ಬೀದರ್‌ | ಕೆಕೆಆರ್‌ಟಿಸಿ ಬಸ್‌ ನಿಲುಗಡೆಗೆ ಅಂಬೇಡ್ಕರ್‌ ಯುವ ಸೇನೆ ಆಗ್ರಹ

Date:

ಬೀದರ್‌ ಜಿಲ್ಲಾ ಕೇಂದ್ರದಿಂದ ಔರಾದ್‌ ತಾಲ್ಲೂಕಿಗೆ ಹೊರಡುವ ಕೆಕೆಆರ್‌ಟಿಸಿ ಬಸ್‌ಗಳನ್ನು ಸಂತಪೂರ ಹಾಗೂ ಜನವಾಡ ಗ್ರಾಮಗಳಲ್ಲಿ ನಿಲುಗಡೆ ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್‌ ಯುವ ಸೇನೆ ಜಿಲ್ಲಾ ಘಟಕ ಆಗ್ರಹಿಸಿದೆ.

- Advertisement -

ಈ ಸಂಬಂಧ ಸೇನೆಯ ಪದಾಧಿಕಾರಿಗಳು ಬುಧವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ ಫುಲೆಕರ್‌ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ʼಬೀದರ್‌ದಿಂದ ಔರಾದ್‌ ತಾಲ್ಲೂಕು ಕೇಂದ್ರಕ್ಕೆ ಹೊರಡುವ ಸಾರಿಗೆ ಬಸ್‌ಗಳು ಜನವಾಡ ಹಾಗೂ ಸಂತಪೂರ ಗ್ರಾಮಗಳಲ್ಲಿ ನಿಲುಗಡೆ ಮಾಡುತ್ತಿಲ್ಲ. ಇದರಿಂದ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬಸ್‌ ಪಾಸ್‌ ಇರುವ ವಿದ್ಯಾರ್ಥಿಗಳು ಖಾಸಗಿ ಬಸ್‌ಗಳಿಗೆ ತೆರಳಬೇಕಾದಂತಹ ಸ್ಥಿತಿ ಬಂದಿದೆʼ ಎಂದು ಹೇಳಿದರು.

ಬೀದರ್-ಔರಾದ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ಗ್ರಾಮಗಳಾದ ಜನವಾಡ ಮತ್ತು ಸಂತಪೂರದಿಂದ ದಿನಾಲೂ ನೂರಾರು ಪ್ರಯಾಣಿಕರು, ವಿದ್ಯಾರ್ಥಿಗಳು ಜಿಲ್ಲಾ, ತಾಲ್ಲೂಕು ಕೇಂದ್ರಗಳಿಗೆ ತೆರಳುತ್ತಾರೆ. ಹೀಗಾಗಿ ಕೂಡಲೇ ಕೆಕೆಆರ್‌ಟಿಸಿ ಎಲ್ಲ ಬಸ್‌ಗಳನ್ನು ಸಂತಪೂರ, ಜನವಾಡ ಗ್ರಾಮಗಳಲ್ಲಿ ನಿಲುಗಡೆ ಮಾಡಲು ಆದೇಶಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ |‌ ಸಾಲದ ಹೊರೆ : ಒಂದೇ ದಿನ ಇಬ್ಬರು ರೈತರ ಆತ್ಮಹತ್ಯೆ

ಈ ಸಂದರ್ಭದಲ್ಲಿ ಅಂಬೇಡ್ಕರ್‌ ಯುವ ಸೇನೆ ರಾಜ್ಯಾಧ್ಯಕ್ಷ ರಾಜಕುಮಾರ್‌ ಗುನ್ನಳ್ಳಿ, ಜಿಲ್ಲಾಧ್ಯಕ್ಷ ನಿತೀಶ ಉಪ್ಪೆ, ಉಪಾಧ್ಯಕ್ಷರಾದ ಲಕ್ಷ್ಮಣ ಚಕ್ರವರ್ತಿ, ಕುಮಾರ್‌ ಕಾಂತೆ, ಜಿಲ್ಲಾ ಕಾರ್ಯದರ್ಶಿ ನ್ಯೂಟಲ್‌ ಮಾರ್ಕ್‌, ಔರಾದ್‌ ತಾಲ್ಲೂಕಾಧ್ಯಕ್ಷ ಭೀಮರಾವ್‌ ಭಾವಿಕಟ್ಟಿ, ತಾಲ್ಲೂಕು ಉಪಾಧ್ಯಕ್ಷ ದಿಲೀಪ ಮೇತ್ರೆ ಸೇರಿದಂತೆ ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...