ಉಡುಪಿ | ಕಡಲ ತೀರದ ದಲಿತ ಕುಟುಂಬಗಳ ತೆರವು ಮಾಡದಂತೆ ಜಿಲ್ಲಾಧಿಕಾರಿಗೆ ಮನವಿ

Date:

Advertisements
  • ದಶಕಗಳಿಂದ ವಾಸವಿರುವ ಬಡ ದಲಿತ ಕುಟುಂಬಗಳಿಗೆ ನೋಟಿಸ್
  • ಬಂದರು ಸುತ್ತುಮುತ್ತ ಅತಿಕ್ರಮಣ ಮಾಡಿಕೊಂಡುರೂ ಕ್ರಮವಿಲ್ಲ

ಉಡುಪಿ ಜಿಲ್ಲೆಯ ಮಲ್ಪೆ ಕಡಲ ತೀರದ ಪೂರ್ವ ಭಾಗದ ತೀರ ಪ್ರದೇಶದಲ್ಲಿರುವ ಹಲವು ಬಡ ದಲಿತ ಕುಟುಂಬಗಳ ಮನೆ ತರವುಗೊಳಿಸಲು ಮಲ್ಪೆ ಅಭಿವೃದ್ಧಿ ಸಮಿತಿಯ ಹೆಸರಿನಲ್ಲಿ ಉಡುಪಿ ನಗರಸಭೆಯ ಪೌರಾಯುಕ್ತರು ನೀಡಿರುವ ನೊಟೀಸ್‌ ವಿರೋಧಿಸಿ ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

“ಕಳೆದ ಹಲವು ದಶಕಗಳಿಂದ ಸಮುದ್ರ ತೀರ ಪ್ರದೇಶದಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿರುವ ದಲಿತ ಕುಟುಂಬಗಳಿಗೆ ಏಕಾಏಕಿ ಸಿಆರ್‌ಝಡ್ ನಿಯಮ ಮತ್ತು ಮುನ್ಸಿಪಾಲ್ ಆಕ್ಟ್ ಅನ್ವಯ ಕಾನೂನು ಬಾಹಿರ ಮನೆ ಎಂದು ನೊಟೀಸು ಜಾರಿಗೊಳಿಸಲಾಗಿದೆ. ಆದರೆ, ಇದೇ ಕರಾವಳಿ ಬಂದರು ಪ್ರದೇಶದ ಸುತ್ತುಮುತ್ತ ಅತಿಕ್ರಮಣ ಮಾಡಿಕೊಂಡು ದೊಡ್ಡ ದೊಡ್ಡ ಮನೆ, ರೆಸಾರ್ಟ್, ಅಂಗಡಿ ಇತ್ಯಾದಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲ. ಕೇವಲ ದಲಿತ ಕುಟುಂಬದ ಮೇಲೆ ನೊಟೀಸ್ ನೀಡಿ ದೌರ್ಜನ್ಯ ನಡೆಸಲಾಗುತ್ತಿದೆ” ಎಂದು ಜನಪರ ಹೋರಾಟಗಾರ ಜಯನ್ ಮಲ್ಪೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಇಲ್ಲಿ ವಾಸವಿರುವ ದಲಿತ ಕುಟುಂಬಗಳು ಮನೆ ನಂಬರ್‌, ಆಧಾರ್ ಕಾರ್ಡ್, ರೇಶನ್ ಕಾರ್ಡ್, ವಿದ್ಯುತ್‌ ಸಂಪರ್ಕ ಎಲ್ಲ ಕಾನೂನುಬದ್ಧವಾಗಿ ಪಡೆದಿದ್ದರೂ, ಅನದಿಕೃತ ಎಂಬ ನಿಯಮದಡಿ ಈ ಬಡ ದಲಿತ ಕುಟುಂಬಗಳನ್ನು ತೆರವುಗೊಳಿಸುವ ನೊಟೀಸ್ ನೀಡಿ ಭಯ ಹುಟ್ಟಿಸಲಾಗಿದೆ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಮಸೂದ್, ನೆಟ್ಟಾರು, ಫಾಸಿಲ್ ಕುಟುಂಬಕ್ಕೆ ಸಾಮಾಜಿಕ ನ್ಯಾಯ ಒದಗಿಸಿ; ಸರ್ಕಾರಕ್ಕೆ ಶಾಹಿದ್ ತೆಕ್ಕಿಲ್ ಮನವಿ

“ಜಿಲ್ಲಾಧಿಕಾರಿ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಬಡ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸಬಾರದು” ಎಂದು ಒತ್ತಾಯಿಸಿದರು.

ಈ ವೇಳೆ ಜನಪರ ಹೋರಾಟಗಾರ ಜಯನ್ ಮಲ್ಪೆ, ಅಂಬೇಡ್ಕರ್ ಯುವಸೇನೆಯ ಜಿಲ್ಲಾ ಅಧ್ಯಕ್ಷ ಹರೀಶ್ ಸಾಲ್ಯಾನ್, ಮುಖಂಡರಾದ ಗಣೇಶ್ ನೆರ್ಗಿ, ಸಂತೋಷ್ ಕಪ್ಪೆಟ್ಟು, ಕೃಷ್ಣ ಶ್ರೀಯಾನ್ ಮಲ್ಪೆ, ಗುಣವಂತ ತೊಟ್ಟಂ, ಪ್ರಸಾದ್, ಗೀತಾ, ಸಂಕಿ, ಜಲಜ, ಲಲಿಗ್ಫಿ, ಸುಂದರಿ ಹಾಗೂ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X