ಮೈಸೂರು | ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಅಕ್ರಮ ಆರೋಪ: ಕಂದಾಯ ನಿರೀಕ್ಷಕ ಅಮಾನತು

Date:

ಮೈಸೂರು ಜಿಲ್ಲೆಯ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಕೆ.ಎಸ್. ಮಹೇಶ್ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ್.ಎನ್ ವಿರುದ್ಧ ಕರ್ತವ್ಯ ಲೋಪ, ನಿರ್ಲಕ್ಷ್ಯತೆ ಹಾಗೂ ಸರ್ಕಾರಿ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ತೆರೆದು ನಮೂನೆ-3 ವಿತರಿಸಿರುವ ಕುರಿತು ಹಲವಾರು ಗಂಭೀರ ದೂರುಗಳು ಸ್ವೀಕೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

- Advertisement -

ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಮೈಸೂರು ಜಿಲ್ಲಾಧಿಕಾರಿಗಳು ದಿನಾಂಕ-03.01.2026ರಂದು ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರು (ಕಂದಾಯ) ಅವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ, 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊರೆಯುವ ಚಳಿಯಲ್ಲೂ ಮೊಳಗಿದ ಗುಲಾಬಿ ಧ್ವನಿ, ಆಶಾ ಕಾರ್ಯಕರ್ತೆಯರ...

ಒಂದೆಡೆ ಭೋರ್ಗರೆಯುವ ಮಳೆ, ಮತ್ತೊಂದೆಡೆ ಮೈಕೊರೆಯುವ ಚಳಿ. ಪ್ರಕೃತಿಯ ಈ ಪ್ರತಿಕೂಲ ಪರಿಸ್ಥಿತಿಯನ್ನೂ ಲೆಕ್ಕಿಸದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಗುಲಾಬಿ ಸೀರೆಧಾರಿ ಮಹಿಳೆಯರು ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಹೋರಾಟವನ್ನು ನೋಡಿದಾಗ...

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಈ ಸಂಬಂಧ ತನಿಖಾ ತಂಡದ ಅಧಿಕಾರಿಯಾದ ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರು (ಕಂದಾಯ) ಸೋಮಶೇಖರ್ ಅವರು ದಿನಾಂಕ 16.05.2026ರಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಪತ್ರದಲ್ಲಿ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವು ಸರ್ವೆ ನಂಬರ್‌ಗಳ ಖಾತಾ ದಾಖಲಾತಿಗಳ ಕುರಿತು ದೂರುಗಳು ಬಂದಿರುವುದರಿಂದ ಸವಿಸ್ತಾರ ತನಿಖೆಗೆ ಹೆಚ್ಚಿನ ಕಾಲಾವಕಾಶ ಅಗತ್ಯವಿದೆ ಎಂದು ತಿಳಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಸಂಬಂಧಪಟ್ಟ ಕರವಸೂಲಿಗಾರ, ಕಂದಾಯ ನಿರೀಕ್ಷಕ ಹಾಗೂ ಮುಖ್ಯಾಧಿಕಾರಿಗಳನ್ನು ಬೇರೆ ಸ್ಥಳೀಯ ಸಂಸ್ಥೆಗಳಿಗೆ ನಿಯೋಜಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ತನಿಖಾ ವರದಿಯಲ್ಲಿ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಇ-ಆಸ್ತಿ ತಂತ್ರಾಂಶ ಪೋರ್ಟಲ್‌ನಲ್ಲಿ 06.03.2026ರ ಅಂತ್ಯದ ವೇಳೆಗೆ ಮುಖ್ಯಾಧಿಕಾರಿಯವರ ಲಾಗಿನ್‌ನಲ್ಲಿ 858 ಅರ್ಜಿಗಳು ಹಾಗೂ ಕಂದಾಯ ನಿರೀಕ್ಷಕರ ಲಾಗಿನ್‌ನಲ್ಲಿ 207 ಅರ್ಜಿಗಳು ಅವಧಿ ಮೀರಿ ಬಾಕಿ ಉಳಿದಿರುವುದು ಬೆಳಕಿಗೆ ಬಂದಿದೆ. ಸರ್ಕಾರದ ಸುತ್ತೋಲೆ ಹಾಗೂ ಮಾರ್ಗಸೂಚಿಗಳನ್ನು ಪಾಲಿಸದೇ ಸಾರ್ವಜನಿಕರಿಗೆ ನಿಗದಿತ ಅವಧಿಯಲ್ಲಿ ಸೇವೆ ಒದಗಿಸಲು ಅಧಿಕಾರಿಗಳು ವಿಫಲರಾಗಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸಾರ್ವಜನಿಕರಿಂದ ಬಂದ ದೂರುಗಳನ್ನು ಪರಿಗಣಿಸಿದಾಗ, ಕೆಲಸ ಕಾರ್ಯಗಳಲ್ಲಿ ಉದ್ದೇಶಪೂರ್ವಕ ವಿಳಂಬ ಮಾಡಲಾಗುತ್ತಿದ್ದು, ಲಂಚದ ಹಣಕ್ಕೆ ಬೇಡಿಕೆ ಇಟ್ಟು ತಪ್ಪು ದಾಖಲಾತಿಗಳನ್ನು ನೀಡಿರುವ ಆರೋಪಗಳು ಮೇಲ್ನೋಟಕ್ಕೆ ಕಂಡುಬಂದಿವೆ ಎಂದು ತನಿಖಾ ತಂಡ ತಿಳಿಸಿದೆ.

ಸರ್ಕಾರದ ಸರ್ವೆ ನಂ.259/5ಕ್ಕೆ ಸಂಬಂಧಿಸಿದ ಮೂಲ ದಾಖಲಾತಿಗಳನ್ನು ಪರಿಶೀಲಿಸದೇ, ಸರ್ಕಾರಿ ಆಸ್ತಿ ಎಂಬುದು ತಿಳಿದಿದ್ದರೂ ಖಾಸಗಿ ವ್ಯಕ್ತಿಗಳಿಗೆ ಇ-ಆಸ್ತಿ ಸೃಜಿಸಿ ನಂತರ ಅಧಿಕಾರ ಮೀರಿಸಿ ಖಾತೆಗಳನ್ನು ರದ್ದುಪಡಿಸಿರುವುದಾಗಿ ತಹಶೀಲ್ದಾರ್ ಅವರಿಗೆ ವರದಿ ಸಲ್ಲಿಸಿರುವುದು ಕೂಡ ಕರ್ತವ್ಯ ಲೋಪವೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(ಡಿ) ಅನ್ವಯ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಅಮಾನತು ಹಾಗೂ ಇಲಾಖಾ ವಿಚಾರಣೆ ನಡೆಸುವಂತೆ ಜಿಲ್ಲಾಧಿಕಾರಿಗಳು ಶಿಫಾರಸು ಮಾಡಿದ್ದಾರೆ.

ಮುಖ್ಯಾಧಿಕಾರಿ ಕೆ.ಎಸ್. ಮಹೇಶ್ ಅವರು ಕೆ.ಎಂ.ಎ.ಎಸ್. ಮುಖ್ಯಾಧಿಕಾರಿ ಶ್ರೇಣಿ-1 ಅಧಿಕಾರಿಯಾಗಿರುವುದರಿಂದ, ಅವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ಇನ್ನೊಂದೆಡೆ, ಪ್ರಥಮ ದರ್ಜೆ ಕಂದಾಯ ನಿರೀಕ್ಷಕರಾದ ಮಂಜುನಾಥ್.ಎನ್ (ಮೂಲತಃ ಪ್ರಥಮ ದರ್ಜೆ ಸಹಾಯಕರು, ಮಹಾನಗರ ಪಾಲಿಕೆ ವೃಂದ) ಅವರ ಶಿಸ್ತು ಪ್ರಾಧಿಕಾರ ಪೌರಾಡಳಿತ ನಿರ್ದೇಶನಾಲಯವಾಗಿರುವ ಹಿನ್ನೆಲೆಯಲ್ಲಿ, ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಇಲಾಖಾ ವಿಚಾರಣೆ ಕಾಯ್ದಿರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಕಾನ್ವೋಕೇಶನ್ ಶುಲ್ಕ ಪಾವತಿಗೆ ವಿದ್ಯಾರ್ಥಿಗಳ ಪರದಾಟ: ಇ-ಗವರ್ನನ್ಸ್ ವ್ಯವಸ್ಥೆಗೆ ಒತ್ತಾಯ

ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಶಿಸ್ತು ಪ್ರಾಧಿಕಾರಿಯಾಗಿರುವ ರವೀಂದ್ರ ಪಿ.ಎನ್., ಭಾ.ಆ.ಸೇ., ಅವರು ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 9(2)(ಸಿ) ಅನ್ವಯ ನೀಡಿದ ಆದೇಶದಂತೆ, ಮಂಜುನಾಥ್.ಎನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಜೊತೆಗೆ, ಅವರ ಲೀನ್ ಸ್ಥಾನವನ್ನು ಹಾಸನ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ‘ಕನಕದಾಸರು ಸಮನತೆಯ ಹರಿಕಾರರು’ : ತಾರಾನಾಥ ಗಟ್ಟಿ

"ದಾರ್ಶನಿಕರ ಕಥೆಗಳು, ವಾಣಿಗಳು ಜನರಿಗೆ ಒಳ್ಳೆಯ ಜೀವನಕ್ಕೆ ಸ್ಫೂರ್ತಿ ಹಾಗೂ ಇನ್ನು...

ಮೈಶುಗರ್ ಬೆಳೆವಣಿಗೆ ಸಹಿಸಲಾಗುತ್ತಿಲ್ಲ : ನಿರಾಣಿ ವಿರುದ್ಧ ಸಿ.ಡಿ.ಗಂಗಾಧರ್ ವಾಗ್ದಾಳಿ

ಮೈಸೂರು ಸಕ್ಕರೆ ಕಾರ್ಖಾನೆಯ ಯಶಸ್ಸು ಕೆಲವರಿಗೆ ಆತಂಕ ಉಂಟುಮಾಡಿದ್ದು, ಕಾರ್ಖಾನೆಯ ಬಗ್ಗೆ...

ಸಾಗರೆ ಗ್ರಾಮದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರತ್ನಾಕರ...

ಬಾಗೇಪಲ್ಲಿ| ಕಸದ ಸಮಸ್ಯೆ ಮುಕ್ತಿಗೆ ಹೊಸ ಪ್ರಯೋಗ

ವಿಭಿನ್ನ ಆಲೋಚನೆ ಮೂಲಕ ಪಟ್ಟಣದ ಸ್ವಚ್ಛತೆಗೆ ಮುಂದಾಗಿರುವ ಪುರಸಭೆ ಕಸ ಹಾಕುವ...