ಚಿಂತಾಮಣಿ ನಗರದ ಭವಿಷ್ಯ ಬದಲು ಮಾಡಲಿದೆ 850 ಎಕರೆ ಟೌನ್‌ಶಿಪ್ ಯೋಜನೆ!

Date:

ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿ ದೃಷ್ಟಿಯಿಂದ ನಗರಾಭಿವೃದ್ಧಿ ಚಿಂತಾಮಣಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಮಾರು 850 ಎಕರೆ ಪ್ರದೇಶದಲ್ಲಿ ನೂತನ ಟೌನ್‌ಶಿಪ್ ನಿರ್ಮಿಸುವ ಯೋಜನೆ ಕುರಿತು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

- Advertisement -

ಈಗಾಗಲೇ ಟೌನ್‌ಶಿಪ್ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯ ಸರ್ವೇ ಕಾರ್ಯ ಪೂರ್ಣಗೊಂಡಿದ್ದು ಯೋಜನೆಯನ್ನು ಅಂತಿಮ ರೂಪಕ್ಕೆ ತರಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಯೋಜನೆ ಕಾರ್ಯರೂಪಕ್ಕೆ ಬಂದಲ್ಲಿ ಚಿಂತಾಮಣಿ ನಗರದ ಅಭಿವೃದ್ಧಿಗೆ ಹೊಸ ವೇಗ ದೊರೆಯುವ ಜೊತೆಗೆ ಅಗತ್ಯ ಮೂಲ ಸೌಕರ್ಯ ಹಾಗೂ ಸುಸಜ್ಜಿತ ವಸತಿ ಮತ್ತು ನಾಗರಿಕ ಸೌಲಭ್ಯಗಳು ಒಂದೇ ಸೂರಿನಡಿ ಲಭ್ಯವಾಗಲಿವೆ ಎಂದು ವಿವರಿಸಿದರು.

ಯೋಜನೆಗೆ ಅಗತ್ಯವಿರುವ ಭೂಮಿ ವಶಪಡಿಸಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಸಹಕಾರ ಪಡೆದು ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.

ಚಿಂತಾಮಣಿಯನ್ನು ಯೋಜಿತ ನಗರವಾಗಿ ಅಭಿವೃದ್ಧಿಪಡಿಸುವುದು,ಭವಿಷ್ಯದ ಅಗತ್ಯಗಳಿಗೆ ತಕ್ಕಂತೆ ಮೂಲ ಸೌಕರ್ಯ ಕಲ್ಪಿಸುವುದು ಹಾಗೂ ಜನರಿಗೆ ಉತ್ತಮ ನಾಗರಿಕ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯತೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಶಾಸಕ ಡಾ.ಎಂ.ಸಿ. ಸುಧಾಕರ್,ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ರೆಡ್ಡಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ, ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತ ಶಿವಾನಂದ ಕಪಶಿ,ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪ್ರಭು,ಆಯುಕ್ತಾಲಯದ ನಿರ್ದೇಶಕ ತಿಪ್ಪೇಸ್ವಾಮಿ ಎನ್.ಕೆ.ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಾದಕ ದ್ರವ್ಯಮುಕ್ತ ಭಾರತ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಿ : ಪ್ರೊ. ನಿಕೇತನ

ಮಾದಕ ದ್ರವ್ಯಮುಕ್ತ ಭಾರತ ನಿರ್ಮಾಣದ ಉದ್ದೇಶದಿಂದ ಯುವಜನರಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ...

ಬಾಗಲಕೋಟೆ | 422 ಶಾಲಾ ಅಡುಗೆ ಕೋಣೆಗಳ ದುರಸ್ತಿ ಯಾವಾಗ? ಅಧಿಕಾರಿಗಳಿಗೆ ಸಿಇಒ ಗಜಾನನ ಬಾಲೆ ಚಾಟಿ

ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿನ ದುರಸ್ತಿ ಅಗತ್ಯವಿರುವ 422 ಅಡುಗೆ ಕೋಣೆಗಳ ಕಾಮಗಾರಿಗಳನ್ನು...

ಉಡುಪಿ | ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಪ್ರಾಣಾಪಾಯದಿಂದ ಪಾರು

ವೇಗವಾಗಿ ಬಂದ ಕೆಎಸ್ಆರ್‌ಟಿಸಿ ವೋಲ್ವೋ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ...

ಮುಂಡಗೋಡ | ನೀರು ತುಂಬಲು ಮೋಟಾರ್ ಹಾಕುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು

ಮನೆಯ ಮುಂದಿನ ನಳದಲ್ಲಿ ನೀರು ತುಂಬಲು ಮೋಟಾರ್ ಹಾಕುವಾಗ ವಿದ್ಯುತ್ ಸ್ಪರ್ಶಿಸಿ...