ಶಿಡ್ಲಘಟ್ಟ ತಾಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯತಿಯ ತಿಪ್ಪೇನಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾಪನಾ ಮಹೋತ್ಸವದ 48 ದಿನದಂದು ಗ್ರಾಮದಲ್ಲಿ ಅದ್ದೂರಿಯಾಗಿ ದೀಪೋತ್ಸವ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ದೀಪೋತ್ಸವದ ಅಂಗವಾಗಿ ಸುಡುಬಿಸಿಲನ್ನು ಲೆಕ್ಕಿಸದೇ ದೀಪಗಳನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಿದ ಮಹಿಳಾ ಭಕ್ತರು, ತಿಪ್ಪೇನಹಳ್ಳಿಯಿಂದ ತುಮ್ಮನಹಳ್ಳಿವರೆಗೆ ಕಾಲ್ನಡಿಗೆಯಲ್ಲಿ ಬಂದು ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ದೀಪಗಳನ್ನು ಬೆಳಗಿಸಿ ಭಕ್ತಿ ಮೆರೆದರು.
ದೀಪೋತ್ಸವ ಕಾರ್ಯಕ್ರಮಕ್ಕೆ ಬಂದಿದ್ದ ಎಲ್ಲ ಭಕ್ತಾದಿಗಳಿಗೆ ಪ್ರಸಾದವನ್ನು ವಿತರಿಸಲಾಯಿತು. ದೀಪೋತ್ಸವದ ಅಂಗವಾಗಿ ದೇವರಿಗೆ ವಿಶೇಷ ಅಲಂಕಾರ ಮತ್ತು ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಬಳಿಕ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗಿಸಲಾಯಿತು.
ಇದನ್ನೂ ಓದಿ : ಚಿಕ್ಕಬಳ್ಳಾಪುರ | ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ
ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲಮ್ಮ ನಾಗರಾಜ್, ನರ್ಸರಿ ಲಕ್ಷ್ಮೀನಾರಾಯಣ, ಭರತ್ ಭೂಷಣ್, ಟಿ.ಆರ್.ಆನಂದ್, ಟಿಪಿ ವೆಂಕಟೇಶ್, ಟಿ.ವಿ. ದೇವರಾಜ್, ಟಿ.ವಿ.ನಾಗೇಶ್ ಹಿರಿಯರಾದ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.