ಬೀದರ್‌ | ಅಂಬೇಡ್ಕರ್‌ರನ್ನು ಅವಮಾನಿಸಿದ ಅಮಿತ್‌ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಎನ್‌ಎಸ್‌ಯುಐ

Date:

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯು ಈಗ ಭಾರೀ ವಿವಾದ ಸೃಷ್ಟಿಸಿದೆ. ಗೃಹ ಸಚಿವರ ಈ ಹೇಳಿಕೆ ಖಂಡಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಪದಾಧಿಕಾರಿಗಳು ಬೀದರ್‌ನಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ನಗರದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದ ಬಳಿ ಜಮಾಯಿಸಿದ ಒಕ್ಕೂಟದ ಪ್ರಮುಖರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಅಂಬೇಡ್ಕರ್ ವಿರುದ್ಧದ ಹೇಳಿಕೆ ನೀಡಿದ ಅಮಿತ್ ಶಾ ಕೂಡಲೇ ಕ್ಷಮೆಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅಮಿತ್‌ ಶಾ ತಮ್ಮ ಭಾಷಣದಲ್ಲಿ ʼಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಎನ್ನುವುದು ಈಗ ಒಂದು ಫ್ಯಾಷನ್ ಆಗಿಬಿಟ್ಟಿದೆ. ನೀವು ಇಷ್ಟು ಸಲ ದೇವರ ಹೆಸರು ತೆಗೆದುಕೊಂಡಿದ್ದರೆ, ಏಳೇಳು ಜನ್ಮಗಳಲ್ಲಿ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು” ಎಂದು ಹೇಳಿದ್ದು ಖಂಡನೀಯವಾಗಿದೆ. ದೇಶದ ಅಸ್ಪೃಶ್ಯರು, ಮಹಿಳೆಯರು ಮತ್ತು ಶೋಷಿತ ವರ್ಗಗಳಿಗೆ ಮಾನವೀಯ ಬದುಕಿಗೆ ಸಂವಿಧಾನ ನೀಡಿದ ಬಾಬಾ ಸಾಹೇಬರನ್ನು ಅಪಮಾನಿಸಿದ್ದ ಸಹಿಸುವುದಿಲ್ಲ. ಇದರಿಂದ ದೇಶದ ಕೋಟ್ಯಾಂತರ ಅಂಬೇಡ್ಕರ್ ಅನುಯಾಯಿಗಳಿಗೆ ನೋವುಂಟು ಮಾಡಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಬೇಡ್ಕರ್‌ರನ್ನು ಅವಮಾನಿಸಿದ ಅಮಿತ್ ಶಾ ಕ್ಷಮೆಯಾಚನೆಗೆ ಆಗ್ರಹ

ಎನ್ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಫೀರೋಜ್ ಖಾನ್, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಸಂತೋಷಕುಮಾರ್ ಚಿಮಕೋಡೆ, ಉಪಾಧ್ಯಕ್ಷ ಮುಕೇಶ ಚಲ್ವಾ ಸೇರಿದಂತೆ ಒಕ್ಕೂಟದ ಪ್ರಮುಖರಾದ ಭೀಮರಾವ್ ಮಾಲಗತ್ತಿ, ಲೊಕೇಶ್ ದೊಮ್ಮೆ ವಿಶಾಲ್ ಕುದ್ರೆ, ಸಿದ್ದಾರ್ಥ ಭಾವಿದೊಡ್ಡಿ, ಇಮ್ರಾನ್ ಖಾನ್, ಗೌತಮ್ ಮುತ್ತಂಗಿಕರ್, ಸಚೀನ್ ಶೆಟಕಾರ್, ಆದಿತ್ಯ ದಂಡಿ, ಹಾಲಿದ್ ಪೈಲವಾನ್, ಸತೀಶ್, ರಾಜಕುಮಾರ್, ವಿಶಾಲ್, ಪ್ರಮೋದ್, ಪವನ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...