ಸಾರ್ವಜನಿಕವಾಗಿ ಖಡ್ಗ ಜಳಪಿಸಿದ್ದ ಯತ್ನಾಳ್ ಬೆಂಬಲಿಗನ ಬಂಧನ : ಅಲೋಕ್​ ಕುಮಾರ್

Date:

  • ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ; ಜನರಲ್ಲಿ ಭಯದ ವಾತವರಣ
  • ಯತ್ನಾಳ್ ಬೆಂಬಲಿಗ ಖಡ್ಗ ಜಳಪಿಸಿರುವ ಬಗ್ಗೆ ವ್ಯಾಪಕ ವಿರೋಧ

ರಾಜ್ಯ ವಿದಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವಿನ ಹಿನ್ನೆಲೆ ಸಾರ್ವಜನಿಕವಾಗಿ ಖಡ್ಗ ಪ್ರದರ್ಶಸಿದ್ದ ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು ದಾಖಲಿಸಿ, ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್​ ಕುಮಾರ್ ಟ್ವೀಟ್​ ಮಾಡಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತ ಸಾರ್ವಜನಿಕವಾಗಿ ಖಡ್ಗ ಪ್ರದರ್ಶಿರುವ ಘಟನೆ ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ಶನಿವಾರ ನಡೆದಿತ್ತು.

ಯತ್ನಾಳ್

ಖಡ್ಗ ಪ್ರದರ್ಶಿಸುತ್ತಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು ದಾಖಲಿಸಿ, ಆತನನ್ನು ಬಂಧಿಸಲಾಗಿದೆ ಎಂದು ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ವಿಜಯಪುರ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶನಿವಾರ ನಡೆದ ವಿಜಯೋತ್ಸವದ ವೇಳೆ ಅವರ ಬೆಂಬಲಿಗನೊಬ್ಬ ಖಡ್ಗ ಜಳಪಿಸಿರುವ ಬಗ್ಗೆ ಜನರಿಂದ ವಿರೋಧ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಯತ್ನಾಳ್‌ ಗೆಲುವು; ಸಾರ್ವಜನಿಕವಾಗಿ ಖಡ್ಗ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತ

ಸಿದ್ದೇಶ್ವರ ದೇವಸ್ಥಾನದ ಬಳಿ ಶನಿವಾರ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ದೊಡ್ಡ ಪ್ರಮಾಣದಲ್ಲಿ ವಿಜಯೋತ್ಸವ ಅಚರಿಸಿದರು. ವಾರದ ಹಿಂದಷ್ಟೇ ವಿಜಯಪುರ ಮಹಾನಗರ ಪಾಲಿಕೆ ಸದಸ್ಯೆ ಪತಿಯನ್ನು ದುಷ್ಕರ್ಮಿಗಳು ಶೂಟೌಟ್ ಮಾಡಿರುವ ಪ್ರಕರಣದಿಂದ ಭಯಭೀತರಾಗಿರುವ ಘಟನೆ ಮಾಸುವ ಮುನ್ನವೇ, ಬಿಜೆಪಿ ಕಾರ್ಯಕರ್ತ ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಮಾಡಿರುವುದು ಮತ್ತಷ್ಟು ಆತಂಕ ಹೆಚ್ಚಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು...

ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು,...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ...