ತುಮಕೂರು ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ : ಯಲ್ಲೋ ಅಲರ್ಟ್ ಘೋಷಣೆ

Date:

Advertisements

ಭಾರತೀಯ ಹವಾಮಾನ ಇಲಾಖೆ ವರದಿಯಂತೆ ತುಮಕೂರು ಜಿಲ್ಲೆಯಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಗೂಗಲ್ ಮೀಟ್ ಮೂಲಕ ಮಾತನಾಡಿ ಮಳೆಯಿಂದ ಯಾವುದೇ ಜನ, ಜಾನುವಾರುಗಳಿಗೆ ಜೀವ ಹಾನಿಯಾಗದಂತೆ ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ನದಿದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಫೋಟೋ, ಸೆಲ್ಪಿಗಳನ್ನು ತೆಗೆಯದಂತೆ ಯುವಕ, ಯುವತಿಯರಿಗೆ ಮತ್ತು ಸಾರ್ವಜನಿಕರಿಗೆ ತಿಳಿ ಹೇಳಬೇಕು. ಭಾರಿ ಮಳೆ ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರಬೇಕು ಹಾಗೂ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಬೇಕು ಎಂದು ಗ್ರಾಮ ಆಡಳಿತ ಅಧಿಕಾರಿಗಳಿಗೆ ತಿಳಿಸಿದ್ದಾರೆ.

Advertisements

ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿದು ಸಾವು, ನೋವುಗಳು ಸಂಭವಿಸುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರುವಂತೆ ಮುನ್ನೆಚ್ಚರಿಕೆ ಕ್ರಮಕೈ ಗೊಳ್ಳಬೇಕು. ರಾಜ್ಯ, ಜಿಲ್ಲಾಡಳಿತ, ತಾಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳು ನೀಡುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಹೆಚ್ಚು ಪ್ರಚಾರ ಕೈಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶಸಿದ್ದಾರೆ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ ಸಂಖ್ಯೆ: 7304975519 ಅಥವಾ ದೂರವಾಣಿ ಸಂಖ್ಯೆ : 0816- 2213400, 0816-155304 ಅಥವಾ ವಾಟ್ಸಪ್ ಸಂಖ್ಯೆ: 7304975529ನ್ನು ಸಂಪರ್ಕಿಸಬೇಕೆಂದು ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂದು ಸೂಚನೆ ನೀಡಿದ್ದಾರೆ .

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X