ಇತಿಹಾಸದ ಪುಟ ಸೇರಿದ ʼಅಂಬೇಡ್ಕರ್ ಗೀತೆʼಗಳು: ಪ್ರಶಂಸೆ ಗಳಿಸಿದ ಟೈಗರ್ ನಾಗ್

Date:

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಹೆಚ್ಚು ಮಹತ್ವ ಪಡೆಯುತ್ತಿರುವ ಈ ಹೊತ್ತಿನಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪರಿನಿಬ್ಬಾಣದ 69ನೇ ವರ್ಷದ ನೆನಪಿಗಾಗಿ, ಆಧುನಿಕ ತಂತ್ರಜ್ಞಾನ ಬಳಸಿ 69 ಅಂಬೇಡ್ಕರ್ ಗೀತೆಗಳನ್ನು ನಿರ್ಮಿಸಿರುವ ಪತ್ರಕರ್ತ ಸಾಮಾಜಿಕ ಹೋರಾಟಗಾರ, ಹಾಗೂ ನಟ ನಿರ್ದೇಶಕ ಟೈಗರ್ ನಾಗ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಹಸ್ತದಿಂದ 69 ಗೀತೆಗಳನ್ನೂ ಏಕಕಾಲದಲ್ಲಿ ಬಿಡುಗಡೆ ಮಾಡಿಸಿ ದಾಖಲೆ ನಿರ್ಮಿಸಿದ್ದಾರೆ.

- Advertisement -

ವಿಧಾನಸೌಧ ಆವರಣದ ಅಂಬೇಡ್ಕರ್ ಪ್ರತಿಮೆಯ ಮುಂಬಾಗದಲ್ಲಿ ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣದ ದಿನದಂದು ನಡೆದ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಸಚಿವ ಜಮೀರ್ ಆಹಮದ್ ಇವರ ಸಮ್ಮುಖದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರು ಟೈಗರ್ ನಾಗ್ ಅವರನ್ನು ಮುಖ್ಯಮಂತ್ರಿಗಳಿಗೆ ಪರಿಚಯಿಸಿದರು. ಮುಖ್ಯಮಂತ್ರಿಗಳು ಟೈಗರ್ ನಾಗ್ ಅವರ ಪ್ರಯತ್ನವನ್ನು ಪ್ರೋತ್ಸಾಹಿಸಿ ಇಂತಹ ಕೆಲಸಗಳಿಗೆ ನಮ್ಮ ಸರ್ಕಾರದಿಂದ ಎಲ್ಲ ರೀತಿಯ ಸಹಕಾರ ಪ್ರೋತ್ಸಾಹ ನೀಡಲಾಗುವುದು ಎಂದರು.

ಟೈಗರ್ ನಾಗ್ ಅವರು ಮೂಲತಃ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಗ್ರಾಮದವರು. ರಾಜ್ಯಾದ್ಯಂತ ಹಲವು ಜನಪರ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಪಿಡಿಒಗಳಿಂದ ಐಎಎಸ್ ಅಧಿಕಾರಿಗಳವರೆಗೆ ಲೋಕಾಯುಕ್ತ, ಎಸಿಬಿ, ಸಿಬಿಐ, ಟ್ರ್ಯಾಪ್ ಮಾಡಿಸಿ ಭ್ರಷ್ಟ ವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದ್ದಾರೆ. ಇವರು ಕರ್ನಾಟಕದ ಸೆನ್ಸರ್ ಆಫೀಸರ್ ವಿರುದ್ಧವೂ ಹೋರಾಟ ಮಾಡಿ ಸಿಬಿಐ ಟ್ರ್ಯಾಪ್ ಮಾಡಿಸಿದ ಪ್ರಕರಣ ದೇಶಾದ್ಯಂತ ಸುದ್ದಿ ಆಯಿತು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಮಹಿಳೆಯರಿಗೆ ಕಾನೂನು ಅರಿವು ಇರಬೇಕು: ರವಿ ಓಲೇಕಾರ

ಅಲ್ಲದೆ, ಇವರು ಅಡವಿ ಎಂಬ ಚಿತ್ರವನ್ನು ನಿರ್ದೇಶನ ನಿರ್ಮಾಣ ಮಾಡಿ, ಈಗ ʼಭೀಮರಾವ್ ಅಂಬೇಡ್ಕರ್ ಕೊನೆಯ ದಿನಗಳುʼ ಎಂಬ ಸಿನಿಮಾ ಮಾಡಲು ತಯಾರಾಗಿದ್ದಾರೆ. ಭಾರತದ ಇತಿಹಾಸದಲ್ಲಿ ಯಾರೂ ಮಾಡಿರದ ಪ್ರಯತ್ನಕ್ಕೆ ಟೈಗರ್ ಮುಂದಾಗಿದ್ದಾರೆ. ಡಾ. ಬಿಆರ್ ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದ ಅಂಗವಾಗಿ 69 ಗೀತೆಗಳನ್ನು ರಚಿಸಿ ಸಂಗೀತ ಸಂಯೋಜನೆ ಮಾಡಿ ಮಾನ್ಯ ಮುಖ್ಯಮಂತ್ರಿಯವರಿಂದ ಬಿಡುಗಡೆ ಮಾಡಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಪಿ. ಮೂರ್ತಿ, ಭೀಮ್ ಆರ್ಮಿ ರಾಜ್ಯ ಅಧ್ಯಕ್ಷ ರಾಜಗೋಪಾಲ್, ಪ್ರಗತಿಪರ ಚಿಂತಕಿ ಮಧು ಹೊಲೆಯಾರ್ ಸೇರಿದಂತೆ ಇನ್ನಿತರ ಪ್ರಗತಿಪರ, ದಲಿತಪರ ಹೋರಾಟಗಾರರು, ಚಿಂತಕರು, ಸಾಹಿತಿಗಳು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ತ್ರೀ ಸಬಲೀಕರಣಕ್ಕೆ ರಾಣಿ ಚನ್ನಮ್ಮನ ಜೀವನ, ಹೋರಾಟವೇ ಪ್ರೇರಣೆ: ಪ್ರೊ. ಸಿ.ಎಂ ತ್ಯಾಗರಾಜ

ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರು ಪ್ರತಿಪಾದಿಸಿದ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ...

ಬಾಗಲಕೋಟೆ | ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ರಾಷ್ಟ್ರಮಟ್ಟದ ಸಾಧನೆಗೆ ಸಚಿವ ಕಾಶಪ್ಪನವರ ಕರೆ

ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ...

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ...

ರಾಯಚೂರು | ಮಳೆಗಾಲ ಮುಗಿಯುವ ಮುನ್ನವೇ ಬಿಸಿಲಿನ ತಾಪ; ರಾಯಚೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ

ಸೆಪ್ಟೆಂಬರ್‌ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್‌ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ...