ಬೆಂಗಳೂರು | ಭೀಕರ ಅಪಘಾತ: ಆ್ಯಂಬುಲೆನ್ಸ್ ಡಿಕ್ಕಿ ಹೊಡೆದು ದಂಪತಿ ಸಾವು

Date:

ಅತಿ ವೇಗವಾಗಿ ಸಾಗುತ್ತಿದ್ದ ಆ್ಯಂಬುಲೆನ್ಸ್ ಎರಡು ಸ್ಕೂಟರ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಬೆಂಗಳೂರು ನಗರದ ವಿಲ್ಸನ್ ಗಾರ್ಡನ್‌ನ ಜನನಿಬಿಡ ಕೆಎಚ್ ಜಂಕ್ಷನ್‌ನಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಚಾಲಕ ಅತಿ ವೇಗವಾಗಿ ಮತ್ತು ಅಜಾಗರೂಕತೆಯಿಂದ ಆ್ಯಂಬುಲೆನ್ಸ್ ಚಲಾಯಿಸುತ್ತಿದ್ದ ಎಂದು ಹೇಳಲಾಗಿದೆ.

- Advertisement -

ಪ್ರತ್ಯಕ್ಷದರ್ಶಿಯೊಬ್ಬರು ಸಲ್ಲಿಸಿದ ದೂರಿನ ಪ್ರಕಾರ, ಆ್ಯಂಬುಲೆನ್ಸ್ ಶಾಂತಿನಗರ ಕಡೆಯಿಂದ ಲಾಲ್‌ಬಾಗ್ ಕಡೆಗೆ ವೇಗವಾಗಿ ಸಾಗಿದ್ದು, ಇಸ್ಮಾಯಿಲ್ ನಥನ್ ದಬಾಪು (40) ಮತ್ತು ಅವರ ಪತ್ನಿ ಹಿಂಬದಿ ಸವಾರರಾಗಿದ್ದ ಸಮೀನಾ ಬಾನು (33) ಸಾಗುತ್ತಿದ್ದ ಸುಜುಕಿ ಆಕ್ಸೆಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನು ಓದಿದ್ದೀರಾ? ಬೆಳಗಾವಿ : ಭೀಕರ ಅಪಘಾತ ಇಬ್ಬರು ಸಾವು

ಈ ವೇಳೆ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿದ್ದು ಮೊಹಮ್ಮದ್ ರಯಾನ್ (29) ಮತ್ತು ಹಿಂಬದಿ ಸವಾರ ಮೊಹಮ್ಮದ್ ಸಿದ್ದಿಕ್ (32) ಸಾಗುತ್ತಿದ್ದ ಹೋಂಡಾ ಡಿಯೋ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಎರಡೂ ದ್ವಿಚಕ್ರ ವಾಹನಗಳು ನೆಲಕ್ಕೆ ಉರುಳಿದೆ. ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಪಾದಚಾರಿ ರಸ್ತೆಯಲ್ಲಿರುವ ಟ್ರಾಫಿಕ್ ಸಿಗ್ನಲ್ ಆಪರೇಟರ್ ಬಾಕ್ಸ್‌ಗೆ ಡಿಕ್ಕಿ ಹೊಡೆದು ನಿಂತಿದೆ.

ಈ ಘಟನೆ ಬೆನ್ನಲ್ಲೇ ಚಾಲಕ ಪರಾರಿಯಾಗಿದ್ದು, ಪೊಲೀಸರು ಭಾನುವಾರ ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆಕ್ರೋಶಗೊಂಡ ಸ್ಥಳೀಯರು ಆ್ಯಂಬುಲೆನ್ಸ್ ಅನ್ನು ತಳ್ಳಿ ಮಗುಚಿಹಾಕಿದ್ದಾರೆ.

ಇನ್ನು ಗಂಭೀರವಾಗಿ ಗಾಯಗೊಂಡಿದ್ದ ದಂಪತಿಗಳಿಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ದಬಾಪು ಸ್ವಲ್ಪ ಸಮಯದ ನಂತರ ಮೃತಪಟ್ಟಿದ್ದಾರೆ. ಇನ್ನು ತಲೆಗೆ ತೀವ್ರ ಪೆಟ್ಟಾಗಿದ್ದ ಸಮೀನಾ ಬಾನು ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ. ರಯಾನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದು, ಸಿದ್ದಿಕ್ ಇನ್ನೂ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟನೆಯಲ್ಲಿದ್ದಾರೆ.

ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸರು ಆ್ಯಂಬುಲೆನ್ಸ್ ಚಾಲಕನ ವಿರುದ್ಧ ನಿರ್ಲಕ್ಷ್ಯ, ಅಜಾಗರೂಕತೆ ಚಾಲನೆ ಮಾಡಿ ಸಾವಿಗೆ ಕಾರಣವಾಗಿದ್ದು ಸೇರಿದಂತೆ ಹಲವು ವಿಭಾಗಗಳ ಅಡಿಯಲ್ಲಿ ಮತ್ತು ಮೋಟಾರು ವಾಹನ ಕಾಯ್ದೆಯ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...