ಬೀದರ್ ನಗರದ ನ್ಯೂ ಆದರ್ಶ ಕಾಲೋನಿಯ ಅಮೆಜಾನ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಡೆಲಿವರಿ ಬಾಯ್ ಹಾಗೂ ಸಿಬ್ಬಂದಿ ಮೇಲೆ ಯುವಕರ ಗುಂಪೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ ಘಟನೆ ಜರುಗಿದೆ.
ಘಟನೆಯ ಎಲ್ಲಾ ದೃಶ್ಯಾವಳಿಗಳು ಅಮೆಜಾನ್ ಕಚೇರಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಜಾಲತಾಣದಲ್ಲಿ ಹರಿದಾಡಿ ಚರ್ಚೆಗೆ ಕಾರಣವಾಗಿತ್ತು. ನಗರದ ಗೌಳಿ ಕಾಲೋನಿಯ ವಿಜಯಕುಮಾರ್ ಹಲ್ಲೆಗೊಳಗಾದವರು.
ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಗಾಂಧಿ ಗಂಜ್ ಠಾಣೆಯ ಪೊಲೀಸ್‌ರು ಅಮೆಜಾನ್ ಕಚೇರಿಗೆ ತೆರಳಿ ಸಿಸಿ ಟಿವಿ ದೃಶ್ಯವಳಿಗಳನ್ನು ಪರಿಶೀಲಿಸಿದರು. ಘಟನೆಗೆ ಸಂಬಂಧಿಸಿದಂತೆ 12 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ನಾಲ್ವರನ್ನು ಬಂಧಿಸಿದ್ದಾರೆ. ಇನ್ನುಳಿದವರ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.