ಉಡುಪಿ | ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಸರ್ವಿಸ್ ರಸ್ತೆ ಅಗಲೀಕರಣಕ್ಕೆ ಮನವಿ

Date:

ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಇದರ ಸರ್ವಿಸ್ ರಸ್ತೆಯ ಅಗಲೀಕರಣ ಮತ್ತು ಸಂಬಂಧಿತ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆ ಇದರ ವತಿಯಿಂದ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮೂಲಕ ಮನವಿ ಸಲ್ಲಿಸಲಾಯಿತು.

- Advertisement -

ರಾ.ಹೆ.66 ಅಂಬಲಪಾಡಿ ಇದರ ಅಗಲ ಕಿರಿದಾಗಿರುವ ಸರ್ವಿಸ್ ರಸ್ತೆಯನ್ನು ಮಳೆ ನೀರು ಹರಿಯುವ ಚರಂಡಿ ಸಹಿತ ಅಗಲೀಕರಣಗೊಳಿಸುವಂತೆ, ರಾ.ಹೆ.66 ಅಂಬಲಪಾಡಿ ಅಂಡರ್ ಪಾಸ್ ನ ಪೂರ್ವ ಮತ್ತು ಪಶ್ಚಿಮ ಭಾಗದಲ್ಲಿ ಉಡುಪಿ ನಗರವನ್ನು ಸಂಪರ್ಕಿಸುವ ಉಡುಪಿ ನಗರಸಭೆಯ ಸ್ವಾಧೀನದಲ್ಲಿರುವ ರಸ್ತೆಯನ್ನು ಅಂಡರ್ ಪಾಸ್ ದ್ವಾರಕ್ಕೆ ಸಮನಾಗಿ ರಾ.ಹೆ.66ರ ಪ್ಯಾಕೇಜ್ ರಸ್ತೆಯಾಗಿ ಅಗಲೀಕರಣಗೊಳಿಸುವ ಪ್ರಕ್ರಿಯೆಯನ್ನು ಪ್ರಸಕ್ತ ಪ್ರಗತಿಯಲ್ಲಿರುವ ಅಂಬಲಪಾಡಿ ರಾ.ಹೆ.66ರ ಕಾಮಗಾರಿಯ ಜೊತೆಗೆ ಕಾರ್ಯಗತಗೊಳಿಸುವಂತೆ, ರಾ.ಹೆ.66 ಅಂಬಲಪಾಡಿ ಅಂಡರ್ ಪಾಸ್ ನ ಜಂಕ್ಷನ್ ರಸ್ತೆಯನ್ನು ರಾ.ಹೆ. ಪ್ರಾಧಿಕಾರದ ನಿಯಮದಂತೆ ಅಂಡರ್ ಪಾಸ್ ಮಧ್ಯದಿಂದ 30 ಮೀಟರ್ ವಿಸ್ತೀರ್ಣದ ಸುತ್ತಳತೆಯಲ್ಲಿ ಅಗಲೀಕರಣಗೊಳಿಸಿ ಲಘು ಮತ್ತು ಘನ ವಾಹನಗಳ ಸುಗಮ, ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಹಾಗೂ ರಾ.ಹೆ.66 ಅಂಬಲಪಾಡಿ ಅಂಡರ್ ಪಾಸ್ ವಿನ್ಯಾಸದಲ್ಲಿರುವಂತೆ ಫೂಟ್ ಪಾತ್ ನಲ್ಲಿ ಸುರಕ್ಷಿತ ಜನ ಸಂಚಾರಕ್ಕಾಗಿ ಸರ್ವಿಸ್ ರಸ್ತೆಗೆ ಟ್ರಾಫಿಕ್ ಸಿಗ್ನಲ್ ಅಳವಡಿಸುವಂತೆ ಮನವಿಯಲ್ಲಿ ಉಲ್ಲೇಖಿಸಿರುವ ಬಗ್ಗೆ ವಿಸ್ತೃತ ವಿಚಾರ ವಿನಿಮಯ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಂಸದ ಕೋಟ ಅವರು ಮನವಿಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಗರಿ ಅವರಿಗೆ ಸಲ್ಲಿಸಿ ಮನವಿಯಲ್ಲಿ ಉಲ್ಲೇಖಿಸಿರುವ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.

ಜಿಲ್ಲೆಯಾದ್ಯಂತ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿಯ ಕುರಿತು ಸಂಸದರಿಗೆ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತರಕ್ಷಣಾ ವೇದಿಕೆ ಸಂಚಾಲಕ ಭಾಸ್ಕರ್ ಶೆಟ್ಟಿ ಕಡೆಕಾರು, ಕಾರ್ಯಕಾರಿ ಸಮಿತಿ ಸದಸ್ಯರಾದ ಅಂಬಲಪಾಡಿ ವಾರ್ಡ್ ನಿಕಟಪೂರ್ವ ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಶ್ರೀಕಾಂತ್ ಶೆಟ್ಟಿ ಅಂಬಲಪಾಡಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನರಸಾಪುರ ಕೆ ಬಿ ಹೊಸಹಳ್ಳಿ ಬಂಡೆಯಲ್ಲಿ ಯಲಹಂಕ ಬಾಗಲೂರು ಮೂಲದ ಲಾರಿ ಚಾಲಕನ ಸಾವು

ಜಿಲ್ಲೆಯ ಕೆ.ಬಿ. ಹೊಸಹಳ್ಳಿ ಬಂಡೆಯಲ್ಲಿ ಯಲಹಂಕ ಮೂಲದ ಲಾರಿ ಚಾಲಕ ಮೃತಪಟ್ಟಿರುವ...

ಹುಬ್ಬಳ್ಳಿ | ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮೀಣ ವಿಭಾಗದ ಡಿಪೊ ಬಳಿಯ...

ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು...