ಆನೇಕಲ್ ತಾಲೂಕಿನ ಜಿಗಣಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ಕೆರೆ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳಲ್ಲಿ, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ತಾಲೂಕಿನ ಜಿಗಣಿ ಕೆರೆಯಲ್ಲಿ ಕಳೆದ ಎರಡು ದಿನಗಳಿಂದ ಮೊಸಳೆ ಕಾಣಿಸಿಕೊಳ್ಳುತ್ತಿದೆ. ಕೆರೆ ದಡದ ಮೇಲೆ ಮೊಸಳೆ ಮಲಗಿರುವ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಕೆರೆ ಸಮೀಪದ ನಿವಾಸಿಗಳು ಓಡಾಡಲು ಭಯಗೊಂಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಮೊಸಳೆ ಸೆರೆ ಹಿಡಿಯಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸರ್ಕಾರಿ ಶಾಲೆ ಶಿಕ್ಷಕಿ ನಿವೃತ್ತಿ; ಅಂಬೇಡ್ಕರ್ ಫೋಟೋ ನೀಡಿ, ಹಳೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ಈ ಸಂಬಂಧ ಜಿಗಣಿ ಪುರಸಭೆಯ ಮುಖ್ಯಾಧಿಕಾರಿ ರಾಜೇಶ್ ವಲಯ ಅರಣ್ಯಾಧಿಕಾರಿಗೆ ಮಾಹಿತಿ ನೀಡಿದ್ದು, ಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಎಚ್ಚರಿಕೆಯಿಂದ ಇರುವಂತೆ ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಪುರಸಭೆಯಿಂದ ಧ್ವನಿವರ್ಧಕದ ಮೂಲಕ ಎಚ್ಚರಿಕೆ ನೀಡಲಾಗಿದೆ.