ಆಡಳಿತ ಪಕ್ಷದ ವಿರುದ್ಧ ಹೋರಾಡಲು ಜೆಡಿಎಸ್ ಜೊತೆಗೆ ಮೈತ್ರಿ: ಮಾಜಿ ಸಿಎಂ ಬೊಮ್ಮಾಯಿ

Date:

  • ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಡಬೇಕೆನ್ನುವುದು ಜನರ ಬಯಕೆ
  • ರಾಜ್ಯ ಅಧೋಗತಿ ಮುಟ್ಟಿದ್ದು, ಇದರ ವಿರುದ್ಧ ಜೊತೆಯಾಗಿ ಹೋರಾಟ

ಕಾಂಗ್ರೆಸ್ ಸರ್ಕಾರದ ದುರಾಡಳಿತ ಹೆಚ್ಚಾಗಿದೆ. ಅದರ ವಿರುದ್ಧ ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

- Advertisement -

ಹುಬ್ಬಳ್ಳಿಯಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ” ಎನ್ನುವ ಮೂಲಕ ಜೆಡಿಎಸ್‌ ಬಿಜೆಪಿ ಮೈತ್ರಿಯನ್ನು ಸಮರ್ಥಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

“ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಮತ್ತೊಂದು ಕಡೆ ಸಚಿವರುಗಳು ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ರಾಜ್ಯದಲ್ಲಿ ರಸ್ತೆಗೆ ಒಂದು ಹಿಡಿ ಮಣ್ಣನ್ನು ಹಾಕಲಾರದ ಸ್ಥಿತಿ ನಿರ್ಮಾಣವಾಗಿದೆ. ಈ ರೀತಿ ಆದರೆ ಇಡೀ ರಾಜ್ಯ ಅಧೋಗತಿಗೆ ಹೋಗುತ್ತದೆ. ಇದನ್ನು ನಿಲ್ಲಿಸುವ ಉದ್ದೇಶದಿಂದ ನಾವಂತೂ ಹೋರಾಟ ಮಾಡುತ್ತಿದ್ದೇವೆ. ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡುವುದು ವಿರೋಧ ಪಕ್ಷದ ಜವಾಬ್ದಾರಿ. ಈ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹತ್ತಿರ ಬರುತ್ತಿವೆ” ಎಂದರು.

ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಹಿಂದೆ ಕಾಂಗ್ರೆಸ್ ನವರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರಲ್ಲವೇ? ಆಗ ಇಬ್ಬರೂ ಅಸಹಾಯಕರಿದ್ದರಾ? ಜೆಡಿಎಸ್ ಗೆ ಎಷ್ಟು ಸ್ಥಾನ ಕೊಡಬೇಕು ಅನ್ನುವುದನ್ನು ವಸ್ತುಸ್ಥಿತಿ ಆಧಾರದ ಮೇಲೆ ಹೈಕಮಾಂಡ್ ನಿರ್ಧರಿಸುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸಮಾಧಾನದ ಕಿಡಿ ಜ್ವಾಲೆಯಾಗಿ ಸರ್ಕಾರವನ್ನು ಸುಡದಿರಲಿ

ಬರ ಘೋಷಣೆಗೆ ನೆಪ

“ರಾಜ್ಯದಲ್ಲಿ ಬರ ಘೋಷಣೆಗೆ ಕೇಂದ್ರ ಸರ್ಕಾರದ ಮಾನದಂಡಗಳು ಅಡ್ಡಿಯಾಗುತ್ತಿವೆ ಎಂದು ರಾಜ್ಯ ಸರ್ಕಾರ ಕುಂಟು ನೆಪ ಹೇಳುತ್ತಿದೆ. ಈ ಹಿಂದೆಯೂ ಇದೇ ನಿಯಮಗಳಿದ್ದವು. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬರ ಘೋಷಣೆ ಮಾಡಲಿಲ್ಲವೇ? ನಾವು ಸಹ ಕೇಂದ್ರ ಸರ್ಕಾರ ಕೊಡುವುದಕ್ಕಿಂತ ಹೆಚ್ಚಿನ ಹಣ ಕೊಟ್ಟಿದ್ದೆವು. ನಿಯಮ ಬದಲಾವಣೆಗಾಗಿ ನಾವು ಕಾದುಕೊಂಡು ಕುಳಿತಿದ್ದೆವೇ” ಎಂದು ಪ್ರಶ್ನಿಸಿದರು.‌

“ನಾವು ಬರ ಪರಿಹಾರದ ಎರಡು ಪಟ್ಟು ಮೊತ್ತ ಕೊಟ್ಟಿದ್ದೆವು. ರಾಜ್ಯ ಸರ್ಕಾರಕ್ಕೆ ಜನರಿಗೆ ಸಹಾಯ ಮಾಡಬೇಕೆಂಬ ಮನಸ್ಸಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣೆಯ ಮೊದಲನೇ ಕಂತು ಈಗಾಗಲೇ ಬಂದಿದೆ. ಇವರಿಗೆ ರೈತರ ಸಂಕಷ್ಟ ಪರಿಹಾರ ಮಾಡೋ ಮನಸ್ಸಿಲ್ಲ. ರಾಜ್ಯ ಸರ್ಕಾರ ತನ್ನ ಅಧಿಕಾರ ಬಳಸಿ ಕೂಡಲೇ ಬರ ಘೋಷಣೆ ಮಾಡಬೇಕು” ಎಂದರು.

ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಸಬೇಕು

“ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದಿರುವುದರಿಂದ ಖಾಸಗಿ ವಾಹನಗಳ ಮಾಲೀಕರು ಸಮಸ್ಯೆಗೆ ಸಿಲುಕಿದ್ದಾರೆ. ಸರ್ಕಾರ ಖಾಸಗಿ ಬಸ್ ಮಾಲೀಕರ ಸಮಸ್ಯೆ ಬಗೆಹರಿಸುತ್ತೇವೆ ಅಂತ ಹೇಳುತ್ತಲೇ ಬಂದಿದ್ದಾರೆ. ಸುಮ್ಮನೆ ಸಭೆ ಮಾಡಿದರು, ಈಗ ಖಾಸಗಿ ಬಸ್ ಮಾಲೀಕರ ವಿಶ್ವಾಸ ಕಳೆದುಕೊಂಡಿದ್ದಾರೆ. ಈಗಲಾದರೂ ಸರ್ಕಾರ ಎಚ್ಚೆತ್ತು ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಸಬೇಕು” ಎಂದು ಆಗ್ರಹಿಸಿದರು.

“ಹಾವೇರಿಯ ಹೊಸರಿತ್ತಿ ಲಾಕಪ್ ಡೆತ್ ಪ್ರಕರಣ ಕುರಿತು ಮಾಹಿತಿ ತೆಗೆದುಕೊಳ್ಳುತ್ತೇನೆ. ಈ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರೆ ಖಂಡಿತ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಜಿಂಕೆ ಬೇಟೆ: ಆರೋಪ ಬಂಧನ 

ಕಡೂರು ತಾಲೂಕು ದೇವದಾನ ಗ್ರಾಮದ ತೋಟದಲ್ಲಿ ಉರುಳು ಹಾಕಿ ಜಿಂಕೆಯನ್ನು ಬೇಟೆಯಾಡಿದ...

ಚಿಕ್ಕಮಗಳೂರು | ₹58 ಲಕ್ಷ ದರೋಡೆ: ಆರೋಪಿಗಳ ಬಂಧನ 

ಹೊರವಲಯದ ಹೆದ್ದಾರಿಯಲ್ಲಿ ಅಡಿಕೆ ವ್ಯಾಪಾರಿಯ ಕಾರು ಅಡ್ಡಗಟ್ಟಿ ಬರೋಬ್ಬರಿ ₹58 ಲಕ್ಷ...

ಧಾರವಾಡ | ಮತದಾರರ ಹಕ್ಕು ಕಸಿಯುವ ಷಡ್ಯಂತ್ರ: ಗ್ಯಾನೇಶ್ ಕುಮಾರ್ ವಜಾಕ್ಕೆ ಕಲ್ಮೇಶ್ ಪಟೇಲ್ ಆಗ್ರಹ

"ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಮತದಾನದ ಹಕ್ಕನ್ನು ವೋಟ್ ಚೋರಿ ಮೂಲಕ...

ಚಿಕ್ಕಮಗಳೂರು | ಆಕಸ್ಮಿಕ ಅಗ್ನಿ ಅವಘಡ: ಉತ್ಪನ್ನಗಳು ಭಸ್ಮ 

ಕಡೂರು ತಾಲೂಕಿನ ಬೀರೂರು ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಮಂಜುನಾಥ ಕಾಯರ್...