ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಜತೆಗೆ ಪ್ರಾಂಶುಪಾಲ, ಶಿಕ್ಷಕರು ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತಿ ಸಿಇಒ ಡಾ.ಗಿರೀಶ ಬದೋಲೆ ಮತ್ತು ಎಸ್ಪಿ ಪ್ರದೀಪ ಗುಂಟಿ ನೇತೃತ್ವದ ತಂಡ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಗ್ರಾಮದ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಭೇಟಿಯಾಗಿ ಮಾಹಿತಿ ಕಲೆಹಾಕಿತು. ಶಾಲೆಯಲ್ಲಿ ಸರಿಯಾಗಿ ಪಾಠ ಬೋಧನೆ ನಡೆಯದಿರುವುದು ಮತ್ತು ಅನುಚಿತ ವರ್ತನೆ ಬಗ್ಗೆ ಆರೋಪ ಮಾಡಿದ ವಿದ್ಯಾರ್ಥಿನಿಯರ ಜತೆಗೆ ಡಿಸಿ ಶಿಲ್ಪಾ ಶರ್ಮಾ ಅವರು ಕೆಲಕಾಲ ಗೌಪ್ಯವಾಗಿ ಮಾತನಾಡಿ ಮಾಹಿತಿ ಪಡೆದುಕೊಂಡರು. ನಂತರ ತರಗತಿ ಕೋಣೆಗಳಿಗೆ ಭೇಟಿ ನೀಡಿದ ಅವರು ವಿಜ್ಞಾನ ಸೂತ್ರಗಳು ಮತ್ತು ಇಂಗ್ಲಿಷ್ ಸಂಬಂಧಿತ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಶ್ನೆ ಕೇಳಿದರು. ವಿದ್ಯಾರ್ಥಿಗಳಿಂದ ಸಮರ್ಪಕ ಉತ್ತರ ಬರದ ಹಿನ್ನೆಲೆಯಲ್ಲಿ ವಿಜ್ಞಾನ ಶಿಕ್ಷಕರ ವಿರುದ್ಧ ಅಸಮಾಧಾನ ಹೊರಹಾಕಿದರು.
ಬಳಿಕ ಸುದ್ದಿಗಾರರೊಂದಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ʼವಸತಿ ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ತೋರುತ್ತಿದ್ದ ಶಾಲೆಯ ಪ್ರಾಂಶುಪಾಲರನ್ನು ಸೇವೆಯಿಂದ ಬಿಡುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಆದೇಶಿಸಿದ್ದಾರೆ. ನಾನು ವಿದ್ಯಾರ್ಥಿನಿಯರ ಜತೆಗೆ ಮಾತನಾಡಿ ಮಾಹಿತಿ ಕಲೆ ಹಾಕಿದ್ದೇನೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದುʼ ಎಂದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಮಾತನಾಡಿ, ʼಮಾಧ್ಯಮ ವರದಿ ಆಧರಿಸಿ ವಸತಿ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದೇನೆ. ಮುಂದಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದುʼ ಎಂದರು.

ಎಸ್ಪಿ ಪ್ರದೀಪ ಗುಂಟಿ ಮಾತನಾಡಿ, ʼವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸೂಕ್ತ ಭದ್ರತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಅಪರಿಚತರಿಗೆ ಶಾಲಾ ಪ್ರವೇಶ ನಿಷೇಧಿಸಬೇಕುʼ ಎಂದರು.
ಜಿಪಂ ಸಿಇಒ ಡಾ.ಗಿರೀಶ ಬದೋಲೆ ಮಾತನಾಡಿ, ʼಇಲ್ಲಿಯ ಶಿಕ್ಷಕರನ್ನು ಬೇರೆಯೆಡೆ ವರ್ಗಾವಣೆ ಮಾಡುವಂತೆ ದೂರು ಬಂದಿವೆ.
ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದುʼ ಎಂದು ತಿಳಿಸಿದರು.
ವರ್ಗ ಶಿಕ್ಷಕರಿಗೆ ನೋಟಿಸ್ ನೀಡಲು ಸೂಚನೆ :
ಇದೇ ವೇಳೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಹಾಜರಾತಿ ಪುಸ್ತಕ ಪರಿಶೀಲಿಸಿದರು. ಈ ಸಂದರ್ಭದಲ್ಲಿ ತರಗತಿ ಶಿಕ್ಷಕರು ಹಾಜರಾತಿ ಪುಸ್ತಕ ಸರಿಯಾಗಿ ನಿರ್ವಹಣೆ ಮಾಡದಿರುವುದನ್ನು ಕಂಡು ಗರಂ ಆದರು. ಕೆಲ ಶಿಕ್ಷಕರು ಹಾಜರಾತಿ ಪುಸ್ತಕದಲ್ಲಿ ಬೆಳಿಗ್ಗೆ, ಮಧ್ಯಾಹ್ನದ ಸಹಿ ಏಕಕಾಲಕ್ಕೆ ಮಾಡಿರುವುದನ್ನು ಕಂಡು ತರಾಟೆಗೆ ತೆಗೆದುಕೊಂಡರು. 6 ರಿಂದ 10ನೆಯ ತರಗತಿ ವಿದ್ಯಾರ್ಥಿಗಳ ಹಾಜರಾತಿ ಪುಸ್ತಕ ಸರಿಯಾಗಿ ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ ವರ್ಗ ಶಿಕ್ಷಕರಿಗೆ ಶೋಕಾಸ್ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಿಕ್ಷಕರ ವರ್ಗಾವಣೆಗೆ ಆಗ್ರಹ :
ವಸತಿ ಶಾಲೆಯಲ್ಲಿ ಕರ್ತವ್ಯ ಲೋಪ ಎಸಗುತ್ತಿರುವ ಕಾಯಂ ಶಿಕ್ಷಕರು, ಸ್ಥಳೀಯ ಹೊರ ಗುತ್ತಿಗೆ ಶಿಕ್ಷಕರನ್ನು ವರ್ಗಾವಣೆ ಮಾಡುವಂತೆ ಗ್ರಾಮ ಪಂಚಾಯತಿ ಅಧ್ಯಕ್ಷ ಸಂತೋಷ ಮಾನಕಾರ ಸೇರಿ ಗ್ರಾಮದ ಯುವಕರು ಒತ್ತಾಯಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಗ್ರಾಮಸ್ಥರು, ʼಕೆಲ ಶಿಕ್ಷಕರು ಸ್ವಪ್ರತಿಷ್ಠೆಗಾಗಿ ತಮ್ಮದೇ ಗುಂಪು ಸೃಷ್ಟಿಸಿಕೊಂಡು ಜಗಳ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಶಾಲಾ ಪರಿಸರ ಹಾಳಾಗುತ್ತಿದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆ ಕುಂಠಿತಗೊಳ್ಳುತ್ತಿದೆ. ಕೂಡಲೇ ಇಂತವರನ್ನು ವರ್ಗಾಯಿಸಬೇಕುʼ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಭಾಲ್ಕಿ ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ ಸಂಗನ್, ತಾಪಂ ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ, ಸಿಡಿಪಿಒ ಶ್ರೀನಿವಾಸ, ಮಕ್ಕಳ ರಕ್ಷಣಾ ಅಧಿಕಾರಿಗಳಾದ ಗೌರಿಶಂಕರ ಪರ್ತಾಪೂರೆ, ಪ್ರಶಾಂತ ಬಿರಾದಾರ್, ಗ್ರಾಪಂ ಅಧ್ಯಕ್ಷ ಸಂತೋಷ ಮಾನಕಾರ, ರಾಜಕುಮಾರ ಚಲ್ವಾ ಹಾಗೂ ಗ್ರಾಮದ ಶಿವರಾಜ ಹಂಪಾ, ರಾಜಕುಮಾರ ಚಲ್ವಾ, ಪಂಡರಿ ಮೇತ್ರೆ, ಪ್ರವೀಣ ಗಾಯಕವಾಡ ಸೇರಿದಂತೆ ಇತರರಿದ್ದರು.
Such criminal mental attitude person must be abolished from the society. Teacher’s job is noble work but book worm Principal or teacher or lectures lost moral values and ethics. Good punishment primarily if they found guilty by court is suspension from their post and appointed permanently as sacavengers in that same office or schools or colleges. Further found guilty must reward capital punishment in that same office or school or college infront of all common people.
Such criminal mental attitude person must be abolished from the society. Teacher’s job is noble work but book worm Principal or teacher or lectures lost moral values and ethics. Good punishment primarily if they found guilty by court is suspension from their post and appointed permanently as sacavengers in that same office or schools or colleges. Further found guilty must reward capital punishment in that same office or school or college infront of all common people.