ಚಿತ್ರದುರ್ಗ | ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಆಂಬುಲೆನ್ಸ್‌ ಡಿಕ್ಕಿ; ಮೂವರು ದುರ್ಮರಣ

Date:

ಚಿತ್ರದುರ್ಗ ಜಿಲ್ಲೆಯ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಡಿಕ್ಕಿ ಹೊಡೆದಿದೆ, ಆಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಆಂಬುಲೆನ್ಸ್ ಗುಜರಾತ್‌ನ ಅಹಮದಾಬಾದ್‌ನಿಂದ ತಮಿಳುನಾಡಿನ ತಿರುನಾಳವೇಲಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.

ಅಂಬುಲೆನ್ಸ್ ನಲ್ಲಿದ್ದ 72 ವರ್ಷದ ಕನಕಮಣಿ, 17 ವರ್ಷದ ಆಕಾಶ್ ಮತ್ತು ಅಂಬುಲೆನ್ಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಎಡಿಜಿಪಿ ಅಲೋಕ್‌ ಕುಮಾರ್‌ ಸೇರಿ ನಾಲ್ವರು ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬಂದ್ | ದಾವಣಗೆರೆ: ತಮಿಳುನಾಡಿ ನೀರು ಹರಿಸದಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ವಹಣಾ...

ಹಾವೇರಿ | ಕಾವೇರಿ ನೀರು ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಲಿ

ರಾಜ್ಯ ಸರ್ಕಾರ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯ ವಿವಿಧ ಸಂಘಟನೆಗಳ...

ಸರ್ಕಾರಗಳಿಂದ ಸಿಗದ ಸ್ಪಂದನೆ: ₹25 ಲಕ್ಷ ಸಂಗ್ರಹಿಸಿ ‘ಬ್ಯಾರಲ್ ಸೇತುವೆ’ ನಿರ್ಮಾಣಕ್ಕೆ ಹೊರಟ ರೈತರು!

ಈಜಿ ನದಿಯನ್ನು ದಾಟುತ್ತಿದ್ದ ರೈತರು; ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರಗಳು ಹಣ ಸಂಗ್ರಹಿಸಿ ಸೇತುವೆ...

ಕರ್ನಾಟಕ ಬಂದ್ | ಬೆಂಗಳೂರು: ಬುರ್ಖಾ ಧರಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

ಕರ್ನಾಟಕ ಬಂದ್‌ಗೆ ಬೆಂಗಳೂರಿನಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರು ಭಾಗಶಃ ಸ್ತಬ್ದವಾಗಿದೆ....