್ಯಕರ್ತ ವಾಸುದೇವ್ ಹೊಳ್ಳ, ಜಿ.ಎಸ್.ಡಿ ಪಾಣಿ, ಕಿರಣ್ ಪೂಜಾರಿ ಎಂಬುವವರು ದುರುದ್ದೇಶ ಹೊಂದಿದ್ದು, ಆಯುಷ್ ಆಸ್ಪತ್ರೆಯ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಯಾಗಿದ್ದಾರೆ. ಅನಗತ್ಯ ದೂರುಗಳನ್ನ ಸಲ್ಲಿಸಿ ಅಡ್ಡಿಪಡಿಸುತ್ತಿದ್ದಾರೆ. ಸಿಎಸ್.ಆರ್ ಯೋಜನೆಯ ಮೂಲಕ ಹಣವನ್ನ ತಂದು ಆಯುಷ್ ಆಸ್ಪತ್ರೆಗೆ ಮೂಲಸೌಕರ್ಯ ಒದಗಿಸಲು ಶ್ರಮ ವಹಿಸಲಾಗಿತ್ತು. ಆದರೆ ಈ ಮೂವರು ತಮ್ಮ ವೈಯಕ್ತಿಕ ಹಿತಾಸಕ್ತಿಯ ರಕ್ಷಣೆಗಾಗಿ ಸರ್ಕಾರಿ ಕಾರ್ಯಕ್ಕೆ ಅಡ್ಡಿಯುಂಟು ಮಾಡಿದ್ದಾರೆ ಎಂದು ದೂರಿದ್ದರು.

ಇನ್ನೊಂದಡೆ ಈ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವು ಕೇಳಿಬಂದಿತ್ತು. ಆರೋಪ-ಪ್ರತ್ಯಾರೋಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕರಣದ ಕೂಲಂಕುಷ ತನಿಖೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದೇಶಿಸಿದ್ದಾರೆ.‌

Advertisements

ಆರೋಪದಲ್ಲಿ ಸತ್ಯಾಸತ್ಯತೆ ಇದೆಯೇ ಅಥವಾ ಉದ್ದೇಶಪೂರ್ವಕವಾಗಿ ದೂರು ಸಲ್ಲಿಸಲಾಗಿದೆಯೇ ಎಂಬುದರ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶದಲ್ಲಿ ಹೇಳಲಾಗಿದೆ. ಅಲ್ಲದೇ, ಪ್ರಕರಣದಲ್ಲಿ ಆಯುಷ್ ಅಧಿಕಾರಿಗಳು ತಪ್ಪು ಎಸಗಿದ್ದರೆ ಸೂಕ್ತ ಶಿಸ್ತುಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ.

ಇದನ್ನು ಓದಿದ್ದೀರಾ? ಬೀದರ್‌ | ಸೋರುವ ತಗಡಿನ ಸೂರಿನಲ್ಲೇ ವೃದ್ಧ ದಂಪತಿಗಳ ಬದುಕು!

ಒಂದು ವೇಳೆ ಆಯುಷ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ದುರುದ್ದೇಶದಿಂದ ದೂರುದಾರರು ಆರೋಪಗಳನ್ನ ಮಾಡಿದ್ದಾರೆ ಎಂದು ಕಂಡುಬಂದರೆ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಆದೇಶದಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಸೂಚಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X