ಮಹಾರಾಷ್ಟ್ರದ ಕ್ಯಾತೆಯ ನಡುವೆಯೂ ಆಲಮಟ್ಟಿ ನವೀಕರಣಕ್ಕೆ ಸಿದ್ಧ: ಶಾಸಕ ಯಶವಂತರಾಯಗೌಡ

Date:

Advertisements

ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524 ಮೀಟರ್‌ ವರೆಗೆ ಏರಿಸಿ ನವೀಕರಿಸಲು ಮಹಾರಾಷ್ಟ್ರ ಸರ್ಕಾರ ಕ್ಯಾತೆ ತೆಗೆಯುತ್ತಿರುವುದು ಸರಿಯಲ್ಲ. ಅಣೆಕಟ್ಟೆ ಎತ್ತರ ಏರಿಸಲು ಯಾವುದೇ ತ್ಯಾಗಕ್ಕೂ ಸಿದ್ದ. ಈ ಕುರಿತು ವಿಜಯಪುರದಲ್ಲಿ ರಾಜ್ಯ ಮಟ್ಟದ ಸಭೆ ನಡೆಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದುಕೊಂಡು ಹೋಗಲಾಗುವುದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಆಡಳಿತಸೌಧ ಸಭಾ ಭವನದಲ್ಲಿ ನಡೆದ 2025-26ನೇ ಸಾಲಿನ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

“ಆಲಮಟ್ಟಿ ಜಲಾಶಯ ಎತ್ತರಿಸಲು ಅಗತ್ಯ ಇರುವ ಅನುದಾನಕ್ಕಾಗಿ ಬಾಂಡ್ ಮೂಲಕ ಹಣ ಸಂಗ್ರಹಿಸಿ, ಇಲ್ಲವೇ ನಮ್ಮ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಿ ಅನುದಾನ ಬಿಡುಗಡೆ ಮಾಡಿಸಲಿ. ಬಚಾವತ್ ಐ ತೀರ್ಪಿನ ಪ್ರಕಾರ ಅಣೆಕಟ್ಟೆ ಎತ್ತರ 524 ಮೀಟರ್ ಮಾಡಬೇಕು. ಮತ್ತು ನಮ್ಮ ಪಾಲಿನ 130 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಬೇಕಾಗಿದೆ. ಬ್ರಿಜೇಶ್ ಕುಮಾರ್ ತೀರ್ಪಿನ ಪ್ರಕಾರ ಬಿ ಸ್ಕೀಮ್‌ನ ಯೋಜನೆಗಳಿಗೆ ಕಾನೂನು ಬದ್ಧವಾಗಿ ನೀರು ಪಡೆಯಬೇಕಾದರೆ ಎತ್ತರ 524 ಮೀಟರ್ ಆಗಲೇಬೇಕು” ಎಂದರು.

Advertisements

ಇದನ್ನೂ ಓದಿ: ವಿಜಯನಗರ | ಆಡಂಬರವಿಲ್ಲದೆ ಸಂವಿಧಾನ ಸಾಕ್ಷಿಯಾಗಿ ಅಂತರ್ಜಾತಿ ವಿವಾಹವಾದ ನವದಂಪತಿ

“ಇಂಡಿ ತಾಲೂಕಿನಲ್ಲಿ ಹಾದುಹೋಗಿರುವ ಗುತ್ತಿ ಬಸವಣ್ಣ, ಚಿಮ್ಮಲಗಿ, ಮುಳವಾಡ ಏತ ನೀರಾವರಿ, ಇಂಡಿ ಬ್ರಾಂಚ್ ಕಾಲುವೆ ಮತ್ತು ರೇವಣಸಿದ್ದೇಶ್ವರ ಕಾಲುವೆಯಲ್ಲಿ ನೀರು ಹರಿಯುತ್ತಿಲ್ಲ. ಹೀಗಾಗಿ ಆಲಮಟ್ಟಿ ಅಣೆಕಟ್ಟಿನ್ನು ಎತ್ತರಿಸುವುದು ಅನಿವಾರ್ಯ. ತಾಲೂಕಿನಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಲು ಮತ್ತು ಅದಕ್ಕೆ ಬೇಕಾಗುವ ಹಣ ನೀಡಲಾಗುವುದು” ಎಂದು ತಿಳಿಸಿದರು.

ಸಭೆಯಲ್ಲಿ ಕಂದಾಯ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ತಹಶೀಲ್ದಾರ್ ಬಿ ಎಸ್ ಕಡಕಬಾವಿ, ಇಒ ನಂದೀಪ ರಾಠೋಡ, ಕೃಷಿ ಇಲಾಖೆ ಅಧಿಕಾರಿ ಚಂದ್ರಕಾಂತ ಪವಾರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ಹೆಸ್ಕಾಂನ ಎಸ್‌ ಎಸ್ ಬಿರಾದಾರ, ಸಂಜಯ ಖಡಗೇಕರ, ಡಿ ಎಸ್ ಪಿ ಜಗದೀಶ ಎಚ್, ನಾಮ ನಿರ್ದೇಶಿತ ಸದಸ್ಯರಾದ ಬಿ ಕೆ ಪಾಟೀಲ, ಗುರನಗೌಡ ಪಾಟೀಲ, ದೀಪಾಲಿ ಸ್ ಕುಲಕರ್ಣಿ, ಜೆ ಎಂ ಕರಜಗಿ, ಇಲಿಯಾಸ್ ತು ಬೋರಾಮಣಿ, ಪ್ರಶಾಂತ ಕಾಳೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X