ಸ್ವತಂತ್ರ ಮಾಧ್ಯಮಗಳನ್ನು ಜನ ಕೈ ಹಿಡಿದರೆ ಗೋದಿ ಮೀಡಿಯಾಗಳಿಗೆ ಮುಕ್ತಿ: ಆಲ್ಟ್ ನ್ಯೂಸ್ ಪತ್ರಕರ್ತ ಮೊಹಮ್ಮದ್ ಝುಬೇರ್

Date:

Advertisements

“ನಿಷ್ಪಕ್ಷ, ನಿಖರ ಸುದ್ದಿಗಳಿಗಾಗಿ ದೇಶದಲ್ಲಿ ಸ್ವತಂತ್ರ ಮಾಧ್ಯಮ ಸಂಸ್ಥೆಗಳು ಇನ್ನಷ್ಟು ಬಲಗೊಳ್ಳುವ ಅಗತ್ಯವಿದೆ.‌‌ ಒಂದು ವೇಳೆ ಪ್ರಜ್ಞಾವಂತ ನಾಗರಿಕರು, ಸ್ವತಂತ್ರ ಮಾಧ್ಯಮಗಳನ್ನು ಕೈಹಿಡಿದಲ್ಲಿ ಗೋದಿ‌ ಮೀಡಿಯಾಗಳ ಪ್ರಭಾವವನ್ನು ತಗ್ಗಿಸಲು ಸಾಧ್ಯವಿದೆ” ಎಂದು ದೇಶದ ಖ್ಯಾತ ಪತ್ರಕರ್ತ, ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಝುಬೇರ್ ಅಭಿಪ್ರಾಯಿಸಿದರು.

ಈದಿನ ಡಾಟ್ ಕಾಮ್ ಡಿಜಿಟಲ್ ಮಾಧ್ಯಮ ಸಂಸ್ಥೆ ಪ್ರಕಟಿಸಿರುವ ‘ನಮ್ಮ ಕರ್ನಾಟಕ ನಡೆದ 50 ಹೆಜ್ಜೆ… ಮುಂದಿನ ದಿಕ್ಕು’ ವಿಶೇಷ ಸಂಚಿಕೆಯನ್ನು ಮಂಗಳೂರು ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜು ಆವರಣದಲ್ಲಿರುವ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು.

1003013796

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೇರಿದ ಬಳಿಕ ಸಾಮಾಜಿಕ ಮಾಧ್ಯಮ ರಂಗದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಸರಕಾರವನ್ನು ಟೀಕಿಸುತ್ತಿದ್ದ ಅನೇಕ ಮಾಧ್ಯಮಗಳು ಬದಲಾದ ರಾಜಕೀಯ ವಿದ್ಯಮಾನಗಳ ಬಳಿಕ ಸರಕಾರವನ್ನು ಹೊಗಳಲು ಆರಂಭಿಸಿದವು. ಇದು ಡಿಜಿಟಲ್ ಮಾಧ್ಯಮಗಳ ಮೇಲೆ ಆಗಿರುವ ರಾಜಕೀಯ ಶಕ್ತಿಯ ಪ್ರಭಾವದ ಪರಿಣಾಮವಾಗಿದೆ. ಈ ರೀತಿ ಸರಕಾರಿ ಪ್ರೇರಿತ ಸುಳ್ಳು ಸುದ್ದಿಗಳು ಹರಡುವುದನ್ನು ತಡೆಗಟ್ಟಲು ಹಾಗೂ ನಿಷ್ಪಕ್ಷ, ನಿಖರ ಸುದ್ದಿಗಳಿಗಾಗಿ ಸ್ವತಂತ್ರ ಮಾಧ್ಯಮ ಸಂಸ್ಥೆಗಳು ಇನ್ನಷ್ಟು ಬಲಗೊಳ್ಳದ ಅಗತ್ಯವಿದೆ ಎಂದು ಫ್ಯಾಕ್ಟ್ ಚೆಕ್ಕರ್ ಮೊಹಮ್ಮದ್ ಝುಬೇರ್ ಹೇಳಿದರು.

Advertisements
1003013859

ಇಂದು ಬಹುತೇಕ ಮಾಧ್ಯಮಗಳು ಆಡಳಿತದಲ್ಲಿರುವ ರಾಜಕೀಯ ಪಕ್ಷಗಳ ಪರವಾಗಿ ಆಯ್ದ ಸುದ್ದಿಗಳನ್ನು ಮಾತ್ರ ವರದಿ ಮಾಡುತ್ತಿವೆ. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಿಗೆ ಸಂಬಂಧಿಸಿದ ಸಕಾರಾತ್ಮಕ ಸುದ್ದಿಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿವೆ. ಬಿಜೆಪಿಯೇತರ ಸರಕಾರವಿರುವ ರಾಜ್ಯಗಳ ಆಡಳಿತಕ್ಕೆ ಸಂಬಂಧಿಸಿ ನಕಾರಾತ್ಮಕ ಸುದ್ದಿಗಳನ್ನು ಹೆಚ್ಚು ಬಿತ್ತರಿಸುತ್ತಿವೆ ಎಂದು ಝುಬೇರ್ ತಿಳಿಸಿದರು.

1003013924

ಮುಖ್ಯವಾಹಿನಿಯ ಮಾಧ್ಯಮಗಳು ಮತ್ತು ನಿರೂಪಕರು ಬಿಜೆಪಿಯ ಪರವಾಗಿ ಕಾರ್ಯ ನಿರ್ವಹಿಸುತ್ತಾರೆ. ಸಾರ್ವಜನಿಕ ಸಮಸ್ಯೆಗಳನ್ನು ಮುಚ್ಚಿ ಹಾಕಲು ಮತ್ತು ಸರಕಾರದ ಹಿತಾಸಕ್ತಿಗಳನ್ನು ಕಾಪಾಡಲು ಕೆಲವು ಮಾಧ್ಯಮಗಳು ವಿಷಯಾಂತರಕ್ಕೆ ಹೆಚ್ಚು ಒತ್ತು ನೀಡುತ್ತಿವೆ. ಪಶ್ಚಿಮ ಬಂಗಾಳದ ವೈದ್ಯಕೀಯ ಕಾಲೇಜು ಆಸ್ಪತ್ರೆಯೊಂದರಲ್ಲಿ ನಡೆದ ಘಟನೆಯನ್ನು ನಿದರ್ಶನವಾಗಿ ಉಲ್ಲೇಖಿಸಿದ ಮುಹಮ್ಮದ್ ಝುಬೇರ್, ತೃಣಮೂಲ ಕಾಂಗ್ರೆಸ್ ಮತ್ತು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಗುರಿಯಾಗಿಸಿಕೊಂಡು ಆ ಕೃತ್ಯವನ್ನು ರಾಜಕೀಯಗೊಳಿಸುವ ಉದ್ದೇಶದಿಂದ ತಪ್ಪುಮಾಹಿತಿಯನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಯಿತು ಎಂದರು.

1003013808

ಈದಿನ ನ್ಯೂಸ್ ಆ‌್ಯಪ್ ‌ಅನ್ನು ಕರ್ನಾಟಕ ಥಿಯೋಲಜಿಕಲ್ ಕಾಲೇಜಿನ ಪ್ರಾಂಶುಪಾಲ ರೆ. ಡಾ.ಎಚ್.ಎಂ.ವಾಟ್ಸನ್ ಬಿಡುಗಡೆಗೊಳಿಸಿ ಮಾತನಾಡಿದರು.

1003013953

ಈದಿನ ಸಮುದಾಯ ವಿಭಾಗದ ಮುಖ್ಯಸ್ಥ ಡಾ. ವಾಸು ಎಚ್.ವಿ.ಅಧ್ಯಕ್ಷತೆ ವಹಿಸಿ, ಮಾತನಾಡಿದರು.

1003013856

ವೇದಿಕೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಎಂ.ದೇವದಾಸ್, ಮಂಗಳೂರಿನ ಸಾಮಾಜಿಕ ಕಾರ್ಯಕರ್ತೆ ವಿದ್ಯಾ ದಿನಕರ್, ಅನುಪಮ ಮಹಿಳಾ ಮಾಸಿಕದ ಸಂಪಾದಕಿ ಶಹನಾಝ್ ಎಂ., ಡೀಡ್ಸ್ ಸಂಸ್ಥೆಯ ಸಮಾಜ ಸೇವಕಿ ಜೆಸಿಂತಾ ಪಿರೇರಾ ಉಪಸ್ಥಿತರಿದ್ದರು.

1003013934

ಈದಿನ ಡಾಟ್ ಕಾಮ್‌ನ ಗವರ್ನಿಂಗ್ ಕೌನ್ಸಿಲ್ ಸದಸ್ಯ ಡೆನ್ನಿಸ್ ಡಿಸಿಲ್ವಾ ಸ್ವಾಗತಿಸಿದರು. ಹಣಕಾಸು ವಿಭಾಗದ ಮುಖ್ಯಸ್ಥ ಉಮರ್ ಯು.ಎಚ್. ಪ್ರಾಸ್ತಾವಿಕವಾಗಿ ಮಾತನಾಡಿದರು.

ಗವರ್ನಿಂಗ್ ಕೌನ್ಸಿಲ್ ಸದಸ್ಯ ಲಕ್ಷ್ಮಣ್ ಕುಂದರ್ ವಂದಿಸಿದರು. ಪವಿತ್ರಾ ಜಿ.ಎಂ. ಕಾರ್ಯಕ್ರಮ ನಿರೂಪಿಸಿದರು.

1003013931
1003013742
1003013781
1003013802
1003013790
1003013903
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X