ರಾಜಕೀಯ ಅಭದ್ರತೆಯಿಂದ ವರ್ಗಾವಣೆ ದಂಧೆ ಆರೋಪ ಹರಿಬಿಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ

Date:

  • ಆರೋಪ ಮಾಡಿದವರು ತಾವು ವರ್ಗಾವಣೆ ಮಾಡಿದ್ದು ದಂಧೆಯಾ?
  • ಬಿಜೆಪಿ ಸರ್ಕಾರದ ಹಗರಣಗಳನ್ನು ನಾವು ತನಿಖೆ ಮಾಡುತ್ತೇವೆ: ಸಿಎಂ

ಅಧಿಕಾರಿಗಳ ವರ್ಗಾವಣೆ ಆಡಳಿತಾತ್ಮಕ ದೃಷ್ಟಿಯಿಂದ ಹೊಸ ಸರ್ಕಾರ ಮಾಡೇ ಮಾಡುತ್ತದೆ. ಅದನ್ನು ದಂಧೆ ಎನ್ನುವುದು ಹಾಸ್ಯಾಸ್ಪದ. ಹಾಗಾದರೆ ಆರೋಪ ಮಾಡಿದವರು ತಾವು ಅಧಿಕಾರಕ್ಕೆ ಬಂದಾಗ ವರ್ಗಾವಣೆ ಮಾಡಿದ್ದು ದಂಧೆಯಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

- Advertisement -

ಗುರುವಾರದ ಮಧ್ಯಾಹ್ನದ ಕಲಾಪದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸುತ್ತ, “ಯಾವ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆಯದಂತೆ ನಾನು ನಮ್ಮ ಮಂತ್ರಿಮಂಡಲಕ್ಕೆ ಮನವಿ ಮಾಡಿರುವೆ. ಖಂಡತುಂಡವಾಗಿ ಪ್ರತಿಪಕ್ಷದ ನಾಯಕರು ಮಾಡಿರುವ ಆರೋಪವನ್ನು ನಾನು ಅಲ್ಲಗಳೆಯುತ್ತೇನೆ. ಲಂಚ ತಗೊಂಡಿರುವುದು ಯಾರಾದರೂ ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ” ಎಂದು ಸವಾಲು ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

“ನನ್ನ ಇಲಾಖೆಯಲ್ಲಿ ಇನ್ನೂ ವರ್ಗಾವಣೆ ಮಾಡಿಲ್ಲ. ಏಕೆಂದರೆ ಬಜೆಟ್‌ ತಯಾರಿಯಲ್ಲಿ ಇದ್ದಿದ್ದರಿಂದ ನಾನು ನಮ್ಮ ಇಲಾಖೆಗಳಲ್ಲಿ ವರ್ಗಾವಣೆ ಆರಂಭಿಸಿಲ್ಲ. ನಮಗೆ ಗೊತ್ತಿಲ್ಲದ ರೀತಿಯಲ್ಲಿ ಭ್ರಷ್ಟಾಚಾರ ಮಾಡಿರಬಹುದು. ನಾನು ಅಲ್ಲಗಳೆಯುವುದಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯದಲ್ಲಿ ಮತ್ತೆ ಶುರುವಾಯಿತು ಹೆಣ ರಾಜಕಾರಣ

“ಬೊಮ್ಮಾಯಿ ಮತ್ತು ಕುಮಾರಸ್ವಾಮಿ ಅವರು ಮಾಡಿರುವ ಭ್ರಷ್ಟಾಚಾರದ ಆರೋಪ ಕೇವಲ ಕಪೋಲಕಲ್ಪಿತ. ಏಕೆಂದರೆ, ನಮ್ಮ ಸರ್ಕಾರದ ಮೇಲೆ ಹೇಳಲು ಯಾವುದೇ ವಿಷಯವಿಲ್ಲ ಅವರಿಗೆ. ಕೆಲವರಿಗೆ ರಾಜಕೀಯ ಭಯ ಆರಂಭವಾಗಿದೆ. ರಾಜಕೀಯ ಅಭದ್ರತೆ ಕಾಡುತ್ತಿದೆ. ಹೀಗಾಗಿ ಹತಾಶೆಯಿಂದ ಹೀಗೆ ಕೆಲವು ಆರೋಪ ಮಾಡುತ್ತ, ನಮ್ಮ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ 2013-2018ರವರೆಗಿನ ಭ್ರಷ್ಟಾಚಾರ ಪ್ರಕರಣ ತನಿಖೆ ಮಾಡಲು ಹತ್ತಾರು ಸಲ ಕೋರಿದ್ದೆ. ಮಾಡಲಿಲ್ಲ. ಅದರ ಅರ್ಥ ಅವರ ಬಳಿ ಯಾವುದೇ ದಾಖಲೆ ಸಿಕ್ಕಿಲ್ಲ. ಹೀಗಾಗಿ ತನಿಖೆ ಮಾಡಲಿಲ್ಲ. ಇದರ ಅರ್ಥ ಕೂಡ ನಮ್ಮ ಸರ್ಕಾರ ಭ್ರಷ್ಟಾಚಾರ ರಹಿತ ಸರ್ಕಾರ ಎಂಬುದು ಸಾಬೀತಾಗಿದೆ” ಎಂದರು.

ಬೊಮ್ಮಾಯಿ ಅವರು ಮಧ್ಯ ಎದ್ದು ನಿಂತು, “ಕಾಂಗ್ರೆಸ್‌ ಸರ್ಕಾರದ ಹಗರಣಗಳ ಬಗ್ಗೆ ತನಿಖೆಗೆ ನಾವು ಲೋಕಾಯುಕ್ತಕ್ಕೆ ವಹಿಸಿದ್ದೇವೆ” ಎಂದರು. ಸಿಎಂ ಪ್ರತಿಕ್ರಿಯಿಸಿ, ಲೋಕಾಯುಕ್ತ ತನಿಖೆ ನಡೆಸಿದರೆ ನಾವು ಬೇಡ ಅನ್ನಲ್ಲ. ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ನಾವು ಆರೋಪ ಮಾಡಿದ್ದೆವು. ಎಸ್‌ಐಟಿ ಮೂಲಕ ತನಿಖೆ ನಡೆಸುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...

ಇಂಡಿ | ಸ್ಥಳೀಯ ಚುನಾವಣೆ: ಕಾಂಗ್ರೆಸ್ ಬಲಗೊಳಿಸಲು ಯಶವಂತರಾಯಗೌಡ ಪಾಟೀಲ ಕರೆ

ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ...