ಉಡುಪಿ | ಅಂಗನವಾಡಿ ವಿವಿಧ ಹುದ್ದೆ; ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ

Date:

ಉಡುಪಿ ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 57 ಅಂಗನವಾಡಿ ಕಾರ್ಯಕರ್ತೆ ಹಾಗೂ 136 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 01ನೇ ಹಂತದಲ್ಲಿಯೇ “ಎಂಬ ಮೇಸೆಜ್ ಅವರುಗಳ ಮೊಬೈಲ್‌ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 400 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 156 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ.

- Advertisement -

ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿಸೆಂಬರ್ 26 ರಿಂದ 2025 ರ ಜನವರಿ 5 ರ ವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್ ನಲ್ಲಿ ಇಲಾಖಾ ವತಿಯಿಂದಲೇ ಅವಕಾಶ ನೀಡಿ ಸರ್ಕಾರವು ಆದೇಶಿಸಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಒಂದನೇ ಹಂತ- ಆನ್‌ಲೈನ್ ತಂತ್ರಾAಶದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡುವುದು, ಎರಡನೇ ಹಂತ – ತಮ್ಮ ಭಾವಚಿತ್ರ ಹಾಗೂ ಸಹಿಯನ್ನು ಅಪ್‌ಲೋಡ್ ಮಾಡುವುದು, ಮೂರನೇ ಹಂತ – ತಮ್ಮ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು ಹಾಗೂ ನಾಲ್ಕನೇ ಹಂತ – ತಮ್ಮ ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅಪೂರ್ಣವಾದ ಅರ್ಜಿಗಳ ಅರ್ಜಿ ಸಂಖ್ಯೆ ಹಾಗೂ ಇತರೆ ವಿವರಗಳನ್ನೊಳಗೊಂಡ ಮಾಹಿತಿಯು ಸಂಬAಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ಸೂಚನಾ ಫಲಕದಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...