ಅಂಕೋಲಾ | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್: ಓರ್ವ ಪ್ರಯಾಣಿಕ ಮೃತ್ಯು; ಐವರಿಗೆ ಗಾಯ

Date:

ಬೆಳ್ಳಂಬೆಳಗ್ಗೆ ಖಾಸಗಿ ಬಸ್​ವೊಂದು ಹಳ್ಳಕ್ಕೆ ಬಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಸೋಮವಾರ ಸಂಭವಿಸಿದೆ.

- Advertisement -

ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅಗಸೂರು ಬಳಿ ಖಾಸಗಿ ಸ್ಲೀಪರ್ ಬಸ್​​ ಚಾಲಕ‌ನ ನಿಯಂತ್ರಣ ತಪ್ಪಿ, ಸೇತುವೆಯಿಂದ ಹಳ್ಳಕ್ಕೆ ಅಡ್ಡಲಾಗಿ ಬಿದ್ದಿದೆ. ಬಸ್​​ನಲ್ಲಿದ್ದ 18 ಮಂದಿ ಪ್ರಯಾಣಿಕರ ಪೈಕಿ ಓರ್ವ ಮೃತಪಟ್ಟಿದ್ದು, ಐವರಿಗೆ ಗಂಭೀರ ಗಾಯಗಳಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಗಾಯಾಳುಗಳಿಗೆ ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೇನ್ ಮೂಲಕ ಬಸ್​ ಮೇಲಕ್ಕೆತ್ತಲು ಮುಂದಾಗಿದ್ದ ವೇಳೆ ಬಸ್ಸಿನಲ್ಲಿ ಸಿಲುಕಿದ್ದ ಓರ್ವ ಪ್ರಯಾಣಿಕ ಕೊನೆಯುಸಿರೆಳೆದಿರುವುದು ಕಂಡು ಬಂದಿದೆ. ಪ್ರಯಾಣಿಕನ ಶವವನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದ್ದು, ಆತ ಎಲ್ಲಿಯವನು ಎನ್ನುವ ಕುರಿತು ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಸೈಯದ್ ಜಾಕಿರ್ ಇನಾಮ್‌ದಾರ, ಆಂಬ್ಯುಲೆನ್ಸ್ ವಾಹನಗಳು ಹಾಗೂ ಸ್ಥಳೀಯರು ಮತ್ತು ದಾರಿಹೋಕರು ತಕ್ಷಣವೇ ನೆರವಿಗೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ. ಚಾಲಕನ ನಿರ್ಲಕ್ಷ್ಯ ಮತ್ತು ಅತಿ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ಎಸ್‌ಐಟಿ ಸೇರಲು ಇಬ್ಬರು ಐಪಿಎಸ್ ಅಧಿಕಾರಿಗಳು ಹಿಂದೇಟು, ಕಾರಣವೇನು?

ಬೆಂಗಳೂರಿನಿಂದ ಬರುತ್ತಿದ್ದ ಬಸ್​​ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಹೊರಟಿದ್ದು, ಬೆಳಗಿನ ಜಾವ ಅಗಸೂರು ಬಳಿ ನಿಯಂತ್ರಣ ತಪ್ಪಿ, ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಸ್ಥಳಕ್ಕೆ ಅಂಕೋಲಾ ಠಾಣೆ ಪೊಲೀಸರು ದೌಡಾಯಿಸಿದ್ದು, ಗಾಯಾಳುಗಳನ್ನು ಸ್ಥಳಾಂತರಿಸಿದ್ದಾರೆ. ಅಲ್ಲದೇ, ಬಸ್ ಮೇಲಕ್ಕೆತ್ತುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ಅಪಘಾತದ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಸರ್ಕಾರಿ ಶಾಲೆಗಳ ವಿಲೀನ ಕೈಬಿಡಿ, ಶಾಲೆ–ಅಂಗನವಾಡಿಗಳ ದುರಸ್ತಿಗೆ ಅನುದಾನ ಬಿಡುಗಡೆ ಮಾಡಿ: ರೈತ ಸಂಘ ಆಗ್ರಹ

ಖಾಸಗಿ ಶಾಲೆಗಳೊಂದಿಗೆ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಚಿಂತನೆ ಕೈಬಿಟ್ಟು, ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ...

ವಿಜಯಪುರ | ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆ; 186 ಅಧಿಕಾರಿಗಳಿಗೆ ದಂಡ!

ಮಾಹಿತಿ ಹಕ್ಕು ಕಾಯ್ದೆಯಡಿ ನಿಗದಿತ ಅವಧಿಯಲ್ಲಿ ಮಾಹಿತಿ ನೀಡದೆ ಕರ್ತವ್ಯ ಲೋಪ...

ಉಡುಪಿ | ನಾಡೋಜ ಡಾ. ಜಿ. ಶಂಕರ್ ಅವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಪ್ರದಾನ

ನಾಡೋಜ ಡಾ. ಜಿ. ಶಂಕರ್ ಅವರ ವ್ಯಕ್ತಿತ್ವ ವಿಭಿನ್ನವಾಗಿದ್ದು, ಸಮಾಜಕ್ಕಾಗಿ ತಮ್ಮ...

ಶಿವಮೊಗ್ಗ | ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್‌ ಜಿ.ಟಿ ನಿಟ್ಟಾಲಿ ನೇಮಕ

ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಐಎಎಸ್‌...