ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾರ್ಮಿರೊಬ್ಬರು ಮೃತಪಟ್ಟ ಘಟನೆ ಗುರುವಾರ ಜರುಗಿದೆ.
ಮಲ್ಲಪ್ಪ ತೊಗರಖೇಡೆ (58) ಮೃತ ಕಾರ್ಮಿಕ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಡಿ ಕೆಲಸ ಮಾಡುತ್ತಿದ್ದಾಗ ಪ್ರಜ್ಞೆತಪ್ಪಿ ಬಿದ್ದಿದ್ದ ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
ಬಿಸಿಲಿನ ಝಳದಿಂದ ಸಾವನಪ್ಪಿರುವ ಎಂಬ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ.
ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ತಾಲೂಕು ಪಂಚಾಯತ್ ಇಒ ರಮೇಶ ಸುಲ್ಫೆ ನೇತ್ರತ್ವದ ತಂಡ ಭೇಟಿ ನೀಡಿದ್ದರು.