ಕಾಂಗ್ರೆಸ್ ನಿರ್ನಾಮ ಮಾಡಲು ಜೆಡಿಎಸ್ ಜೊತೆಗೆ ಮೈತ್ರಿ: ಕೆ ಎಸ್‌ ಈಶ್ವರಪ್ಪ

Date:

  • ‘ಲೋಕಸಭೆಯಲ್ಲಿ 28ಕ್ಕೆ 28 ಸ್ಥಾನ ನಾವು ಗೆಲ್ಲಲಿದ್ದೇವೆ’
  • ‘ಲೋಕಸಭಾ ಚುನಾವಣೆ ಎಂದರೆ ದೇಶ ಉಳಿಸುವ ಚುನಾವಣೆ’

ಈ ದೇಶದಲ್ಲಿ ಕಾಂಗ್ರೆಸ್ ಬೇಡ ಎಂದು ಜನ ತೀರ್ಮಾನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿಗಳೆಲ್ಲರೂ ಕೂಡ ಒಟ್ಟಾಗಿ, ಕಾಂಗ್ರೆಸ್ ನಿರ್ನಾಮ ಮಾಡಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಈ ಹಿಂದೆ ಕಾಂಗ್ರೆಸ್ ವಿರೋಧಿ ಮತಗಳು ವಿಭಜನೆಯಾಗಿ ಕಾಂಗ್ರೆಸ್ ಲಾಭ ಗಳಿಸಿತ್ತು. ಜೊತೆಗೆ ಕಳೆದ ಚುನಾವಣೆ ವೇಳೆ ರಾಜ್ಯದಲ್ಲಿ ಒಂದು ಸ್ಥಾನ ಸಹ ಗೆದ್ದಿತ್ತು. ಈ ಬಾರಿ 1 ಸ್ಥಾನ ಕೂಡ ಕಾಂಗ್ರೆಸ್‌ಗೆ ಹೋಗಬಾರದು ಎಂದು ತೀರ್ಮಾನ ಮಾಡಿದ್ದು, ರಾಜ್ಯದಲ್ಲಿ 28ಕ್ಕೆ 28 ಸ್ಥಾನ ನಾವು ಗೆಲ್ಲಲಿದ್ದೇವೆ” ಎಂದರು.

“ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮೂಲಕ ಒಟ್ಟಾಗಿ ಹೋಗುತ್ತೇವೆ. ಲೋಕಸಭಾ ಚುನಾವಣೆ ತಾ.ಪಂ, ಗ್ರಾ.ಪಂ, ಚುನಾವಣೆಯಂತಲ್ಲ. ಲೋಕಸಭಾ ಚುನಾವಣೆ ಅಂದರೆ ದೇಶವನ್ನು ಉಳಿಸುವ ಚುನಾವಣೆ. ಬಿಜೆಪಿ-ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸಿ, ಯಶಸ್ಸು ಗಳಿಸುತ್ತೇವೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ-ಜೆಡಿಎಸ್‌ ಮೈತ್ರಿ: ಪಕ್ಷಗಳಿಗೆ ಅನಿವಾರ್ಯ, ರಾಜ್ಯಕ್ಕೆಷ್ಟು ಹಿತ?

ಲೋಕಸಭೆಯಲ್ಲಿ ಒಂದು ಸ್ಥಾನವನ್ನು ಕೂಡ ಕಾಂಗ್ರೆಸ್‌ಗೆ ಕೊಡಬಾರದು ಎಂಬುದು ರಾಜ್ಯದ ಜನರ ಅಪೇಕ್ಷೆ. ಈ ಹಿಂದೆ ಸಿಎಂ ಆಗಿದ್ದ ಸಿದ್ದರಾಮಯ್ಯ ಬಿಜೆಪಿ ಎರಡು ಸೀಟು ಕೂಡ ಬರಲ್ಲ ಅಂತ ಹೇಳಿಕೆ ನೀಡಿದ್ದರು. ಕಾಂಗ್ರೆಸ್‌ಗೆ ಒಂದೇ ಸೀಟು ಬಂದಿತ್ತು. ಬಿಜೆಪಿ 25 ಸೀಟು ಗೆದ್ದಿತ್ತು. ಕಾಂಗ್ರೆಸ್ ವ್ಯಕ್ತಿಗತ ಯೋಚಿಸಿದರೆ, ನಾವು ದೇಶಕ್ಕಾಗಿ ಯೋಚಿಸುತ್ತೇವೆ” ಎಂದರು.

ಪಕ್ಷದಿಂದ ಹೊರ ಹೋಗುವವರ ವಿಚಾರವಾಗಿ ಪ್ರತಿಕ್ರಿಯಿಸಿ, “ಸೂಕ್ತ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಕೆಲವರು ಪಕ್ಷ ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ ಒಂದು ಕೋಟಿ ಸದಸ್ಯರಿದ್ದಾರೆ. ಎಲ್ಲರೂ ನಿಷ್ಠಾವಂತ ಕಾರ್ಯಕರ್ತರು” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿನೀತ ಮೋದಿಗೆ ಜಾಗತಿಕ ಒತ್ತಡ; ದುರ್ಬಲಗೊಳ್ಳುತ್ತಿದೆ ವಿದೇಶಾಂಗ ಸಂಬಂಧ

ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ...

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ ನೀಡಿದ್ದ ಮಾಜಿ ಸಚಿವ, ವಿಧಾನ...

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ...