ಬೀದರ್‌ |‌ ಸಾಮಾಜಿಕ ಅಸಮಾನತೆ ನಿವಾರಣೆಗೆ ಅಂಬೇಡ್ಕರ್‌ ಕೊಡುಗೆ ಅಪಾರ : ಪ್ರೇಮಸಾಗರ ದಾಂಡೇಕರ್

Date:

ಡಾ.ಬಿ.ಆರ್. ಅಂಬೇಡ್ಕರ್‌ ಅವರು ದೇಶ ವಿದೇಶಗಳಲ್ಲಿ ಅಧ್ಯಯನ ನಡೆಸಿ ಸಮಾಜದಲ್ಲಿರುವ ಅಸಮಾನತೆ ನಿವಾರಣೆ ಮತ್ತು ಮಹಿಳೆಯರಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನವನ್ನು ನೀಡುವ ಸಲುವಾಗಿ ಹೋರಾಡಿದ ಧೀಮಂತ ನಾಯಕ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರೇಮಸಾಗರ ದಾಂಡೇಕರ ಹೇಳಿದರು.
ಬೀದರ ನಗರದ ಬಿವಿಬಿ ಕಾಲೇಜು ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಿ.ವಿ ಭೂಮರೆಡ್ಡಿ ಪದವಿ ಮಹಾವಿದ್ಯಾಲಯ ಹಾಗೂ ಬೀದರ ಆಂತರಿಕ ಗುಣಮಟ್ಟ ಭರವಸೆ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 2023-24ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ “ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಓದು” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
“ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಜೀವನ ಓದು ಓದಿನಲ್ಲೆ ಅವರ ಜೀವನ ಕಳೆದು ಹೋಗಿದೆ.
ಬಡತನದಲ್ಲಿ ಹುಟ್ಟಿದ ಮಾಣಿಕ್ಯ ಪುಸ್ತಕವೇ ತಮ್ಮ ಜೀವಾಳ ಮಾಡಿಕೊಂಡ ಶ್ರೇಷ್ಠ ವ್ಯಕ್ತಿ ಅವರಾಗಿದ್ದರು” ಎಂದು ನುಡಿದರು.
ಘೋಡಂಪಳ್ಳಿ ಅಟಲ್ ಬಿಹಾರಿ ವಾಜಪೇಯಿ ವಸತಿ ಕಾಲೇಜಿನ ಕನ್ನಡ ಉಪನ್ಯಾಸಕ ದೇವಿದಾಸ ಜೋಶಿ ಮಾತನಾಡಿ, “ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ.ಬಿ.ಆರ್. ಅಂಬೇಡ್ಕರ ಅವರ ಬದುಕು ಬರಹ ಜೀವನದ ಕುರಿತು ಇವತ್ತಿನ ಯುವ ಪೀಳಿಗೆಗೆ ತಿಳಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ” ಎಂದರು.
ಬಿವಿಬಿ ಪದವಿ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಹಣಮಂತಪ್ಪ ಬಿ. ಸೇಡಂಕರ್ ಡಾ. ಬಾಬಾ ಸಾಹೇಬ ಅಂಬೇಡ್ಕರವರ ಜೀವನ ಕುರಿತು ವಿಶೇಷ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ ದ್ವೀತಿಯ ತೃತೀಯ ಮತ್ತು ಸಮಾಧಾನಕರ ಬಹುಮಾನವನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಬಿವಿಬಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಪಿ.ವಿಠಲರೆಡ್ಡಿ, ನಿರ್ಣಯಕರಾದ ರೇಣುಕಾ ಮಳ್ಳಿ, ಬಸವರಾಜ,  ಉಪ ಪ್ರಾಂಶುಪಾಲ ಅನಿಲಕುಮಾರ ಆಣದೂರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...