ಉಡುಪಿ | ಕಾರ್ಮಿಕ ವರ್ಗದ ಹಕ್ಕುಗಳ ಪ್ರಬಲ ಪ್ರತಿಪಾದಕರು, ಡಾ ಬಿ ಆರ್ ಅಂಬೇಡ್ಕರ್

Date:

Advertisements

ಅಂಬೇಡ್ಕರ್ ಅವರು ಶಿಕ್ಷಣ ಪಡೆಯಿರಿ,ಸಂಘಟಿತರಾಗಿ, ಹೋರಾಟ ನಡೆಸಿ ಎಂದು ಶೋಷಿತ ವರ್ಗಕ್ಕೆ ಕರೆ ನೀಡಿದವರಲ್ಲಿ ಪ್ರಮುಖರಾಗಿದ್ದಾರೆ ಅಂಬೇಡ್ಕರ್ ಅವರನ್ನು ಕೆಲವು ಬಲಪಂಥೀಯರು ತಪ್ಪುತಪ್ಪಾಗಿ ಸಮಾಜದೊಳಗೆ ಅಪಪ್ರಚಾರ ನಡೆಸುತ್ತಾ ಬರುತ್ತಿದ್ದಾರೆ ಆದರೆ ಅಂಬೇಡ್ಕರ್ ಅವರು ಎಲ್ಲಾ ವರ್ಗಗಳಿಗೂ ಸಾಮಾಜಿಕ ನ್ಯಾಯ ಸಿಗುವಂತೆ ಸಂವಿಧಾನ ರಚನೆ ಮಾಡಿದವರು.ದೇಶದ ಕಾನೂನು ಮಂತ್ರಿಯಾಗಿಯೂ ದೇಶದ ನಾಯಕನಾಗಿ ಮೂಡಿ ಬಂದವರು ಆದುದರಿಂದ ಅಂಬೇಡ್ಕರ್ ಎಲ್ಲರ ನಾಯಕ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.

ಅವರು ತಲ್ಲೂರು ಮತ್ತು ಸೇನಾಪುರದಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

1005039408

ಅಂಬೇಡ್ಕರ್ ಅವರು ಲೇಬರ್ ಪಾರ್ಟಿ ಸ್ಥಾಪಿಸಿ ಕಾರ್ಮಿಕರ ಕಾನೂನುಗಳ ಸುಧಾರಣೆ, ಕಾರ್ಮಿಕರ ಹಕ್ಕುಗಳಿಗಾಗಿ ಕೆಲಸ ಮಾಡಿರುವುದು ಅವರು ಕಾರ್ಮಿಕ ವರ್ಗದ ಪ್ರಬಲ ಪ್ರತಿಪಾದಕರು ಎಂಬುದನ್ನು ತೋರಿಸುತ್ತದೆ ಎಂದು ಹೇಳಿದರು.

Advertisements

ಇಂದು ಸರ್ಕಾರಗಳು ಇಂತಹ ಭಾರತೀಯ ಕಾರ್ಮಿಕ ಕಾನೂನುಗಳನ್ನು ದೇಶಿಯ ಹಾಗೂ ವಿದೇಶಿಯ ಕಾರ್ಪೋರೇಟ್ ಗಳಿಗೆ ಕಾರ್ಮಿಕರನ್ನು ಗುಲಾಮರಂತೆ ದುಡಿಸಲು ತಿದ್ದುಪಡಿ ಮಾಡುತ್ತಿದೆ ನೂತನ ಕಾರ್ಮಿಕ ಸಂಹಿತೆ ತರಲು ಹೊರಟಿರುವುದನ್ನು ಕಾರ್ಮಿಕ ವರ್ಗ ಸಹಿಸಲ್ಲ ಇದರ ವಿರುದ್ಧ ದೇಶದ ಹತ್ತು ಕಾರ್ಮಿಕ ಸಂಘಟನೆಗಳು ಮೇ 20 ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಲ್ಲೂರು ಕಟ್ಟಡ ಕಾರ್ಮಿಕರ ಘಟಕದ ಉಮೇಶ್,ಕ್ರಷ್ಣಯ್ಯ ಆಚಾರ್ಯ, ಸೇನಾಪುರ ಘಟಕದ ಪರಮೇಶ್ವರ, ಹೆರಿಯ, ಸುನೀಲ್, ಬಸವ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X