ಶಿವಮೊಗ್ಗದಲ್ಲಿ ನಡೆದ 17 ವರ್ಷದ ವಯೋಮಿತಿ ಒಳಗಿನ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದಂತಹ ಸಾಗರ ತಾಲೂಕಿನ ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ..
4×100 ರಿಲೇಯಲ್ಲಿ ಬೃಂದಾ, ಐಶ್ವರ್ಯ, ದೀಪಿಕಾ, ಹಾಗೂ ಜೈಯ ಲಕ್ಷ್ಮಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಹಾಗೆಯೇ, 200 ಮೀಟರ್ ಓಟದಲ್ಲಿ ಹಾಗೂ 100 ಮೀಟರ್ ಓಟದಲ್ಲಿ ದೀಪಿಕಾ ದ್ವಿತೀಯ ಸ್ಥಾನ ಹಾಗೂ ತೃತೀಯ ಸ್ಥಾನ ಪಡೆದಿದ್ದು ಮತ್ತು ಜಯಲಕ್ಷ್ಮಿ 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಉತ್ತಮ ಹೆಸರನ್ನು ಸಹ ಕರ್ನಾಟಕ ಪಬ್ಲಿಕ್ ಸ್ಕೂಲ್ ಆನಂದಪುರ ಗಳಿಸಿದೆ.
ಇದನ್ನು ಓದಿದ್ದೀರಾ? ಗ್ರೌಂಡ್ ರಿಪೋರ್ಟ್ | ಕಡಕೋಳ ಗಲಭೆ: ಗ್ರಾಮವನ್ನೇ ತೊರೆದ 70ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು!
ಮುಂದಿನ ತಿಂಗಳು ಕೋಲಾರದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ವರದಿ: ಅಮಿತ್ ಆರ್, ಆನಂದಪುರ
