ಬೀದರ್‌ | ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ಆರೋಪ; ಪ್ರಾಚಾರ್ಯ ವಜಾ

Date:

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಜತೆಗೆ ಪ್ರಾಂಶುಪಾಲ, ಶಿಕ್ಷಕರು ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತಿ ಸಿಇಒ ಡಾ.ಗಿರೀಶ ಬದೋಲೆ ಮತ್ತು ಎಸ್ಪಿ ಪ್ರದೀಪ ಗುಂಟಿ ನೇತೃತ್ವದ ತಂಡ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.

- Advertisement -

ಗ್ರಾಮದ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಭೇಟಿಯಾಗಿ ಮಾಹಿತಿ ಕಲೆಹಾಕಿತು. ಶಾಲೆಯಲ್ಲಿ ಸರಿಯಾಗಿ ಪಾಠ ಬೋಧನೆ ನಡೆಯದಿರುವುದು ಮತ್ತು ಅನುಚಿತ ವರ್ತನೆ ಬಗ್ಗೆ ಆರೋಪ ಮಾಡಿದ ವಿದ್ಯಾರ್ಥಿನಿಯರ ಜತೆಗೆ ಡಿಸಿ ಶಿಲ್ಪಾ ಶರ್ಮಾ ಅವರು ಕೆಲಕಾಲ ಗೌಪ್ಯವಾಗಿ ಮಾತನಾಡಿ ಮಾಹಿತಿ ಪಡೆದುಕೊಂಡರು. ನಂತರ ತರಗತಿ ಕೋಣೆಗಳಿಗೆ ಭೇಟಿ ನೀಡಿದ ಅವರು ವಿಜ್ಞಾನ ಸೂತ್ರಗಳು ಮತ್ತು ಇಂಗ್ಲಿಷ್ ಸಂಬಂಧಿತ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಶ್ನೆ ಕೇಳಿದರು. ವಿದ್ಯಾರ್ಥಿಗಳಿಂದ ಸಮರ್ಪಕ ಉತ್ತರ ಬರದ ಹಿನ್ನೆಲೆಯಲ್ಲಿ ವಿಜ್ಞಾನ ಶಿಕ್ಷಕರ ವಿರುದ್ಧ ಅಸಮಾಧಾನ ಹೊರಹಾಕಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಬಳಿಕ ಸುದ್ದಿಗಾರರೊಂದಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ʼವಸತಿ ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ತೋರುತ್ತಿದ್ದ ಶಾಲೆಯ ಪ್ರಾಂಶುಪಾಲರನ್ನು ಸೇವೆಯಿಂದ ಬಿಡುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಆದೇಶಿಸಿದ್ದಾರೆ. ನಾನು ವಿದ್ಯಾರ್ಥಿನಿಯರ ಜತೆಗೆ ಮಾತನಾಡಿ ಮಾಹಿತಿ ಕಲೆ ಹಾಕಿದ್ದೇನೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದುʼ ಎಂದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಮಾತನಾಡಿ, ʼಮಾಧ್ಯಮ ವರದಿ ಆಧರಿಸಿ ವಸತಿ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದೇನೆ. ಮುಂದಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದುʼ ಎಂದರು.

WhatsApp Image 2024 09 11 at 9.38.03 AM 1
ಶಿಕ್ಷಕರ ವರ್ಗಾವಣೆಗೆ ಗ್ರಾಮಸ್ಥರ ಆಗ್ರಹ

ಎಸ್ಪಿ ಪ್ರದೀಪ ಗುಂಟಿ ಮಾತನಾಡಿ, ʼವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ  ದೃಷ್ಟಿಯಿಂದ ಸೂಕ್ತ ಭದ್ರತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಅಪರಿಚತರಿಗೆ ಶಾಲಾ  ಪ್ರವೇಶ ನಿಷೇಧಿಸಬೇಕುʼ ಎಂದರು.

ಜಿಪಂ ಸಿಇಒ ಡಾ.ಗಿರೀಶ ಬದೋಲೆ ಮಾತನಾಡಿ, ʼಇಲ್ಲಿಯ ಶಿಕ್ಷಕರನ್ನು ಬೇರೆಯೆಡೆ ವರ್ಗಾವಣೆ ಮಾಡುವಂತೆ ದೂರು ಬಂದಿವೆ.
ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದುʼ ಎಂದು ತಿಳಿಸಿದರು.

ವರ್ಗ ಶಿಕ್ಷಕರಿಗೆ ನೋಟಿಸ್ ನೀಡಲು ಸೂಚನೆ :

ಇದೇ ವೇಳೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಹಾಜರಾತಿ ಪುಸ್ತಕ ಪರಿಶೀಲಿಸಿದರು. ಈ ಸಂದರ್ಭದಲ್ಲಿ ತರಗತಿ ಶಿಕ್ಷಕರು ಹಾಜರಾತಿ ಪುಸ್ತಕ ಸರಿಯಾಗಿ ನಿರ್ವಹಣೆ ಮಾಡದಿರುವುದನ್ನು ಕಂಡು ಗರಂ ಆದರು. ಕೆಲ ಶಿಕ್ಷಕರು ಹಾಜರಾತಿ ಪುಸ್ತಕದಲ್ಲಿ ಬೆಳಿಗ್ಗೆ, ಮಧ್ಯಾಹ್ನದ ಸಹಿ ಏಕಕಾಲಕ್ಕೆ ಮಾಡಿರುವುದನ್ನು ಕಂಡು ತರಾಟೆಗೆ ತೆಗೆದುಕೊಂಡರು. 6 ರಿಂದ 10ನೆಯ ತರಗತಿ ವಿದ್ಯಾರ್ಥಿಗಳ ಹಾಜರಾತಿ ಪುಸ್ತಕ ಸರಿಯಾಗಿ ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ ವರ್ಗ ಶಿಕ್ಷಕರಿಗೆ ಶೋಕಾಸ್ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಿಕ್ಷಕರ ವರ್ಗಾವಣೆಗೆ ಆಗ್ರಹ :

ವಸತಿ ಶಾಲೆಯಲ್ಲಿ ಕರ್ತವ್ಯ ಲೋಪ ಎಸಗುತ್ತಿರುವ ಕಾಯಂ ಶಿಕ್ಷಕರು, ಸ್ಥಳೀಯ ಹೊರ ಗುತ್ತಿಗೆ ಶಿಕ್ಷಕರನ್ನು ವರ್ಗಾವಣೆ ಮಾಡುವಂತೆ ಗ್ರಾಮ ಪಂಚಾಯತಿ ಅಧ್ಯಕ್ಷ ಸಂತೋಷ ಮಾನಕಾರ ಸೇರಿ ಗ್ರಾಮದ ಯುವಕರು ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಗ್ರಾಮಸ್ಥರು, ʼಕೆಲ ಶಿಕ್ಷಕರು ಸ್ವಪ್ರತಿಷ್ಠೆಗಾಗಿ ತಮ್ಮದೇ ಗುಂಪು ಸೃಷ್ಟಿಸಿಕೊಂಡು ಜಗಳ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಶಾಲಾ ಪರಿಸರ ಹಾಳಾಗುತ್ತಿದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆ ಕುಂಠಿತಗೊಳ್ಳುತ್ತಿದೆ. ಕೂಡಲೇ ಇಂತವರನ್ನು ವರ್ಗಾಯಿಸಬೇಕುʼ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಭಾಲ್ಕಿ ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ ಸಂಗನ್, ತಾಪಂ ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ, ಸಿಡಿಪಿಒ ಶ್ರೀನಿವಾಸ, ಮಕ್ಕಳ ರಕ್ಷಣಾ ಅಧಿಕಾರಿಗಳಾದ ಗೌರಿಶಂಕರ ಪರ್ತಾಪೂರೆ, ಪ್ರಶಾಂತ ಬಿರಾದಾರ್, ಗ್ರಾಪಂ ಅಧ್ಯಕ್ಷ ಸಂತೋಷ ಮಾನಕಾರ, ರಾಜಕುಮಾರ ಚಲ್ವಾ ಹಾಗೂ ಗ್ರಾಮದ ಶಿವರಾಜ ಹಂಪಾ, ರಾಜಕುಮಾರ ಚಲ್ವಾ, ಪಂಡರಿ ಮೇತ್ರೆ, ಪ್ರವೀಣ ಗಾಯಕವಾಡ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು,...

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಹಿಂಗಾರು ಮಳೆಯೂ ಆರಂಭವಾಗುತ್ತಿದೆ. ಪರಿಣಾಮ, ಮುಂದಿನ 4...

ಬೀದರ್‌ | ಭಾರತ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷರಾಗಿ ಗೋರಖನಾಥ್ ಕುಂಬಾರ್ ಆಯ್ಕೆ

ಭಾರತ ಸ್ವಾಭಿಮಾನ ಟ್ರಸ್ಟ್ (ಪತಂಜಲಿ ಯೋಗ ಸಮಿತಿ) ಬೀದರ್ ಜಿಲ್ಲಾಧ್ಯಕ್ಷರಾಗಿ ಯೋಗ...

ಭಾಲ್ಕಿ | ಚನ್ನಬಸವೇಶ್ವರ ಗುರುಕುಲದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು...