ದೀಪಾವಳಿ ಸಂಭ್ರಮದ ನಡುವೆ ಅಂದರ್-ಬಾಹರ್ ಜೂಜಾಟ: ಹೊನ್ನಾವರ, ಹಳಿಯಾಳದಲ್ಲಿ 10 ಮಂದಿ ವಶಕ್ಕೆ

Date:

ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಜಿಲ್ಲೆಯ ಹೊನ್ನಾವರ ಮತ್ತು ಹಳಿಯಾಳ ತಾಲೂಕುಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಂದರ್-ಬಾಹರ್ ಜೂಜಾಟ ಆಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಎರಡೂ ಪ್ರಕರಣಗಳಲ್ಲಿ ಒಟ್ಟು 10 ಮಂದಿಯನ್ನು ವಶಕ್ಕೆ ಪಡೆದು, ₹8,450 ನಗದು ಹಾಗೂ ಜೂಜಾಟಕ್ಕೆ ಬಳಸಿದ್ದ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಹೊನ್ನಾವರ ತಾಲೂಕಿನ ಹಳದಿಪುರ ಗ್ರಾಮದ ಸಾಲೀಕೇರಿ ಗುಂದ ಮಜರೆ ಸಮೀಪ ನವೆಂಬರ್ 8ರಂದು ರಾತ್ರಿ 7.05ರ ವೇಳೆಗೆ ಐವರು ಅಂದರ್-ಬಾಹರ್ ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಾಟದಲ್ಲಿ ತೊಡಗಿದ್ದ ಐವರನ್ನು ವಶಕ್ಕೆ ಪಡೆದಿದ್ದಾರೆ ₹3,150 ನಗದು, 52 ಇಸ್ಪೀಟ್ ಎಲೆಗಳು ಹಾಗೂ ಪ್ಲಾಸ್ಟಿಕ್ ಹಾಳೆಯನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಕೆ.ಪಿ. ಕಾಯ್ದೆಯ ಕಲಂ 87ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಭೋಯಾರ್ ಹರ್ಷಲ್ ನಾರಾಯಣರಾವ್ ನೇಮಕ

ಇನ್ನೊಂದು ಪ್ರಕರಣದಲ್ಲಿ ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಗೋಶಾಲೆ ಸಮೀಪ ನವೆಂಬರ್ 8ರಂದು ಸಂಜೆ 4.20ರ ವೇಳೆಗೆ ಐವರು ಅಂದರ್-ಬಾಹರ್ ಜೂಜಾಟ ಆಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಐವರನ್ನು ವಶಕ್ಕೆ ಪಡೆದು ₹5,300 ನಗದು, 52 ಇಸ್ಪೀಟ್ ಎಲೆಗಳು ಹಾಗೂ ಒಂದು ಪ್ಲಾಸ್ಟಿಕ್ ಹಾಳೆಯನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಕೆ.ಪಿ. ಕಾಯ್ದೆಯ ಕಲಂ 87ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕೆಲವರು ಹಬ್ಬದ ಸಂಭ್ರಮದಲ್ಲಿ ಇಂತಹ ಆಟಗಳಲ್ಲಿ ತೊಡಗುತ್ತಿರುವುದು ಕಂಡುಬರುತ್ತಿದೆ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಹಣ ಪಣಕ್ಕಿಟ್ಟು ಜೂಜಾಟ ಆಡುವುದು ಕಾನೂನುಬಾಹಿರವಾಗಿದ್ದು, ಇಂತಹ ಚಟುವಟಿಕೆಗಳ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು ಜೀವವಿತ್ತ ದೀಪಾವಳಿ!

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ,...

ಮಂಡ್ಯ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಹಾಗೂ ರೈತರ...

ದಕ್ಷಿಣ ಕನ್ನಡ | ಶತಮಾನದಷ್ಟು ಹಳೆಯ ಹಾಸ್ಟೆಲ್ ಕಟ್ಟಡ ನೆಲಸಮ

ಶತಮಾನ ಕಂಡ ಪಾರಂಪರಿಕ ಕಟ್ಟಡವೊಂದು ಇದೀಗ ಕಲ್ಲು-ಮಣ್ಣಿನ ರಾಶಿಯಾಗಿ ಮಾರ್ಪಟ್ಟಿದೆ. ನಗರದ...

ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಗೊಂದಲಕ್ಕೆ ತೆರೆ ಎಳೆಯಿರಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳ ದಿನಾಂಕ ಮತ್ತು ಮತದಾರರ...