ಬೆಂಗಳೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ

Date:

ಕಾಂಗ್ರೆಸ್‌ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಂತೆ ಅಂಗನವಾಡಿ ನೌಕರರಿಗೆ 15,000 ರೂ. ಗೌರವ ಧನ ನಿಗದಿ ಮಾಡಬೇಕು. ಅಂಗನವಾಡಿ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಇಪಿಎಫ್‌ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘ ಆಗ್ರಹಿಸಿದೆ.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಘಟನೆ ನೇತೃತ್ವದಲ್ಲಿ ಅಂಗನವಾಡಿ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ ನಡೆದಿದೆ. “ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸರ್ಕಾರದ ಸಿ ಮತ್ತು ಡಿ ಗ್ರೂಪ್ ನೌಕರರ ಸರಿಸಮ ಸ್ಥಾನಮಾನದ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ಸರ್ಕಾರ ಅವರನ್ನು ಸರ್ಕಾರಿ ನೌಕರರು ಅಥವಾ ಕಾರ್ಮಿಕರೆಂದು ಪರಿಗಣಿಸದೆ ಗೌರವಧನದ ಕಾರ್ಯಕರ್ತೆಯರೆಂದು ಪರಿಗಣಿಸಿದೆ. ಹೀಗಾಗಿ, ಅಂಗನವಾಡಿ ನೌಕರರು ಹಲವಾರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ” ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ

“ಸರ್ಕಾರಿ ನೌಕರರಿಗೆ ಅಥವಾ ಕಾರ್ಮಿಕರಿಗೆ ಸಿಗುತ್ತಿರುವ ಮಾಸಿಕ ವೇತನ, ನಿವೃತ್ತಿ ಪಿಂಚಣಿ ಸಹಿತ ಯಾವ ಸೌಕರ್ಯಗಳು ಅಂಗನವಾಡಿ ನೌಕರರಿಗೆ ಸಿಗುತ್ತಿಲ್ಲ. ಅಂಗನವಾಡಿ ಯೋಜನೆ ಆರಂಭವಾಗಿ 48 ವರ್ಷಗಳು ಕಳೆದರೂ ಅತ್ಯಂತ ಕಡಿಮೆ ಗೌರವ ಧನದಲ್ಲೇ ದುಡಿಯುವಂತಾಗಿದೆ. ದಿನನಿತ್ಯವೂ ಎಲ್ಲ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಾಗುತ್ತಿವೆ. ಸರ್ಕಾರ ಈಗ ನೀಡುತ್ತಿರುವ ಗೌರವಧನ ಕುಟುಂಬ ನಿರ್ವಹಣೆಗೆ ಸಾಕಾಗುತ್ತಿಲ್ಲ. ಕುಟುಂಬಗಳು ತೀವ್ರ ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿವೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಕಿಯರನ್ನು ಸಿ ಮತ್ತು ಡಿ ದರ್ಜೆಯ ನೌಕರರೆಂದು ರಾಜ್ಯ ಸರ್ಕಾರ ಘೋಷಿಸಬೇಕು. ಇಲ್ಲ ಈ ದರ್ಜೆಯ ಸರ್ಕಾರಿ ನೌಕರರ ಸರಿಸಮನಾಗಿ ವೇತನ ನೀಡಬೇಕು. ಇಲ್ಲದಿದ್ದರೆ, ಅಂತರರಾಷ್ಟ್ರೀಯ ಕಾರ್ಮಿಕ ಸಮ್ಮೇಳನ (ಐಎಲ್‌ಓ) ಹಾಗೂ ಭಾರತ ರಾಷ್ಟ್ರೀಯ ಕಾರ್ಮಿಕ ಸಮ್ಮೇಳನ (ಐಎಲ್‌ಸಿ)ಗಳು ರಚಿಸಿರುವ ವಿವಿಧ ಸಮಿತಿಗಳ ಶಿಫಾರಸ್ಸಿನಂತೆ ಕಾರ್ಮಿಕರೆಂದು ಪರಿಗಣಿಸಿ ಕಾರ್ಮಿಕ ಕಾಯ್ದೆಗಳ ಅಡಿಯಲ್ಲಿ ಸೌಲಭ್ಯಗಳನ್ನು ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

 • ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವ ಧನವನ್ನು 15,000 ರೂ.ಗೆ ಹೆಚ್ಚಿಸಬೇಕು.
 • ಸುಪ್ರೀಂಕೋರ್ಟ್ ಆದೇಶದಂತೆ ಅಂಗನವಾಡಿ ನೌಕರರಿಗೆ ಗ್ರಾಚೂಟಿ (ಉಪ ಧನ) ಹಣ ನೀಡಲು ಆದೇಶ ಹೊರಡಿಸಬೇಕು ಮತ್ತು ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡಬೇಕು.
 • ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಕ್ಷೇಮಾಭಿವೃದ್ಧಿ ನಿಧಿಯಿಂದ ಅವರ ವಿವಿಧ ಗಂಭೀರ ಕಾಯಿಲೆಗಳ ಚಿಕಿತ್ಸೆಗಳಿಗಾಗಿ ನೀಡುತ್ತಿರುವ ವೈದ್ಯಕೀಯ ವೆಚ್ಚಗಳ ಸಹಾಯ ಧನ ಹಲವಾರು ವರ್ಷಗಳಿಂದ ಪಾವತಿಯಾಗುತ್ತಿಲ್ಲ. ಕೂಡಲೇ ಪಾವತಿಸಲು ಕ್ರಮ ವಹಿಸಬೇಕು. ಸಹಾಯ ಧನವನ್ನು ಕನಿಷ್ಠ 2 ಲಕ್ಷ ರೂ.ಗಳಿಗೆ ಹೆಚ್ಚಿಸಬೇಕು.
 • ಈಗಾಗಲೇ ನಿವೃತ್ತಿಯಾದ ನೌಕರರಿಗೆ ರೂ. 50,000 ಮತ್ತು ರೂ. 30,000 ನಿವೃತ್ತಿ ಪರಿಹಾರ ಹಣ ಸಿಗುತ್ತಿಲ್ಲ. ಈ ಸಮಸ್ಯೆಯನ್ನು ಸರಿಪಡಿಸಿ ಸರಳವಾಗಿ ನಿವೃತ್ತಿ ಪರಿಹಾರ ಸಿಗುವಂತೆ ಕ್ರಮವಹಿಸಬೇಕು. ನೌಕರರನ್ನು ಸರ್ಕಾರದ ಪಿಂಚಣಿ ಯೋಜನೆಗೆ ಒಳಪಡಿಸಬೇಕು. ಅಲ್ಲಿಯವರೆಗೆ ನಿವೃತ್ತಿ ಪರಿಹಾರ ಇಡುಗಂಟು ರೂ. 5 ಲಕ್ಷಗಳಿಗೆ ನಿಗದಿ ಮಾಡಬೇಕು.
 • ಸೇವಾ ಹಿರಿತನವನ್ನು ಆಧರಿಸಿ 50% ಮತ್ತು ಮೆಂಟ್ ಆಧರಿಸಿ 50% ಮೇಲಿನ ಹುದ್ದೆಗೆ ಮುಂಬಡ್ತಿ ಹೊಂದಲು ಈ ಹಿಂದೆ ಇದ್ದ ಆದೇಶವನ್ನೇ ಮುಂದುವರಿಸಬೇಕು. ಹೊಸ ಆದೇಶವನ್ನು ಹಿಂಪಡೆಯಬೇಕು.
 • ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ, ಐಸಿಡಿಎಸ್ ಕೆಲಸಗಳನ್ನು ಹೊರತುಪಡಿಸಿ, ಇತರ ಇಲಾಖೆಗಳ ಹೆಚ್ಚುವರಿ ಕೆಲಸಗಳನ್ನು ನೀಡಬಾರದು. ಈಗ ಮಾಡುತ್ತಿರುವ ಹೆಚ್ಚುವರಿ ಕೆಲಸಗಳಿಂದ ಬಿಡುಗಡೆ ಮಾಡಬೇಕು.
 • ಪ್ರತಿ ತಿಂಗಳು 5ನೇ ತಾರಿಖಿನ ಒಳಗಾಗಿ ಮಾಸಿಕ ವೇತನ (ಗೌರವ ಧನ) ಪಾವತಿ ಮಾಡಬೇಕು.
 • ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಇಲಾಖೆಯಿಂದಲೇ ವರ್ಷಕ್ಕೆ ಎರಡು ಜೊತೆ ಸಮವಸ್ತ್ರ ನೀಡಬೇಕು.ಕಾರ್ಯಕರ್ತೆಯರ ಮೊಬೈಲ್‌ಗಳಿಗೆ ಕೂಡಲೇ ರೀಚಾರ್ಜ್ ಮಾಡಿಸಬೇಕು.
 •  ಮಾತೃಪೂರ್ಣ ಯೋಜನೆ ಫಲಾನುಭವಿಗಳಿಗೆ ಆಹಾರ ಪದಾರ್ಥಗಳನ್ನು ಮನೆಗೆ ನೀಡಲು ಆದೇಶ ಮಾಡಬೇಕು. ಮಾತೃ ವಂದನಾ, ಭಾಗ್ಯಲಕ್ಷ್ಮಿ ಕೆಲಸಗಳಿಗೆ ಹೆಚ್ಚುವರಿ ಗೌರವ ಧನ ನೀಡಬೇಕು.
 • ಐಸಿಡಿಎಸ್‌ನ ಮೂಲ ಯೋಜನೆಯನ್ನು ಎನ್‌ಇಪಿ-2020 ನೀತಿಯಂತೆ ಬದಲಾಯಿಸುವ ರಾಜ್ಯ ಸರ್ಕಾರದ ಕ್ರಮವನ್ನು ಕೈಬಿಡಬೇಕು. ಅಂಗನವಾಡಿ ಯೋಜನೆಯನ್ನು ಬಲಪಡಿಸಬೇಕು.
 • ಬೆಲೆ ಏರಿಕೆಯ ಇಂದಿನ ದರದಲ್ಲಿ ಅಂಗನವಾಡಿ ಕೇಂದ್ರಗಳ ಬಾಡಿಗೆ ದರ, ಮೊಟ್ಟೆ ದರ, ಸಾದಿಲ್ವಾರು, ಪ್ಲೆಕ್ಸ್‌ ಫಂಡ್ ಅನುದಾನ ಇತ್ಯಾದಿ ದರಗಳನ್ನು ಹೆಚ್ಚಿಸಬೇಕು. ಹಲವಾರು ತಿಂಗಳುಗಳ ಕಾಲ ಬಾಕಿ ಇರುವ ಹಣ ಪಾವತಿ ಮಾಡಬೇಕು. ಪ್ರತಿ ತಿಂಗಳು ಸಕಾಲದಲ್ಲಿ ಹಣ ಬಿಡುಗಡೆ ಮಾಡಬೇಕು.
 • ಅಂಗನವಾಡಿ ಕೇಂದ್ರಗಳಿಗೆ ಸಮರ್ಪಕ ಇಂಟರ್ನೆಟ್ ಸಂಪರ್ಕ ಸಹಿತ ಉತ್ತಮ ಗುಣಮಟ್ಟದ ಮೊಬೈಲ್ ಸೆಟ್ ಗಳು, ಶುದ್ಧ ಕುಡಿಯುವ ನೀರು, ಶೌಚಾಲಯ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು.
 • ವಿವಿಧ ಸರ್ವೇಗಳನ್ನು ಮೊಬೈಲ್ ಮೂಲಕ ಮಾಡಲು ಬಲವಂತ ಮಾಡುವುದನ್ನು ನಿಲ್ಲಿಸಿ, ಮೊಬೈಲ್‌ನಲ್ಲಿ ಸರ್ವೇ ಮಾಡಲು ಆಗದೇ ಇರುವುದಕ್ಕೆ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಲು ಕೂಡಲೇ ಯೂನಿಯನ್ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಸಮಸ್ಯೆಗಳನ್ನು ಇತ್ಯರ್ಥ ಪಡಿಸಬೇಕು.
 • ಇಲಾಖೆ ಆದೇಶದಲ್ಲಿ ಇರುವಷ್ಟು ಸಿಲೆಂಡರ್‌ಗಳನ್ನು ಅಂಗನವಡಿ ಕೇಂದ್ರಗಳಿಗೆ ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು.
 • ಹಲವಾರು ವರ್ಷಗಳಿಂದ ಖಾಲಿ ಇರುವ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಬೇಕು.
 • ಮಿನಿ ಅಂಗನವಾಡಿಗಳನ್ನು ಪೂರ್ಣ ಪ್ರಮಾಣದ ಅಂಗನವಾಡಿಗಳಾಗಿ ವಿಸ್ತರಿಸಬೇಕು.

ಪ್ರತಿಭಟನೆಯಲ್ಲಿ ಸಂಘಟನೆಯ ಅಧ್ಯಕ್ಷ ಕೆ ಸೋಮಶೇಖರ್ ಯಾದಗಿರಿ, ರಾಜ್ಯ ಕಾರ್ಯದರ್ಶಿ ಉಮಾದೇವಿ ಎಂ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೈಲು ಸೇರಿದ ಬಜರಂಗದಳ ಕಾರ್ಯಕರ್ತರನ್ನು ಭೇಟಿಯಾದ ಶೋಭಾ ಕರಂದ್ಲಾಜೆ

ಲವ್ ಜಿಹಾದ್​ ಪ್ರಕರಣದಲ್ಲಿ ​ಹಲ್ಲೆ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ಕಾರಾಗೃಹ ಸೇರಿರುವ...

ವಿಜಯಪುರ | ಫೆ.28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು...

ಬಾಗಲಕೋಟೆ | ಬೇಸಿಗೆಗೂ ಮುನ್ನವೇ ಬಿಸಿಲಿನ ಧಗೆ, ಮಣ್ಣಿನ ಮಡಕೆಗಳತ್ತ ಜನರ ಚಿತ್ತ

ಬೇಸಿಗೆಯ ಆರಂಭದಲ್ಲೇ ಬಿಸಿಲ ತಾಪಕ್ಕೆ ಉತ್ತರ ಕರ್ನಾಟಕದ ಜನ ಹೈರಾಣಾಗಿದ್ದು, ಬಾಗಲಕೋಟೆ...

ತುಮಕೂರು | ಪರಿಸರ ಉಳಿಸುವ ವಾಗ್ದಾನ ಪಕ್ಷಗಳ ಪ್ರಣಾಳಿಕೆ ಸೇರಲಿ: ಡಾ. ವಾಸು

ಆರೋಗ್ಯ ರಕ್ಷಣೆ ವ್ಯಕ್ತಿಗತವಾಗಿ ಉಳಿದಿಲ್ಲ. ಹಾಗಾಗಿ ವಾಯುಗುಣ ವೈಪರೀತ್ಯ ಮತ್ತು ಆರೋಗ್ಯದ...